ಬ್ರೇಕಿಂಗ್ ನ್ಯೂಸ್
28-09-23 10:20 pm Mangalore Correspondent ಕ್ರೈಂ
ಮಂಗಳೂರು, ಸೆ.28: ನಗರದ ಅಡ್ಯಾರ್ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.
ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ತಂಡವೊಂದು ಅಡ್ಯಾರ್ ಪರಿಸರದಲ್ಲಿ ಮಾರಾಕಾಯುಧಗಳೊಂದಿಗೆ ಮತ್ತೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಫರಂಗಿಪೇಟೆ ಅಮ್ಮೆಮ್ಮಾರ್ ನಿವಾಸಿಗಳಾದ ತಸ್ಲೀಮ್ @ ಗರುಡ ತಸ್ಲೀಮ್(34),
ಹೈದರಾಲಿ @ ಹೈದು(26) ಎಂಬವರನ್ನು ವಶಕ್ಕೆ ಪಡೆದು ಅವರ ವಶದಲ್ಲಿದ್ದ ತಲವಾರು-2, ಚೂರಿ-1, ಮೊಬೈಲ್ ಫೋನುಗಳು-2, ಹಾಗೂ KL -14-AB-7212 ಮಹೇಂದ್ರ ಪಿಕ್ ಅಪ್ ವಾಹನ ವಶಪಡಿಸಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5,21,000/- ಆಗಬಹುದು. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ಹತ್ತು ದಿನಗಳ ಹಿಂದಷ್ಟೆ ಜೈಲಿನಿಂದ ಬಿಡುಗಡೆ
ಫರಂಗಿಪೇಟೆ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ಎರಡು ತಂಡಗಳ ನಡುವೆ ಜಾನುವಾರು ಸಾಗಾಟದ ವಿಷಯದಲ್ಲಿ ಗಲಾಟೆ ನಡೆದಿತ್ತು. ಅಕ್ರಮ ಜಾನುವಾರು ಸಾಗಾಟ ವಿಚಾರವಾಗಿದ್ದರಿಂದ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಆನಂತರ, ತಸ್ಲಿಂ ಹಾಗೂ ಆತನ ಸಹಚರರು ಇನ್ನೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿ ಹೊಂಚು ಹಾಕುತ್ತಿದ್ದ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ.
ಆರೋಪಿಗಳ ಪೈಕಿ ತಸ್ಲೀಮ್ @ ಗರುಡ ತಸ್ಲೀಮ್ ಎಂಬಾತ ಈ ಹಿಂದೆ ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣೆ ವ್ಯಾಪ್ತಿಯಲ್ಲಿ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ, ರೈಲ್ವೇ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿದ್ದ. 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಗೊಂಡಿದ್ದ. ಇನ್ನೋರ್ವ ಆರೋಪಿ ಹೈದರಾಲಿ @ಹೈದು ಎಂಬಾತ ಈ ಹಿಂದೆ ಮೂಡಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.
Cattle trafficking revenge, two rowdies arrested for plotting murder at Adyar in Mangalore.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm