ಬ್ರೇಕಿಂಗ್ ನ್ಯೂಸ್
04-09-23 11:18 am Mangalore Correspondent ಕ್ರೈಂ
ಮಂಗಳೂರು, ಸೆ.4: ಯುವಕನಿಗೆ ಚೂರಿ ಇರಿದು ಪರಾರಿಯಾಗಿದ್ದ ಪ್ರಕರಣದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಪೊಲೀಸರು ಕೆಲವೇ ಗಂಟೆಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ಕಳವಾರಿನಲ್ಲಿ ನಿನ್ನೆ ರಾತ್ರಿ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23) ಎಂಬಾತನಿಗೆ ಚೂರಿ ಇರಿತ ಆಗಿತ್ತು. ಪ್ರಕರಣ ಸಂಬಂಧಿಸಿ ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23) ಮತ್ತು ಯಜ್ಞೆಶ್ (22) ಎಂಬವರನ್ನು ಬಂಧಿಸಲಾಗಿದೆ.

ಆಗಸ್ಟ್ 31ರಂದು ನಡೆದ ಗಲಾಟೆ ಬಗ್ಗೆ ಮಾತುಕತೆಗೆಂದು ಇಬ್ಬರನ್ನು ಕರೆದಿದ್ದು ಅಬ್ದುಲ್ ಸಫ್ವಾನ್ ಮತ್ತು ಮೊಹಮ್ಮದ್ ಸಫ್ವಾನ್ ಬೈಕಿನಲ್ಲಿ ಬರುತ್ತಿದ್ದಾಗಲೇ ಎರಡು ಬೈಕ್ ಗಳಲ್ಲಿ ಬಂದಿದ್ದ ಐದಾರು ಮಂದಿ ತಡೆದು ಹಲ್ಲೆ ನಡೆಸಿದ್ದರು. ಅಬ್ದುಲ್ ಸಫ್ವಾನ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಬಳಿಕ ಸ್ಥಳದಲ್ಲಿ ಜನ ಸೇರುತ್ತಿದ್ದಾಗ ಆರೋಪಿಗಳು ಪರಾರಿಯಾಗಿದ್ದರು. ಸಫ್ವಾನ್ ಅವರ ಕೈ , ತೋಳು ಹಾಗೂ ಬೆನ್ನಿಗೆ ಚೂರಿಯಿಂದ ಇರಿದ ಗಾಯಗಳಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಯಿಂದಾಗಿ ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದ ಸುರತ್ಕಲ್ ಠಾಣೆ ಪೊಲೀಸರು ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದಾರೆ. ಹಲವರನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪುನೀತ್, ಬಬ್ಬು ಗಣೇಶ್ ಸೇರಿದಂತೆ ಹಲವರ ವಿರುದ್ಧ ಕೊಲೆಯತ್ನ, ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಾಗಿದೆ.
Surathkal stabbing case, three arrested in a quick action by Mangalore Police. The arrested are Prashanth, Dhanraj and Yajnesh. A swift action taken by Mangalore Police commissioner Kuldeep Kumar Jain.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm