Mangalore Police: ವಿದೇಶದಲ್ಲಿ ಅಡಗಿದ್ದ ಮಂಗಳೂರಿನ ತೌಸಿಫ್ ಮುಂಬೈ ಏರ್ಪೋರ್ಟ್ ನಲ್ಲಿ ಬಂಧನ 

16-10-23 01:12 pm       Mangalore Correspondent   ಕ್ರೈಂ

ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಜಾಮೀನು ಪಡೆದ ಬಳಿಕ ವಿದೇಶಕ್ಕೆ ಹಾರಿ ನಾಲ್ಕು ವರ್ಷಗಳಿಂದ ವಿದೇಶದಲ್ಲೇ ತಲೆಮರೆಸಿಕೊಂಡಿದ್ದ ಮಂಗಳೂರು ಮೂಲದ ಆರೋಪಿಯನ್ನು ಮುಂಬೈ ಏರ್‌ಪೋರ್ಟಿನಲ್ಲಿ ಬಂಧಿಸಲಾಗಿದೆ.

ಮಂಗಳೂರು, ಅ.16: ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಜಾಮೀನು ಪಡೆದ ಬಳಿಕ ವಿದೇಶಕ್ಕೆ ಹಾರಿ ನಾಲ್ಕು ವರ್ಷಗಳಿಂದ ವಿದೇಶದಲ್ಲೇ ತಲೆಮರೆಸಿಕೊಂಡಿದ್ದ ಮಂಗಳೂರು ಮೂಲದ ಆರೋಪಿಯನ್ನು ಮುಂಬೈ ಏರ್‌ಪೋರ್ಟಿನಲ್ಲಿ ಬಂಧಿಸಲಾಗಿದೆ. 

ಮಂಗಳೂರು ನಗರದ ಬಜಾಲ್, ಫೈಜಲ್ ನಗರ ನಿವಾಸಿ ತೌಸೀಫ್(27) ಬಂಧಿತ. ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೆ, ಪೊಲೀಸರಿಗೂ ಸಿಗದೇ ತಲೆಮರೆಸಿಕೊಂಡು ವಿದೇಶದಲ್ಲಿ ಅಡಗಿದ್ದ ತೌಸಿಫ್ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಲುಕ್ ಔಟ್ ನೋಟೀಸ್ ಹೊರಡಿಸಿದ್ದರು.‌ 

ಅಕ್ಟೋಬರ್ 14ರಂದು ಸೌದಿ ಅರೇಬಿಯಾದಿಂದ ಮಂಗಳೂರಿಗೆ ಬರಲು ತೌಸಿಫ್, ಮುಂಬೈನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈ ವೇಳೆ ವಿಮಾನ ನಿಲ್ದಾಣದ ಇಮಿಗ್ರೇಷನ್ ಅಧಿಕಾರಿಗಳು ಲುಕ್ ಔಟ್ ನೋಟೀಸ್ ಇರುವುದನ್ನು ಗಮನಿಸಿ, ಮಂಗಳೂರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಂಗಳೂರು ಪೊಲೀಸರು ಮುಂಬೈಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಮಂಗಳೂರಿಗೆ ಕರೆತಂದಿದ್ದಾರೆ. ಆರೋಪಿ ತೌಸೀಫ್ ಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Mangalore accused absconding since four years arrested by police in Mumbai airport. The arrested has been identified as Thousif (27).