ಬ್ರೇಕಿಂಗ್ ನ್ಯೂಸ್
20-10-23 02:52 pm HK News Desk ಕ್ರೈಂ
ತುಮಕೂರು, ಅ.20: ವ್ಯಕ್ತಿಯೊಬ್ಬ ಹಾಡಹಗಲೇ ಏಳು ವರ್ಷದ ಬಾಲಕಿಯೊಬ್ಬಳನ್ನು ಆಟೋದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸುತ್ತಿದ್ದಾಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತನನ್ನು ರೆಡ್ ಹ್ಯಾಂಡೆಡ್ ಆಗಿ ಹಿಡಿದ ಜನರು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.
ತುಮಕೂರಿನ ಶಾಂತಿನಗರದ ಗೂಡ್ಶೆಡ್ ಕಾಲನಿ ನಿವಾಸಿ ಷಫಿ ಎಂಬಾತನೇ ಆರೋಪಿ.
ವೃತ್ತಿಯಿಂದ ಆಟೋಚಾಲಕನಾಗಿರುವ ಈತ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಸ್ ನಿಲ್ದಾಣ ಬಳಿ ಓಡಾಡುತ್ತಿದ್ದ 7 ವರ್ಷದ ಬಾಲಕಿಯನ್ನು ಪುಸಲಾಯಿಸಿ ಆಟೋಗೆ ಹತ್ತಿಸಿಕೊಂಡಿದ್ದಾನೆ.
ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆರೋಪಿಯನ್ನು ರೆಡ್ ಹ್ಯಾಂಡೆಡ್ ಆಗಿ ಹಿಡಿದ ಸಾರ್ವಜನಿಕರು, ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ತುಮಕೂರಿನ ಕ್ಯಾತ್ಸಂದ್ರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಕೇಸು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮತ್ತು ಆತನ ಆಟೋ ವಶಕ್ಕೆ ಪಡೆದಿದ್ದಾರೆ.
ಅಪ್ರಾಪ್ತ ವಯಸ್ಸಿನ ಈ ಬಾಲಕಿ ಅನಾಥೆಯಾಗಿದ್ದು, ಭಿಕ್ಷೆ ಬೇಡಿಕೊಂಡು ಜೀವನ ಸಾಗಿಸುತ್ತಿದ್ದಳು. ಅತ್ಯಾಚಾರ ಯತ್ನದಿಂದ ರಕ್ಷಿಸಲಾದ ಬಾಲಕಿಯನ್ನು ತುಮಕೂರಿನ ಬಾಲಮಂದಿರಕ್ಕೆ ಕರೆದೊಯ್ದು ಬಿಡಲಾಗಿದೆ. ಸಾರ್ವಜನಿಕರ ಸಮಯಪ್ರಜ್ಞೆಯಿಂದಾಗಿ ಅನಾಥ ಬಾಲಕಿಯ ಮಾನ ಉಳಿದಿದೆ.
Auto driver held for trying to rape girl in Tumkuru.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm