Mangalore Airport, Gold Seized: ಮಂಗಳೂರು ವಿಮಾನ ನಿಲ್ದಾಣದಲ್ಲಿ 61 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ ; ಚಿನ್ನ ಪೌಡರ್ ಮಾಡಿ ಗುದದ್ವಾರದಲ್ಲಿಟ್ಟು ಸಾಗಣೆ ! 

11-10-23 09:32 pm       Mangalore Correspondent   ಕ್ರೈಂ

ಅಬುಧಾಬಿಯಿಂದ ಸಾಗಿಸುತ್ತಿದ್ದ 61.06 ಲಕ್ಷ ರೂ. ಮೌಲ್ಯದ ಒಟ್ಟು 1,053 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.

ಮಂಗಳೂರು, ಅ.11: ಅಬುಧಾಬಿಯಿಂದ ಸಾಗಿಸುತ್ತಿದ್ದ 61.06 ಲಕ್ಷ ರೂ. ಮೌಲ್ಯದ ಒಟ್ಟು 1,053 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.

ಚಿನ್ನವನ್ನು ಪೇಸ್ಟ್‌ ರೂಪಕ್ಕೆ ಪರಿವರ್ತಿಸಿ ಅದನ್ನು ಗುಳಿಗೆಗಳ ಒಳಗೆ ಹಾಕಿ ಗುದದ್ವಾರದಲ್ಲಿಟ್ಟು ಸಾಗಿಸಲಾಗುತ್ತಿತ್ತು ಎಂದು ಕಸ್ಟಮ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

20 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ;

ಅ.8 ರಂದು ವ್ಯಕ್ತಿಯಿಂದ 20 ಲಕ್ಷ ಮೌಲ್ಯದ 24 ಕ್ಯಾರೆಟ್​ನ 347 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಪ್ರಯಾಣಿಕನೋರ್ವ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ. ಈ ವೇಳೆ ಕಸ್ಟಮ್ಸ್ ಅಧಿಕಾರಿಗಳು ಈತನನ್ನು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಚಿನ್ನವನ್ನು ಬಿಳಿ ಪೌಡರ್ ರೂಪಕ್ಕೆ ಪರಿವರ್ತಿಸಿ 5 ಪ್ಯಾಕೆಟ್‌ಗಳಲ್ಲಿ ತುಂಬಿಸಿ 'ಕಿಚನ್ ಟ್ರೆಸರ್ಸ್ ಮತ್ತು 'ಕೀರ್‌ಮಿಕ್ಸ್' ಎಂಬ ಲೇಬಲ್ ಹಾಕಿ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಚಿನ್ನದೊಂದಿಗೆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

61 lakh worth gold seized by custom officers in Mangalore Airport.