Bantwal Robbery: ಬಂಟ್ವಾಳ ; ಹಗಲು ವೇಳೆ ಮನೆಗೆ ನುಗ್ಗಿ 5 ಲಕ್ಷ ಮೌಲ್ಯದ ಚಿನ್ನಾಭರಣ ಎಸ್ಕೇಪ್ ಮಾಡಿದ ಕಳ್ಳರಿಬ್ಬರ ಸೆರೆ, 15 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ವಶಕ್ಕೆ 

18-09-23 10:59 pm       Mangalore Correspondent   ಕ್ರೈಂ

ಹಗಲು ವೇಳೆ ಮನೆಗೆ ನುಗ್ಗಿ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿರುವ ಬಂಟ್ವಾಳ ‌ನಗರ ಠಾಣೆಯ ಪೊಲೀಸರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಟ್ವಾಳ, ಸೆ.18: ಹಗಲು ವೇಳೆ ಮನೆಗೆ ನುಗ್ಗಿ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿರುವ ಬಂಟ್ವಾಳ ‌ನಗರ ಠಾಣೆಯ ಪೊಲೀಸರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಬೆಂಗ್ರೆ ಭದ್ರಪಳ್ಳಿ ನಿವಾಸಿ ಫರಾಜ್ (27 ವ) ಹಾಗೂ ಸುರತ್ಕಲ್ ತಾಲೂಕು ಚೊಕ್ಕಬೆಟ್ಟು ಕೃಷ್ಣಾಪುರ 4ನೇ ಬ್ಲಾಕ್ ನಿವಾಸಿ ತೌಸಿಫ್ ಅಹಮ್ಮದ್  (34) ಬಂಧಿತ ಆರೋಪಿಗಳು.

ಆರೋಪಿಗಳಿಂದ ಒಟ್ಟು ರೂ. 12,23,000 ಮೌಲ್ಯದ 223 ಗ್ರಾಂ ಚಿನ್ನಾಭರಣ ಮತ್ತು ರೂ 3000 ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 3,30,000 ಮೌಲ್ಯದ ಮಹೀಂದ್ರ ಕೈಲೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ರೂ 15,56,000 ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ದೇವಮಾತ ಕಾಂಪ್ಲೆಕ್ಸ್‌ನಲ್ಲಿ ವಾಸವಿರುವ ಮೈಕಲ್ ಡಿಸೋಜಾ ಎಂಬವರ ಮನೆಯ ಎದುರಿನ ಬಾಗಿಲಿನ ಡೋರನ್ನು ಸೆ. 01 ರಂದು ಕಳ್ಳರು ಮುರಿದು ಒಳ ಪ್ರವೇಶಿಸಿ ಮನೆಯ ಕೋಣೆಯೊಳಗಿದ್ದ ಕಪಾಟುಗಳಿಂದ 115 ಗ್ರಾಂ ತೂಕದ ಸುಮಾರು 5,36,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000 ರೂಮೌಲ್ಯದ ಬೆಳ್ಳಿಯ ಸಾಮಾಗ್ರಿಯನ್ನು ಕಳವು ಮಾಡಿದ ಘಟನೆ ನಡೆದಿತ್ತು‌.

Bantwal robbery, police arrest two over robbery of Gold worth 5 lakhs in Mangalore.