ಬ್ರೇಕಿಂಗ್ ನ್ಯೂಸ್
03-11-23 08:09 pm HK News Desk ಕ್ರೈಂ
ಹಾಸನ, ನ.3: ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ಗಲಾಟೆ ನಡೆದು, ಪತಿಯ ಏಟಿಗೆ ಪತ್ನಿ ಸ್ಥಳದಲ್ಲೇ ಸಾವು ಕಂಡಿದ್ದಳು. ಪೊಲೀಸರಿಗೆ ತಿಳಿದರೆ ಜೈಲು ಸೇರುತ್ತೇನೆಂಬ ಭಯದಲ್ಲಿ ಶವವನ್ನು ತೋಟದಲ್ಲಿಯೇ ಹೂತಿಟ್ಟು ಪತಿ ಊರು ಬಿಟ್ಟಿದ್ದ. ಆದರೆ ಮೂರು ತಿಂಗಳ ಬಳಿಕ ಬೀದಿ ನಾಯಿಗಳಿಂದಾಗಿ ಆರೋಪಿ ಪತಿರಾಯ ಸಿಕ್ಕಿಬಿದ್ದಿದ್ದಾನೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಂತಿವಾಸು (28) ಹತ್ಯೆಯಾದವಳು. ಪವನ್ ಕುಮಾರ್ ಆರೋಪಿ. ಮೂರು ತಿಂಗಳ ಹಿಂದೆ ಪವನ್ ಕುಮಾರ್ ಹಾಗೂ ಶಾಂತಿವಾಸು ನಡುವೆ ಗಲಾಟೆ ನಡೆದಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಪವನ್ ಕುಮಾರ್ ಪತ್ನಿ ಶಾಂತಿವಾಸು ಮೇಲೆ ಹಲ್ಲೆ ಮಾಡಿದ್ದ. ಗಂಭೀರ ಗಾಯಗೊಂಡಿದ್ದ ಶಾಂತಿ ಸ್ಥಳದಲ್ಲೇ ಅಸುನೀಗಿದ್ದಳು.
ಪತ್ನಿ ಮೃತಪಟ್ಟಿದ್ದಕ್ಕೆ ಹೆದರಿದ ಪವನ್ ಕುಮಾರ್ ಕೃತ್ಯ ಹೊರಗೆ ಬಂದರೆ ಜೈಲು ಸೇರುವುದು ಗ್ಯಾರಂಟಿ ಎಂದುಕೊಂಡಿದ್ದ. ಕೃತ್ಯದಿಂದ ಬಚಾವ್ ಆಗಬೇಕು ಎಂದುಕೊಂಡವನು ಮನೆಯ ಸಮೀಪದ ಹಳ್ಳದ ಪಕ್ಕದ ಗುಂಡಿಯಲ್ಲಿ ಮಣ್ಣು ತೆಗೆದು ಶವನ್ನು ಹೂತು ಹಾಕಿದ್ದ. ಬಳಿಕ ಮಕ್ಕಳೊಂದಿಗೆ ರಾತ್ರೋರಾತ್ರಿ ಬೆಂಗಳೂರಿಗೆ ಹೋಗಿದ್ದ.
ಮೂರು ತಿಂಗಳ ಕಾಲ ಆರಾಮಾಗಿದ್ದ ಆತ ನಾಯಿ ಕಾಟದಿಂದ ಸಿಕ್ಕಿಬಿದ್ದಿದ್ದಾನೆ. ನ.2ರಂದು ಏನೋ ವಾಸನೆ ಬಂದು ಬೀದಿ ನಾಯಿಗಳು ಮಣ್ಣಿನಿಂದ ಮೃತದೇಹದ ಮೂಳೆಯನ್ನು ತೆಗೆದು ಹೊರಗೆ ಎಳೆದಾಡಿದೆ. ಇದನ್ನು ತೋಟದ ಮಾಲೀಕರು ನೋಡಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನ.3ರ ಬೆಳಗ್ಗೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹದ ಕಳೇಬರವನ್ನು ಹೊರತೆಗೆದಿದ್ದಾರೆ. ಬಟ್ಟೆಯ ಆಧಾರದಲ್ಲಿ ಹೆಣ್ಣಿನ ಮೃತದೇಹವೆಂದು ಪತ್ತೆ ಮಾಡಿದ ಪೊಲೀಸರು ಸ್ಥಳೀಯರಲ್ಲಿ ವಿಚಾರಿಸಿದಾಗ ಪವನ್ ಕುಮಾರ್ ಬಗ್ಗೆ ಮಾಹಿತಿ ನೀಡಿದ್ದರು. ಸಕಲೇಶಪುರ ನಗರ ಠಾಣೆ ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದು ತನಿಖೆ ಮುಂದುವರಿಸಿದ್ದಾರೆ.
They fell in love with each other and got married. As a result of their love, two children were born. Meanwhile, there was a fight between the husband and wife over a trivial issue. The quarrel turned violent and he killed the husband and wife who had given him wisdom in the hands of anger. He had buried himself in the mud without anyone's knowledge and left the village. But three months later, the accused was caught by stray dogs.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm