ಬ್ರೇಕಿಂಗ್ ನ್ಯೂಸ್
31-10-23 08:02 pm Mangaluru Correspondent ಕ್ರೈಂ
ಮಂಗಳೂರು, ಅ.31: ಹೆತ್ತ ತಾಯಿಯನ್ನೇ ಕೊಂದ ಪ್ರಕರಣದಲ್ಲಿ ಭಯಾನಕ ವಿಚಾರವನ್ನು ಪೊಲೀಸರು ಹೊರಗೆಡವಿದ್ದು ಕೊಲೆಗೂ ಮುನ್ನ ಮಗನೇ ತಾಯಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಕೃತ್ಯ ಬೆಳಕಿಗೆ ಬಂದಿದೆ. ಕಟೀಲು ಬಳಿಯ ಗಿಡಿಗೆರೆ ಎಂಬಲ್ಲಿ ತಾಯಿಯನ್ನು ಕೊಲೆಗೈದ ಕೃತ್ಯದಲ್ಲಿ ಬಜ್ಪೆ ಪೊಲೀಸರು ಮಗನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆಯ ಹಿಂದಿನ ಕಾರಣ ತಿಳಿದುಬಂದಿದೆ.
ಕಟೀಲು ಸಮೀಪದ ಗಿಡಿಗೆರೆ ನಿವಾಸಿ ರತ್ನಾ ಶೆಟ್ಟಿ (56) ಎಂಬವರನ್ನು ಅವರ ಸ್ವಂತ ಮಗ ರವಿರಾಜ್ ಶೆಟ್ಟಿ (33) ಅ.26ರ ಗುರುವಾರ ರಾತ್ರಿ ಕೊಲೆಗೈದು ಮನೆಗೆ ಬೀಗ ಹಾಕಿ ಕಿನ್ನಿಗೋಳಿಯ ವಸತಿಗೃಹದಲ್ಲಿ ಉಳಿದುಕೊಂಡಿದ್ದ. ಭಾನುವಾರ ಬೆಳಗ್ಗೆ ತಾಯಿ ನೆಲೆಸಿದ್ದ ಬಾಡಿಗೆ ಮನೆಯಲ್ಲಿ ನೊಣಗಳು ಮುತ್ತಿಕೊಂಡಿದ್ದು ಸ್ಥಳೀಯರು ನೋಡಿದಾಗ ರತ್ನಾ ಶೆಟ್ಟಿ ಸಾವನ್ನಪ್ಪಿದ್ದು ಕಂಡುಬಂದಿತ್ತು.
ಬಜ್ಪೆ ಪೊಲೀಸರು ಕೊಲೆ ಶಂಕೆಯಲ್ಲಿ ತನಿಖೆ ನಡೆಸಿದ್ದರು. ಮಗ ರವಿರಾಜ್ ಮೇಲೆ ಶಂಕೆ ಉಂಟಾಗಿ ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ತಾನೇ ಕೊಂದಿರುವುದು ಎಂದು ಒಪ್ಪಿಕೊಂಡಿದ್ದಾನೆ. ರತ್ನಾ ಅವರ ಪತಿ ದಯಾನಂದ ಶೆಟ್ಟಿ ಅವರು 7 ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ತಾಯಿ, ಮಗ ಇಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಅರೋಪಿ ರವಿ ಗಾಂಜಾ ವ್ಯಸನಿಯಾಗಿದ್ದು ಗಾಂಜಾ ಅಮಲಿನಲ್ಲಿ ಅತ್ಯಾಚಾರ ಎಸಗಿರಬಹುದೆಂದು ಶಂಕಿಸಲಾಗಿದೆ. ಮುಖಕ್ಕೆ ಬಟ್ಟೆ ಕಟ್ಟಿ ಕೈಕಾಲುಗಳಿಗೆ ನೈಲಾನ್ ಹಗ್ಗದಿಂದ ಬಿಗಿದು ಅತ್ಯಾಚಾರವೆಸಗಿ ಕೊಲೆಗೈದಿರುವುದು ವಿಚಾರಣೆಯ ವೇಳೆ ದೃಢಪಟ್ಟಿದೆ.
ಆರೋಪಿ ರವಿರಾಜ್ ಶೆಟ್ಟಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದೆ. ಡ್ರಗ್ಸ್ , ಗಾಂಜಾ ಸೇವನೆ ಹಾಗೂ ಅತ್ಯಾಚಾರ ಎಸಗಿರುವ ಬಗ್ಗೆ ವೈದ್ಯಕೀಯ ವರದಿ ಬಳಿಕವೇ ದೃಢಪಡಿಸಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ಸ್ ಪೆಕ್ಟರ್ ಸಂದೀಪ್ ಮತ್ತು ಅವರ ತಂಡ ಆರೋಪಿಯನ್ನು ಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Ganja Addict son kills mother at Kateel in Mangalore after trying to rape her. A 60-year-old woman died under mysterious circumstances at Durga Nagar of Kondela Village under the Kinnigoli Town Panchayat on Sunday,
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm