Mangalore crime news: ಬಿಜೈನಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಕರಿಮಣಿ ಸರ ಎಗರಿಸಿದ ಪ್ರಕರಣ ; ಬಿಡದಿ ಮೂಲದ ಕುಖ್ಯಾತ ಸರಗಳ್ಳ ಸೆರೆ 

04-11-23 09:19 pm       Mangalore Correspondent   ಕ್ರೈಂ

ಬಿಜೈ ಚರ್ಚ್ ಮೈನ್ ರೋಡ್ ನಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದಾಗ ಇಬ್ಬರು ಅಪರಿಚಿತ ಯುವಕರು ಬೈಕ್ ನಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಸುಲಿಗೆ ಮಾಡಿದ ಪ್ರಕರಣದ ಬೆನ್ನತ್ತಿದ ಪೊಲೀಸರು ಕುಖ್ಯಾತ ಸರ ಕಳ್ಳನನ್ನು ಬಂಧಿಸಿದ್ದಾರೆ. 

ಮಂಗಳೂರು, ನ.4: ಬಿಜೈ ಚರ್ಚ್ ಮೈನ್ ರೋಡ್ ನಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದಾಗ ಇಬ್ಬರು ಅಪರಿಚಿತ ಯುವಕರು ಬೈಕ್ ನಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಸುಲಿಗೆ ಮಾಡಿದ ಪ್ರಕರಣದ ಬೆನ್ನತ್ತಿದ ಪೊಲೀಸರು ಕುಖ್ಯಾತ ಸರ ಕಳ್ಳನನ್ನು ಬಂಧಿಸಿದ್ದಾರೆ. 

ಅ.21ರಂದು ಘಟನೆ ನಡೆದಿದ್ದು ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತ್ತೆಯ ಬಗ್ಗೆ ಮಂಗಳೂರು ಸಿಸಿಬಿ ಘಟಕದಿಂದ ವಿಶೇಷ ತಂಡವನ್ನು ರಚಿಸಲಾಗಿತ್ತು. ಆರೋಪಿ ಚಂದ್ರಶೇಖರ ಅಲಿಯಾಸ್ ಡಾರ್ಲಿಂಗ್ ಚಂದ್ರ ಎಂಬಾತನನ್ನು ಪೊಲೀಸರು ಬಂಗ್ರಕೂಳೂರು ಬಳಿಯಿಂದ ದಸ್ತಗಿರಿ ಮಾಡಿದ್ದಾರೆ.  ಆರೋಪಿ ಸುಲಿಗೆ ಮಾಡಿದ್ದ  21.300 ಗ್ರಾಂ ತೂಕದ ತುಂಡಾದ ಚಿನ್ನದ ಕರಿಮಣಿ ಸರವನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ KA-41-EW-8959 ಮೋಟಾರ್ ಸೈಕಲ್ ಅನ್ನು ವಶಕ್ಕೆ ಪಡೆದಿದ್ದಾರೆ. 

ಆರೋಪಿಯಿಂದ 21.3 ಗ್ರಾಂ ತೂಕದ ತುಂಡಾದ ಚಿನ್ನದ ಕರಿಮಣಿ ಸರ-1, VIVO ಕಂಪನಿಯ ಮೊಬೈಲ್ ಫೋನ್-1, HERO ಕಂಪನಿಯ ಕೀಪ್ಯಾಡ್ ಮೊಬೈಲ್ ಫೋನ್ – 1, KA-41-EW-8959   ಬಿಳಿ ಬಣ್ಣದ ಬಜಾಜ್ ಕಂಪನಿಯ ಪಲ್ಸರ್ NS 200  ಮೋಟಾರ್ ಸೈಕಲ್ ವಶಪಡಿಸಿಕೊಂಡಿದ್ದು ಇದರ ಒಟ್ಟು ಮೌಲ್ಯ 2,41,000 ರೂ. ಆಗಬಹುದು. 
              
ಆರೋಪಿತ ಡಾರ್ಲಿಂಗ್ ಚಂದ್ರ(29) ರಾಮನಗರ ಜಿಲ್ಲೆಯ ಬಿಡದಿ ನಿವಾಸಿಯಾಗಿದ್ದು ಈ ಹಿಂದೆ ಹಾರೋಹಳ್ಳಿ ಪೊಲೀಸ್ ಠಾಣೆ, ಕುಂಬ್ಳಗೋಡು, ಬಿಡದಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆ ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಸುಲಿಗೆ, ಕೊಲೆ, ಕೊಲೆಯತ್ನ ಹಾಗೂ ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Police arrest Darling Chandra in chain snatching case in Mangalore.