ಬ್ರೇಕಿಂಗ್ ನ್ಯೂಸ್
13-09-23 08:16 am Udupi Correspondent ಕ್ರೈಂ
ಉಡುಪಿ, ಸೆ.13: ಉದ್ಯಮಿಯೊಬ್ಬರಿಗೆ ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಏಳು ಕೋಟಿ ರೂಪಾಯಿ ಪಡೆದು ವಂಚನೆ ಎಸಗಿದ ಆರೋಪದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಹಿಂದು ಪರ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಅವರನ್ನು ಬಂಧಿಸಿದ್ದಾರೆ.
ಕಳೆದ ಕೆಲ ಸಮಯದಿಂದ ವಂಚನೆ ಪ್ರಕರಣ ಜಾಲತಾಣದಲ್ಲಿ ತೀವ್ರ ಸದ್ದು ಮಾಡಿತ್ತು. ಉದ್ಯಮಿ ಬಾಬು ಗೋವಿಂದ ಪೂಜಾರಿ ಎಂಬವರು ಬರೆದಿದ್ದಾರೆ ಎನ್ನಲಾದ ಪತ್ರ ವೈರಲ್ ಆಗಿತ್ತು. ಅಲ್ಲದೆ, ಚೈತ್ರಾ ಮತ್ತು ಇತರ ಕೆಲವರು ಸೇರಿ ಟಿಕೆಟ್ ಕೊಡಿಸುವ ನೆಪದಲ್ಲಿ ವ್ಯವಸ್ಥಿತ ರೀತಿಯಲ್ಲಿ ವಂಚನೆ ಎಸಗಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಪ್ರಕರಣ ಸಂಬಂಧಿಸಿ ಚೈತ್ರಾ ಕುಂದಾಪುರ ಮಾತನಾಡಿದ್ದ ಆಡಿಯೋ ತುಣುಕುಗಳು ವೈರಲ್ ಆಗಿದ್ದವು. ಈ ಬೆಳವಣಿಗೆಯ ಬಳಿಕ ತಲೆಮರೆಸಿಕೊಂಡು ಓಡಾಡುತ್ತಿದ್ದ ಚೈತ್ರಾ ಅವರನ್ನು ನಿನ್ನೆ ರಾತ್ರಿ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬೆಂಗಳೂರು ಸಿಸಿಬಿ ಪೊಲೀಸರು ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಹೊಟೇಲ್ ಉದ್ಯಮಿ ಮತ್ತು ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಬಿಲ್ಲವ ನಾಯಕ ಗೋವಿಂದ ಬಾಬು ಪೂಜಾರಿ ಅವರು ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಚುನಾವಣೆಗೆ ಮೊದಲೇ ಈ ಬಗ್ಗೆ ಅರಿತುಕೊಂಡಿದ್ದ ಚೈತ್ರಾ ಕುಂದಾಪುರ, ಆರೆಸ್ಸೆಸ್ ಮತ್ತು ಬಿಜೆಪಿ ಪ್ರಮುಖರಿಗೆ ಇಂತಿಷ್ಟು ಪೇಮೆಂಟ್ ಮಾಡಿದರೆ ಮಾತ್ರ ಟಿಕೆಟ್ ಸಿಕ್ಕೀತು. ಅದಕ್ಕಾಗಿ ನೀವು ಖರ್ಚು ಮಾಡಬೇಕಾಗುತ್ತದೆ. ನನಗೆ ಕಾಶ್ಮೀರದಲ್ಲಿರುವ ಆರೆಸ್ಸೆಸ್ ಪ್ರಮುಖರ ಪರಿಚಯ ಇದೆ. ಅವರಿಗೆ ಕೇಂದ್ರ ಬಿಜೆಪಿ ನಾಯಕರ ನಿಕಟ ಪರಿಚಯ ಇದೆಯೆಂದು ಹೇಳಿ ಡೀಲ್ ಕುದುರಿಸಿದ್ದಾರೆ. ಉದ್ಯಮಿಯ ಮುಗ್ಧತೆಯನ್ನು ಬಳಸಿಕೊಂಡು ಚೈತ್ರಾ ಮತ್ತು ಜೊತೆಗಾರರು ಸೇರಿ ಸುಮಾರು ಏಳು ಕೋಟಿ ರೂಪಾಯಿ ಹಣ ಪಡೆದು ವಂಚನೆ ಎಸಗಿದ್ದಾರೆ ಎನ್ನಲಾಗಿದೆ.
ಹಿಂದು ಪರ ಸಂಘಟನೆಗಳಲ್ಲಿ ಪ್ರಖರ ಭಾಷಣಕಾರ್ತಿಯಾಗಿ ಗುರುತಿಸಿಕೊಂಡಿರುವ ಚೈತ್ರ ಕುಂದಾಪುರ, ಆರೆಸ್ಸೆಸ್ ನಾಯಕರ ನಿಕಟವರ್ತಿಯೆಂದು ಹೇಳಿಕೊಂಡು ಮಹಾವಂಚನೆ ಎಸಗಿದ್ದರು. ನಾಲ್ಕೈದು ಮಂದಿ ಸೇರಿ ಬೃಹನ್ನಾಟಕ ಹೆಣೆದಿದ್ದು ಉದ್ಯಮಿ ಅದರೊಳಗೆ ಬಿದ್ದು ಒದ್ದಾಡುವಂತಾಗಿತ್ತು. ಆರ್ ಎಸ್ ಎಸ್ ಪ್ರಮುಖರು ಎಂದು ನಕಲಿ ನಾಯಕರನ್ನು ಸೃಷ್ಟಿ ಮಾಡಿದ್ದ ಚೈತ್ರ ಅಂಡ್ ಟೀಮ್, ವ್ಯವಸ್ಥಿತ ರೀತಿಯಲ್ಲಿ ವಂಚನೆ ಎಸಗಿದ್ದರು. ಈಗ ಚೈತ್ರಾ ಜೊತೆಗಿದ್ದ ಶ್ರೀಕಾಂತ್ ನಾಯಕ್ ಪೆಲತ್ತೂರು ಎಂಬಾತನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
ವಂಚನೆ ಪ್ರಕರಣದಲ್ಲಿ ಈವರೆಗೆ ಬೆಂಗಳೂರು ಸಿಸಿಬಿ ಪೊಲೀಸರು ನಾಲ್ವರನ್ನ ವಶಕ್ಕೆ ಪಡೆದಿದ್ದಾರೆ. ಚೈತ್ರಾ ಕುಂದಾಪುರ ಜೊತೆಗೆ ಪ್ರಮುಖ ನಾಟಕಕಾರನಾಗಿದ್ದ ಶಿವಮೊಗ್ಗ ಮೂಲದ ಗಗನ್ ಕಡೂರು, ಶ್ರೀಕಾಂತ ನಾಯಕ್, ಪ್ರಸಾದ್ ಎಂಬವರು ಪೊಲೀಸ್ ವಶದಲ್ಲಿದ್ದಾರೆ.
Seven people, including Hindu activist Chaithra Kundapura, arrested for cheating businessmen of seven crores by accusing him of getting Byndooor BJP ticekt during elections. Chaitra Kundapura – a former television anchor and a hardline Hindu activist is from coastal Karnataka. Even before the hijab row, Chaitra’s fiery, not-so-veneered anti-Muslim speech in October 2021 caught the attention of Hindu youth in the region. The right-wing activist had warned a particular community to stop ‘love jihad’ and that the ‘Bajrang Dal could easily convert Muslim women and make them wear Kumkum’. The video had gone viral on social media.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am