ಬ್ರೇಕಿಂಗ್ ನ್ಯೂಸ್
28-10-23 03:35 pm Mangalore Correspondent ಕ್ರೈಂ
ಮಂಗಳೂರು, ಅ.28: ಮಂಗಳೂರಿನ ಉಪ ನೋಂದಣಿ ಕಚೇರಿಯಲ್ಲಿ ಆಧಾರ್ ಸಂಖ್ಯೆ ಮತ್ತು ಬೆರಳಚ್ಚು ಕೊಟ್ಟಿರುವ ಗ್ರಾಹಕರ ಬ್ಯಾಂಕ್ ಖಾತೆಗಳಿಂದ ಹಣ ಕೀಳುವ ಸೈಬರ್ ದೋಖಾ ನಿರಂತರ ಮುಂದುವರಿದಿದೆ. ಮಂಗಳೂರಿನ ಸೈಬರ್ ಠಾಣೆಯಲ್ಲಿ ಮತ್ತೆ ಎಂಟು ಎಫ್ಐಆರ್ ದಾಖಲಾಗಿದ್ದು, ದೂರು ಕೊಟ್ಟವರೆಲ್ಲ ರಿಜಿಸ್ಟ್ರೇಶನ್ ಕಚೇರಿಯ ಮೇಲೆ ಬೆರಳು ತೋರಿಸಿದ್ದಾರೆ. ವಿಶೇಷ ಅಂದ್ರೆ, ಹೀಗೆ ವಂಚನೆಗೊಳಗಾದವರಲ್ಲಿ ಪೊಲೀಸ್ ಅಧಿಕಾರಿಯೂ ಇದ್ದಾರೆ. ವಂಚನೆ ಪ್ರಕರಣವನ್ನು ಗಂಭೀರ ಪರಿಗಣಿಸಿದ ಮಂಗಳೂರು ಪೊಲೀಸರು ಬಿಹಾರ ಮೂಲದ ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಎಎಸ್ಐ ಆಗಿರುವ ಆಲ್ಬರ್ಟ್ ಲಸ್ರಾದೋ ಹಣ ಕಳಕೊಂಡವರಲ್ಲಿ ಒಬ್ಬರಾಗಿದ್ದು ವಂಚನೆ ಬಗ್ಗೆ ಸೈಬರ್ ಅಪರಾಧಗಳ ಠಾಣೆಗೆ ದೂರು ನೀಡಿದ್ದಾರೆ. ಲಸ್ರಾದೋ ಅವರ ಎಸ್ ಬಿಐ ಬ್ಯಾಂಕ್ ಖಾತೆಯಿಂದ ಆಗಸ್ಟ್ 23ರಂದು 4990 ರೂ., 24ರಂದು 8500 ರೂ., ಸೆ.6ರಿಂದ 9ರ ನಡುವೆ 10 ಸಾವಿರ, 10 ಸಾವಿರ ಮತ್ತು 3400 ರೂ. ಹಣ ಕಡಿತ ಆಗಿದೆ. ಒಟ್ಟು 36,890 ರೂಪಾಯಿ ಹಣ ಇವರ ಖಾತೆಯಿಂದ ಕಡಿತ ಆಗಿದ್ದು, ಯಾವುದೇ ಓಟಿಪಿಯನ್ನು ಯಾರಿಗೂ ಕೊಟ್ಟಿರಲಿಲ್ಲ. ಬ್ಯಾಂಕ್ ಕಚೇರಿಯಲ್ಲಿ ವಿಚಾರಿಸಿದಾಗ ಆಧಾರ್ ಸಂಖ್ಯೆ ಮತ್ತು ಬೆರಳಚ್ಚು ಸೋರಿಕೆಯಾಗಿ ಯಾರೋ ಹಣವನ್ನು ಅನಧಿಕೃತವಾಗಿ ತೆಗೆದಿರುವುದು ಪತ್ತೆಯಾಗಿದೆ.
ಆಲ್ಬರ್ಟ್ ಲಸ್ರಾದೋ ಅವರು ಆಗಸ್ಟ್ 2ರಂದು ಮಂಗಳೂರಿನ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಜಾಗ ಮಾರಾಟದ ಬಗ್ಗೆ ಹೆಬ್ಬೆರಳಿನ ಗುರುತು ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ನೀಡಿದ್ದರು. ಅಪರಿಚಿತರು ಈ ತಂತ್ರಾಂಶವನ್ನು ಬಳಸಿಕೊಂಡು ತನ್ನ ಬ್ಯಾಂಕ್ ಖಾತೆಯಿಂದ ಹಣ ಕಿತ್ತುಕೊಂಡಿದ್ದಾರೆ ಎಂದು ಅವರು ಸೈಬರ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದೇ ರೀತಿ ಇತರ ಏಳು ಮಂದಿ ಜಾಗ ರಿಜಿಸ್ಟ್ರೇಶನ್ ವಿಚಾರದಲ್ಲಿ ಮಂಗಳೂರಿನ ಉಪ ನೋಂದಣಿ ಕಚೇರಿಗೆ ಆಧಾರ್ ಕಾರ್ಡ್ ಮತ್ತು ಬೆರಳಚ್ಚು ನೀಡಿದವರು ಹಣ ಕಳಕೊಂಡಿದ್ದಾರೆ. ಈ ರೀತಿ ಎಂಟು ಎಫ್ಐಆರ್ ಮಂಗಳೂರಿನಲ್ಲಿ ಕಳೆದ ಒಂದು ತಿಂಗಳಲ್ಲಿ ದಾಖಲಾಗಿದೆಯೆನ್ನುವ ಮಾಹಿತಿ ಲಭಿಸಿದೆ.
ಸೊಸೈಟಿಯಿಂದಲೂ ಆಧಾರ್ ಸೋರಿಕೆ
ನೀರುಮಾರ್ಗ ನಿವಾಸಿ ಮ್ಯಾಕ್ಸಿಂ ಎಂಬವರು ಸೊಸೈಟಿ ಒಂದಕ್ಕೆ ಆಧಾರ್ ಕಾರ್ಡ್ ಮತ್ತು ಬೆರಳಚ್ಚು ನೀಡಿ ಹಣ ಕಳಕೊಂಡಿದ್ದಾರೆ. ಲೋನ್ ವಿಚಾರದಲ್ಲಿ ಗುರುಪುರದ ಸೊಸೈಟಿ ಒಂದಕ್ಕೆ ತೆರಳಿದ್ದ ಅವರು ಅಲ್ಲಿ ಆಧಾರ್ ಮತ್ತು ಬೆರಳಚ್ಚು ನೀಡಿದ್ದರು. ಅಕ್ಟೋಬರ್ ತಿಂಗಳ ಆರಂಭದಲ್ಲಿ ದಿನಕ್ಕೆ 5000 ರೀತಿ ಮೂರು ದಿನ ಬ್ಯಾಂಕ್ ಖಾತೆಯಿಂದ ಹಣ ಕಡಿತವಾಗಿದೆ. ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ, ಆಧಾರ್ ಕಾರ್ಡ್ ಸೋರಿಕೆಯಾಗಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮ್ಯಾಕ್ಸಿಂ ಕುಟಿನೋ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಾವೇರಿ 2 ತಂತ್ರಾಂಶದ ಬಗ್ಗೆ ಸಂಶಯ ;
ಸಬ್ ರಿಜಿಸ್ಟ್ರೇಶನ್ ಕಚೇರಿಯಲ್ಲಿ ಕಾವೇರಿ 2 ತಂತ್ರಾಂಶ ಎನ್ನುವ ಹೊಸ ಸಾಫ್ಟ್ ವೇರನ್ನು ಕಳೆದ ವರ್ಷ ಅಳವಡಿಸಲಾಗಿತ್ತು. ಅದನ್ನು ಹ್ಯಾಕ್ ಮಾಡಿ, ಗ್ರಾಹಕರ ಬೆರಳಚ್ಚು ಮತ್ತು ಆಧಾರ್ ಮಾಹಿತಿಯನ್ನು ಕದಿಯುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಸರಕಾರವಾಗಲೀ, ಜಿಲ್ಲಾಡಳಿತವಾಗಲೀ ಗಂಭೀರ ಪರಿಗಣಿಸಿಲ್ಲ. ಮಂಗಳೂರಿನಲ್ಲಿ ಎರಡು ತಿಂಗಳ ಅವಧಿಯಲ್ಲಿ 25ಕ್ಕೂ ಹೆಚ್ಚು ಮಂದಿ ದೂರು ಕೊಟ್ಟು ಎಫ್ಐಆರ್ ಆಗಿದ್ದರೂ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ ಆಗಿಲ್ಲ. ಆದ್ರೆ ಮಂಗಳೂರಿನ ಸೈಬರ್ ಪೊಲೀಸರು ಅಲರ್ಟ್ ಆಗಿದ್ದು, ಆರೋಪಿಗಳ ಜಾಡು ಹಿಡಿದು ಸಾಗಿದ ಪರಿಣಾಮ ಮೂವರು ಬಿಹಾರ ಮೂಲದವರನ್ನು ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಸೈಬರ್ ಪೋಲೀಸರ ತಂಡ ಕದೀಮರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದೆ.
Cyber fraud, Aaadhar fraud at Sub Register office in Mangalore, three from Bihar held by Cen Cyber police. Recently in a span of 4 days nine cases of Aadhar fraud was reported at CEN police station. Traffic ASI Albert Lasrado also has lost amount of 36 thousnad by Aadhar fraud.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm