ಬ್ರೇಕಿಂಗ್ ನ್ಯೂಸ್
25-08-23 09:04 pm Mangalore Correspondent ಕ್ರೈಂ
ಉಳ್ಳಾಲ, ಆ.25: ಹಾಡಹಗಲೇ ಅಪರಿಚಿತ ಮಹಿಳೆಯೊಬ್ಬಳು ಒಂಟಿ ಮನೆಗೆ ನುಗ್ಗಿ ವೃದ್ಧೆಯನ್ನ ದಿಂಬಿನಿಂದ ಅದುಮಿಟ್ಟು ಕುತ್ತಿಗೆಯಲ್ಲಿದ್ದ 22 ಗ್ರಾಮ್ ಚಿನ್ನದ ಸರ ದರೋಡೆಗೈದು ಪರಾರಿಯಾಗಿರುವ ಘಟನೆ ಕುಂಪಲ ಮೂರುಕಟ್ಟೆ ಒಂದನೇ ಅಡ್ಡ ರಸ್ತೆಯ ಮಿತ್ರನಗರ ಎಂಬಲ್ಲಿ ನಡೆದಿದೆ.
ಮಿತ್ರನಗರದ ಒಂಟಿ ಮನೆ ನಿವಾಸಿ ಸುಶೀಲ(76) ಎಂಬವರ ಕತ್ತಿನಲ್ಲಿದ್ದ 22 ಗ್ರಾಮ್ ತೂಕದ ಹವಳ ಪೋಣಿತ ಚಿನ್ನದ ಸರವನ್ನ ದರೋಡೆಗೈಯಲಾಗಿದೆ. ಸುಶೀಲ ಅವರ ಪತಿ ಉಗ್ಗಪ್ಪ ಮೂಲ್ಯ ಅವರು ಕೆಲ ವರುಷಗಳ ಹಿಂದೆ ಸಾವನ್ನಪ್ಪಿದ್ದರು. ದಂಪತಿಗೆ ಮಕ್ಕಳಿರಲಿಲ್ಲ. ಹಾಗಾಗಿ ಸುಶೀಲ ಅವರು ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು.

ಇಂದು ಮಧ್ಯಾಹ್ನ 2.45 ರ ವೇಳೆ ಸುಶೀಲ ಅವರು ಮನೆಯ ಹಾಲ್ ನಲ್ಲಿ ಇದ್ದ ಮಂಚದಲ್ಲಿ ಗೋಡೆ ಕಡೆ ಮುಖ ಹಾಕಿ ಮಲಗಿದ್ದ ಸಂದರ್ಭ ಮಹಿಳೆಯೋರ್ವಳು ನುಗ್ಗಿದ್ದು ಮುಖಕ್ಕೆ ದಿಂಬನ್ನು ಅದುಮಿ ಸರವನ್ನು ದರೋಡೆಗೈದು ಪರಾರಿಯಾಗಿದ್ದಾಳೆ. ದರೋಡೆಗೈದ ಆಗಂತುಕ ಮಹಿಳೆ ಬಾಗಿಲಿನಿಂದ ಹೊರ ಓಡಿದಾಗ ಸುಶೀಲ ಅವರು ಮಹಿಳೆ ಚೂಡಿದಾರ್ ಧರಿಸಿದ್ದನ್ನ ಗಮನಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್, ಉಪ ನಿರೀಕ್ಷಕರಾದ ಶೀತಲ್ ಕುಮಾರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಿಜೆಪಿ ಮುಖಂಡ ಸತೀಶ್ ಕುಂಪಲ ಅವರು ಪೊಲೀಸರಲ್ಲಿ ಆರೋಪಿಯ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ಹಿಂದೆಯೂ ಸುಶೀಲ ಅವರ ಎರಡು ಚಿನ್ನದ ಬಳೆಗಳು ಕಳವಾಗಿದ್ದು ಪೊಲೀಸ್ ದೂರು ನೀಡಿರಲಿಲ್ಲ. ಸ್ಥಳೀಯ ನಿವಾಸಿ ಆರ್ಥಿಕ ಮುಗ್ಗಟ್ಟಿನಲ್ಲಿರುವ ಮಹಿಳೆಯ ಮೇಲೆಯೇ ಶಂಕೆಯಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
Elderly lonely woman robbed of 22 pavan gold at Kumpala in Mangalore. Police arrive at spot and are investigating the case.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm