ಬ್ರೇಕಿಂಗ್ ನ್ಯೂಸ್
19-10-23 05:02 pm HK News Desk ಕ್ರೈಂ
ಮೈಸೂರು, ಅ.19: ಒಂದೂವರೆ ವರ್ಷದ ಮಗನನ್ನು ತಂದೆಯೇ ಕೆರೆಗೆ ಎಸೆದು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ನಡೆದಿದೆ. ಮಾಕೋಡು ಗ್ರಾಮದ ಗಣೇಶ್ ಎಂಬಾತನೇ ಮಗನನ್ನು ಕೊಂದಿರುವ ಪಾಪಿ ತಂದೆ. ಪ್ರಕರಣ ಸಂಬಂಧ ಪಿರಿಯಾಪಟ್ಟಣ ಪೊಲೀಸರು ಗಣೇಶ್ನನ್ನು ಬಂಧಿಸಿದ್ದಾರೆ.
2014ರಲ್ಲಿ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ ಲಕ್ಷ್ಮಿ ಎಂಬುವವರನ್ನು ಗಣೇಶ್ ಮದುವೆಯಾಗಿದ್ದ. ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ದಂಪತಿ ವಾಸವಿದ್ದರು. ಈ ದಂಪತಿಗೆ ಹಾರಿಕಾ ಮತ್ತು ದೀಕ್ಷಾ ಎಂಬ ಇಬ್ಬರು ಪುತ್ರಿಯರು ಇದ್ದರು. ಬಳಿಕ ಲಕ್ಷ್ಮಿ ಮತ್ತೊಂದು ಗಂಡು ಮಗುವಿಗೆ ಜನ್ಮ ನೀಡಿ ಇಹಲೋಕ ತ್ಯಜಿಸಿದರು. ನಂತರ ಗಣೇಶ್ ದೇವನಹಳ್ಳಿಯಿಂದ ತಮ್ಮ ಸ್ವಗ್ರಾಮ ಪಿರಿಯಾಪಟ್ಟಣದ ಮಾಕೋಡಿಗೆ ಬಂದು ವಾಸಿಸಲು ಆರಂಭಿಸಿದ್ದರು. ಈ ವೇಳೆ ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಅತ್ತೆಯ ಬಳಿಯೇ ಬಿಟ್ಟು ಬಂದಿದ್ದರು. ಆದರೆ ಒಂದೂವರೆ ವರ್ಷದ ಮಗನನ್ನು ತನ್ನ ಬಳಿ ಇಟ್ಟುಕೊಂಡಿದ್ದರು. ಈ ವೇಳೆ ಮಗ ತುಂಬಾ ಅಳುತ್ತಿದ್ದ. ಈ ಹಿನ್ನೆಲೆ ಮಗನನ್ನು ಸಾಕಲಾಗದೇ ಕೆರೆಗೆ ಎಸೆದು ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.
ಘಟನೆ ಸಂಬಂಧ ಗಣೇಶ್ ಅವರ ಅತ್ತೆ ಅಂಜನಮ್ಮ ಪಿರಿಯಾಪಟ್ಟಣ ಪೊಲೀಸರಿಗೆ ಗಣೇಶ್ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆ ಪೊಲೀಸರು ಗಣೇಶ್ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗಣೇಶ್, ತನ್ನ ತಾಯಿ ಮತ್ತು ಅತ್ತೆ ಮಗುವನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಅದು ಸದಾ ಅಳುತ್ತಿತ್ತು. ಜೊತೆಗೆ ಅದನ್ನು ಸಾಕಲು ನನಗೆ ಕಷ್ಟ ಆಯಿತು. ಈ ಹಿನ್ನೆಲೆ ಮಗುವನ್ನು ಕೆರೆಗೆ ಎಸೆದು ಕೊಲೆ ಮಾಡಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಮಗುವನ್ನು ಹತ್ಯೆ ಮಾಡಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಪೊಲೀಸರು ತನಿಖೆ ನಡೆಸಿ, ಮಗುವಿನ ತಂದೆಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
Mysuru father kills one year old baby by throwing it into the lake as the baby was crying much and he couldn't take much care of it.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm