ಬ್ರೇಕಿಂಗ್ ನ್ಯೂಸ್
27-08-23 10:56 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 27: ಮಂಗಳೂರು ನಗರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.
ಸುರತ್ಕಲ್ ತಡಂಬೈಲ್ ಪರಿಸರದ ಬೀಚ್ ರಸ್ತೆಯಲ್ಲಿ KA- 25-Z-2488 ನಂಬರಿನ ಬಿಳಿ ಬಣ್ಣದ ಕಾರಿನಲ್ಲಿ ಇಬ್ಬರು ವ್ಯಕ್ತಿಗಳು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಾಟಿಪಳ್ಳ ನಿವಾಸಿ ಶಾಕೀಬ್ @ ಶಬ್ಬು(33), ಚೊಕ್ಕಬೆಟ್ಟು ನಿವಾಸಿ ನಿಸಾರ್ ಹುಸೈನ್ @ ನಿಚ್ಚು(34) ಬಂಧಿತರು. ಆರೋಪಿಗಳ ವಶದಿಂದ ಒಟ್ಟು 52 ಗ್ರಾಂ ತೂಕದ ರೂ. 2,60,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ವೋಕ್ಸ್ ವ್ಯಾಗನ್ ಕಾರು, ಮೊಬೈಲ್ ಫೋನುಗಳು-2, ನಗದು ರೂ. 1,800/- ಡಿಜಿಟಲ್ ತೂಕ ಮಾಪನ ವಶಪಡಿಸಲಾಗಿದೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ ರೂ. 7,83,300 ಆಗಬಹುದು. ಆರೋಪಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಕೀಬ್ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮೂರು ಕಳವು ಪ್ರಕರಣಗಳು, ಕೊಲೆಯತ್ನ ಪ್ರಕರಣ,ವಹಲ್ಲೆ ಪ್ರಕರಣ, ಬಜ್ಪೆ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮೂಡಬಿದ್ರಿ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಡುಪಿ ಜಿಲ್ಲೆಯ ಕಾರ್ಕಳ ನಗರ ಠಾಣೆ, ಕಾರ್ಕಳ ಗ್ರಾಮಾಂತರ ಠಾಣೆ, ಶಿರ್ವಾ ಠಾಣೆಗಳಲ್ಲಿ ಸರಕಳ್ಳತನ ಪ್ರಕರಣ, ಮಣಿಪಾಲದಲ್ಲಿ ದರೋಡೆ ಪ್ರಕರಣಗಳು ಹೀಗೆ ಒಟ್ಟು 13 ಪ್ರಕರಣ ದಾಖಲಾಗಿದೆ.
ಇನ್ನೋರ್ವ ಆರೋಪಿ ನಿಸಾರ್ ಹುಸೈನ್ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಕೊಲೆ ಯತ್ನ ಪ್ರಕರಣ, ಬರ್ಕೆ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ, ಮುಲ್ಕಿ ಠಾಣೆಯಲ್ಲಿ ಕಳವು ಪ್ರಕರಣ, ಮಂಗಳೂರು ಪೂರ್ವ ಠಾಣೆ, ಉಪ್ಪಿನಂಗಡಿ, ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳನ್ನು ಅಡ್ಡಗಟ್ಟಿ ದರೋಡೆ ನಡೆಸಿದ 3 ಪ್ರಕರಣಗಳು, ಮಂಗಳೂರು ದಕ್ಷಿಣ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ಹೀಗೆ ಒಟ್ಟು 9 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ ಹೊಂದಿದ್ದಾನೆ. ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಪಂದ್ಯಾಟದ ವೇಳೆಯಲ್ಲಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಕೂಡ ಭಾಗಿಯಾಗಿದ್ದು, ಇದಲ್ಲದೆ ಕೋರ್ಟಿನಲ್ಲಿ ಏಳು ವಾರಂಟ್ ಇದ್ದರೂ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ.
ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಶರಣಪ್ಪ ಭಂಡಾರಿ, ಸುದೀಪ್ ಎಂ ವಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
Mangalore Two arrested by CCB police with MDMA drugs, other items worth Rs 7 Lakhs seized. The city crime branch (CCB) police arrested two drug peddlers for possessing MDMA narcotic drug on Sunday August 27. The arrested are identified as Shakib (27) and Nissar Hussain (34), both from Surathkal.
11-01-25 02:11 pm
HK News Desk
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
G Parameshwara: ನಕ್ಸಲರು ತಮ್ಮಲ್ಲಿದ್ದ ಶಸ್ತ್ರಾಸ್...
10-01-25 07:03 pm
NT chairman SN Subrahmanyan: ಇನ್ಫೋಸಿಸ್ ನಾರಾಯಣ...
10-01-25 02:44 pm
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
11-01-25 04:57 pm
Mangaluru Correspondent
Lava Kusha Jodukare Kambala, Mangalore; ತೃತೀಯ...
11-01-25 02:25 pm
Mangalore Annamalai, Naxals: ನಕ್ಸಲ್ ಶರಣಾಗತಿ ಬ...
11-01-25 12:44 pm
Mangalore, Missing, Marriage; ಮುಸ್ಲಿಂ ಯುವತಿಯನ...
10-01-25 11:14 pm
Mini Olympics, Mangalore- Uudpi: ಜ.17ರಿಂದ 23...
10-01-25 06:23 pm
10-01-25 11:05 pm
HK News Desk
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm