ಬ್ರೇಕಿಂಗ್ ನ್ಯೂಸ್
16-10-23 10:54 pm Mangalore Correspondent ಕ್ರೈಂ
ಮಂಗಳೂರು, ಅ.16: ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಮೂಡುಬಿದ್ರೆ ಪೊಲೀಸರು ಪ್ರತ್ಯೇಕ ಎರಡು ಕಡೆ ದಾಳಿ ನಡೆಸಿದ್ದು ಇಬ್ಬರು ದಲ್ಲಾಳಿ ಸೇರಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸೋಮವಾರ ಸಂಜೆ ಆರು ಗಂಟೆಗೆ ಮಾರ್ಪಾಡಿ ಗ್ರಾಮದ ಒಂಟಿಕಟ್ಟೆ ಎಂಬಲ್ಲಿರುವ ಕಡಲಕೆರೆ ಪಾರ್ಕ್ ನಲ್ಲಿ ಸುಖೇಶ್ ಆಚಾರ್ಯ ಎಂಬಾತ ಪುರಂದರ್ ಎಂಬಾತನಿಂದ ಹಣವನ್ನು ಪಡೆದು allpaanel.com/m/home ಎಂಬ ವೆಬ್ ಸೈಟ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ದಾಳಿ ನಡೆಸಿ ಸುಖೇಶ್ ಆಚಾರ್ಯ ಎಂಬಾತನನ್ನು ವಶಕ್ಕ ಪಡೆದಿದ್ದಾರೆ. ಈ ವೇಳೆ, ಶ್ರೀಲಂಕಾ ಮತ್ತು ಆಸ್ಪ್ರೇಲಿಯಾ ಕ್ರಿಕೆಟ್ ಮ್ಯಾಚ್ ನಲ್ಲಿ ಬೆಟ್ಟಿಂಗ್ ಮಾಡಲು ಅವರಿಂದ ಹಣವನ್ನು ಪಡೆದು ಬೆಟ್ಟಿಂಗ್ ಆಡುತ್ತಿರುವುದಾಗಿ ತಿಳಿಸಿದ್ದಾನೆ. ಅಲ್ಲದೆ, allpaanel.com/m/home ಎಂಬ ವೆಬ್ ಸೈಟ್ ನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ತಿಳಿಸಿದ್ದಾನೆ.

ಆರೋಪಿ ಸುಖೇಶ್ ಆಚಾರ್ಯ ಬಳಿಯಿದ್ದ ಮೋಬೈಲ್ ನ ಗೂಗಲ್ ಕ್ರೋಮ್ ನಲ್ಲಿ allpaanel.com/m/home ಎಂಬ ವೆಬ್ ಸೈಟ್ ನಲ್ಲಿ ಹಣವನ್ನು ಪಣವಾಗಿರಿಸಿ ಕ್ರಿಕೆಟ್ ಬೆಟ್ಟಿಂಗ್ ಗೆ ತೊಡಗಿಸಿಕೊಂಡಿರುವುದು ಕಂಡುಬಂದಿದೆ. ವಿಶ್ವಕಪ್ ಕೂಟದಲ್ಲಿ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಮ್ಯಾಚ್ ನಡೆದಿದ್ದು ಈ ಮ್ಯಾಚ್ ಗಾಗಿ ಹಣವನ್ನು ಬೆಟ್ಟಿಂಗ್ ಹಾಕುವ ಗಿರಾಕಿಗಳಿಗಾಗಿ ಕಾಯುತ್ತಿದ್ದುದಾಗಿ ತಿಳಿಸಿದ್ದಾನೆ. ಇವರನ್ನು ವಶಕ್ಕೆ ಪಡೆದು ಮೂಡಬಿದ್ರೆ ಪೊಲೀಸ್ ಠಾಣೆ ಅ.ಕ್ರ 158/2023 ಕಲಂ: 78(3)(4) ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಕಾನೂನು ಕ್ರಮ ಜರುಗಿಸಲಾಗಿದೆ.
ಆರೋಪಿ ಸುಖೇಶ್ ಆಚಾರ್ಯ ಅಲಂಗಾರು ನಿವಾಸಿಯಾಗಿದ್ದು ಆತನ ಜೊತೆಗೆ ಹಣ ತೊಡಗಿಸಿದ್ದ ಪುರಂದರ ಕುಲಾಲ್ ಪುತ್ತಿಗೆ ಗ್ರಾಮದ ನಿವಾಸಿ. ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ.ಜಿ, ಉಪ ನಿರೀಕ್ಷಕರಾದ ಸಿದ್ದಪ್ಪ ನರನೂರ ಹಾಗೂ ಸಿಬ್ಬಂದಿಗಳಾದ ಪ್ರದೀಪ್ ಕುಮಾರ್, ಝೈದ್, ವೆಂಕಟೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮತ್ತೊಂದು ಬೆಟ್ಟಿಂಗ್ ಏಪ್ ನಲ್ಲಿ ದಂಧೆ ಪತ್ತೆ
ಮತ್ತೊಂದು ಪ್ರಕರಣದಲ್ಲಿ ಮೂಡಬಿದರೆಯ ಮಾರ್ಪಾಡಿ ಗ್ರಾಮದ ಅಲಂಗಾರು ಎಂಬಲ್ಲಿ ಎಸ್.ಐ ಸ್ಪೋರ್ಟ್ಸ್ ಅಂಗಡಿಯ ಮುಂಭಾಗದಲ್ಲಿ ನವೀದ್ ಎಂಬಾತ ಪ್ರಸಾದ್ ಮತ್ತು ಉಮೇಶ್ ಎಂಬವರಿಂದ ಹಣವನ್ನು ಪಡೆದು Comfort Zone 247 ಎಂಬ ಮೊಬೈಲ್ ವೆಬ್ ಸೈಟ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಮೂವರನ್ನೂ ಬಂಧಿಸಿದ್ದಾರೆ. ವಿಚಾರಣೆ ವೇಳೆ ಶ್ರೀಲಂಕಾ ಮತ್ತು ಆಸ್ಪ್ರೇಲಿಯಾ ಕ್ರಿಕೆಟ್ ಮ್ಯಾಚ್ ನಲ್ಲಿ ಬೆಟ್ಟಿಂಗ್ ಮಾಡಲು ಹಣವನ್ನು ಗೂಗಲ್ ಪೇ ಅಥವಾ ಪೋನ್ ಪೇ ಮುಖೇನ ಪಡೆಯುವುದಾಗಿ ತಿಳಿಸಿದ್ದಾರೆ. Comfort Zone 24*7 ಎಂಬ ವೆಬ್ ಸೈಟ್ ನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ತಿಳಿಸಿದ್ದಾನೆ. ಇವರನ್ನು ವಶಕ್ಕೆ ಪಡೆದು ಮೂಡಬಿದ್ರೆ ಪೊಲೀಸ್ ಠಾಣೆ ಅ.ಕ್ರ 157/2023 ಕಲಂ: 78(3)(4) ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಕ್ರಮ ಜರುಗಿಸಲಾಗಿದೆ.
ಬೆಳುವಾಯಿ ನಿವಾಸಿ ನವೀದ್(30), ಪಡುಮಾರ್ನಾಡು ನಿವಾಸಿಗಳಾದ ಉಮೇಶ್ (40), ಪ್ರಸಾದ್ ದೇವಾಡಿಗ (35) ಬಂಧಿತರು. ಈ ಕಾರ್ಯಾಚರಣೆಯಲ್ಲಿ ಮೂಡಬಿದ್ರೆ ಠಾಣೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಸಿಬ್ಬಂದಿಗಳಾದ ಚಂದ್ರಹಾಸ್ ರೈ, ಮೊಹಮ್ಮದ್ ಹುಸೇನ್, ಅಖೀಲ್ ಅಹ್ಮದ್ ಹಾಗೂ ಅವರ ತಂಡ ಪಾಲ್ಗೊಂಡಿತ್ತು.
Moodbidri five arrested for online cricket betting by Mangalore Police. Acting on a verified tip-off, Naveed was found accepting money from Prasad and Umesh for cricket betting on the mobile platform ‘Comfort Zone 247’.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm