Mines woman officer Pratima murder, Car driver arrested: ಭೂ ವಿಜ್ಞಾನಿ ಅಧಿಕಾರಿ ಕೊಲೆ ; ಮಾಜಿ ಕಾರ್ ಡ್ರೈವರ್ ವಶಕ್ಕೆ, ಕೆಲಸದಿಂದ ವಜಾಗೊಳಿಸಿದ್ದೇ ಹತ್ಯೆಗೆ ಕಾರಣ ? 

06-11-23 12:03 pm       Bangalore Correspondent   ಕ್ರೈಂ

ಹಿರಿಯ ಗಣಿ ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಅವರ ಚಾಲಕನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಬೆಂಗಳೂರು, ನ.6:  ಹಿರಿಯ ಗಣಿ ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಅವರ ಚಾಲಕನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕಾಂಟ್ರಾಕ್ಟ್ ಬೇಸಿಸ್ ನಲ್ಲಿ ಕಿರಣ್ ಕೆಲಸ ಮಾಡುತ್ತಿದ್ದ. ಕಳೆದ ಐದು ವರ್ಷಗಳಿಂದ ಕೆಲಸ ಮಾಡ್ತಿದ್ದ ಕಿರಣ್‍ಗೆ ಕೆಲವೊಂದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಮಾ ನಡುವೆ ಭಿನ್ನಾಭಿಪ್ರಾಯ ಬಂದಿತ್ತು. ಹೀಗಾಗಿ ಕೆಲ ದಿನಗಳ ಹಿಂದೆಯಷ್ಟೇ ಕಿರಣ್‍ನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಕಿರಣ್ ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಕಿರಣ್ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕರಾದ್ದರು. ಸದ್ಯ ಕೃತ್ಯ ನಡೆದ ಬಳಿಕ ಕಿರಣ್ ಚಾಮರಾಜನಗರ ಕಡೆಗೆ ಎಸ್ಕೇಪ್ ಆಗಿದ್ದ. ಈ ವೇಳೆ ಚಾಮರಾಜನಗರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉತ್ತಮ ಅಧಿಕಾರಿಯಾಗಿದ್ದ ಪ್ರತಿಮಾ, ಇಲಾಖೆಗೆ ಸಂಬಂಧಿಸಿದಂತೆ ಕೆಲವೆಡೆ ದಾಳಿ ನಡೆಸಿ ದಿಟ್ಟತನ ಪ್ರದರ್ಶಿಸಿದ್ದರು. ಆದರೆ ಯಾವುದೇ ವೈರಿಗಳನ್ನೂ ಹೊಂದಿರಲಿಲ್ಲ. ಇಲಾಖೆಯಲ್ಲಿನ ನಿಯಮಗಳನುಸಾರ ಕರ್ತವ್ಯ ನಿರ್ವಹಿಸುತ್ತಾ ಉತ್ತಮ ಹೆಸರು ಸಂಪಾದಿಸಿದ್ದರು ಎಂದು ಅವರ ಸಹೋದ್ಯೋಗಿಗಳು ಹೇಳಿದ್ದಾರೆ.

Man Buys Butcher Knife Online, Uses It For Murder | Nagpur News - Times of  India

ಮನೆಗೆ ನುಗ್ಗಿ ಚಾಕು ಇರಿದು ಹತ್ಯೆಗೈದಿರುವ ಘಟನೆ ಶನಿವಾರ ರಾತ್ರಿ 8:30ರ ಸುಮಾರಿಗೆ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್ಮೆಂಟಿನಲ್ಲಿ ನಡೆದಿತ್ತು. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತುಡ್ಕಿ ಮೂಲದ ಪ್ರತಿಮಾ ಅವರಿಗೆ ಭೂ ವಿಜ್ಞಾನ ಇಲಾಖೆಯಲ್ಲಿ ನೌಕರಿ ದೊರೆತಿದ್ದರಿಂದ ಬೆಂಗಳೂರಲ್ಲಿ ವಾಸಿಸುತ್ತಿದ್ದರು. ಗಂಡ ಮತ್ತು ಮಗ ತೀರ್ಥಹಳ್ಳಿಯಲ್ಲೇ ವಾಸವಿದ್ದರು. ಶನಿವಾರ ರಾತ್ರಿ 8 ಗಂಟೆಗೆ ಕಚೇರಿಯಿಂದ ಕಾರಿನಲ್ಲಿ ಪ್ರತಿಮಾ ಮನೆಗೆ ಆಗಮಿಸಿದ್ದರು. ಕಾರು ಚಾಲಕ ಡ್ರಾಪ್ ಮಾಡಿ ಮನೆಗೆ ತೆರಳಿದ್ದರು. ನಂತರ ಮನೆಗೆ ನುಗ್ಗಿ ಚಾಕು ಇರಿದು ಕೊಲೆ ಮಾಡಲಾಗಿತ್ತು.

ಪ್ರತಿಮಾ ಸಹೋದರ ರಾತ್ರಿ ಕರೆ ಮಾಡಿದರೂ ಫೋನ್ ರಿಸೀವ್ ಮಾಡಿರಲಿಲ್ಲ. ಇದರಿಂದ ಅನುಮಾನಗೊಂಡು ಅಪಾರ್ಟ್ಮೆಂಟ್​ನ ಕೆಳಗಿನ ಮನೆಯವರಿಗೆ ಫೋನ್ ಮಾಡಿ ತಿಳಿಸಿದ್ದರು. ಆಗ ಕೆಳಗಿನ ಮನೆಯವರು ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.

Karnataka CM Siddaramaiah addresses to the media after the pre-cabinet  meeting

ಮನೆಯಲ್ಲಿ ಏನೂ ಕಳ್ಳತನವಾಗಿಲ್ಲ. ಮನೆಗೆ ನುಗ್ಗಿ ಹತ್ಯೆಗೈದಿರುವುದರಿಂದ ಇದು ಪೂರ್ವನಿಯೋಜಿತ ಕೃತ್ಯ ಎಂದು ಪೊಲೀಸರು ಶಂಕಿಸಿದ್ದಾರೆ. ತನಿಖೆಯಿಂದ ಕೊಲೆಯ ಹಿಂದಿನ ನಿಜವಾದ ಕಾರಣ ತಿಳಿದುಬರಲಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದಾರೆ.

ಹತ್ಯೆ ಪ್ರಕರಣ ಸಂಬಂಧ ಹಂತಕರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈಗಾಗಲೇ ವಿಶೇಷ ತಂಡ ರಚನೆಯಾಗಿದ್ದು, ತನಿಖೆ ಚುರುಕುಗೊಂಡಿದೆ. ಒಂದು ಕಡೆ ಹಂತಕರ ಪತ್ತೆಗೆ ಶೋಧ ನಡೆಯುತ್ತಿದ್ದರೆ, ಮತ್ತೊಂದೆಡೆ ಸಿಡಿಆರ್ ಮತ್ತು ಟವರ್ ಡಂಪ್ ತೆಗೆದು ಪರಿಶೀಲನೆ ನಡೆಸುತ್ತಿದ್ದಾರೆ. ಕೊನೆಯದಾಗಿ ಪ್ರತಿಮಾ ಯಾರೊಂದಿಗೆ ಮಾತನಾಡಿದ್ದು, ಅವರ ನಂಬರ್‌ನ ಕೊನೆಯ ಎಲ್ಲ ಕಾಲ್ ಡಿಟೈಲ್ಸ್ ತೆಗೆಯಲಾಗುತ್ತಿದೆ.

ಮಾತ್ರವಲ್ಲದೆ ಪ್ರತಿಮಾ ಅವರು ಕೊನೆಯದಾಗಿ ಯಾವ ಯಾವ ಕೇಸ್ ಬಗ್ಗೆ ಪರಿಶೀಲನೆ ನಡೆಸಿದ್ದರು? ಇತ್ತೀಚೆಗೆ ಎಲ್ಲಿಯಾದರೂ ರೇಡ್ ಮಾಡಿದ್ದರಾ? ಅವರ ಬಳಿ ಇದ್ದ ಎಲ್ಲಾ ಕೇಸ್ ಫೈಲ್‌ಗಳ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ, ನೆಲಮಂಗಲ, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕುಗಳ ಕೇಸ್‌ಗಳ ಬಗ್ಗೆ, ಅವರ ಕಚೇರಿಗೆ ಯಾರೆಲ್ಲಾ ಭೇಟಿಯಾದರು? ಎಂಬುದರ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.

DH Deciphers | Is illegal quarrying going the illegal mining way in  Karnataka?

ಅಕ್ರಮ ಕಲ್ಲು ಗಣಿಗಾರಿಕೆಗೆ ಬ್ರೇಕ್ ಹಾಕಿದ್ದಕ್ಕೆ ಪ್ರತಿಮಾ ಹತ್ಯೆ ನಡೀತಾ?

ಹೀಗೊಂದು ಸಹಜ ಪ್ರಶ್ನೆ ಕಾಡುತ್ತಿದೆ. ಕಳೆದ ಜುಲೈನಲ್ಲಿ ಹುಣಸೆಮಾರನಹಳ್ಳಿ ಅಕ್ರಮ ಕಲ್ಲು ಗಣಿಗಾರಿಕೆ ಅಡ್ಡೆ ಮೇಲೆ ಪ್ರತಿಮಾ ದಾಳಿ ಮಾಡಿದ್ದರು. ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಕ್ವಾರಿ ಕ್ಲೋಸ್ ಮಾಡಿ ಜಿಲ್ಲಾಧಿಕಾರಿಗೆ ಪ್ರತಿಮಾ ವರದಿ ನೀಡಿದ್ದರು.

ಹುಣಸೆಮಾರನಹಳ್ಳಿ ಸರ್ವೆ ನಂ. 177 , 179ರ 4 ಎಕರೆ ಪ್ರದೇಶದಲ್ಲಿ ಸ್ಫೋಟಕಗಳನ್ನು ಬಳಸಿ ಕಲ್ಲುಬಂಡೆಗಳನ್ನು ಒಡೆದು ಗಣಿಗಾರಿಕೆ ಮಾಡಲಾಗುತ್ತಿತ್ತು. ಹಿಡುವಳಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಆರೋಪದಡಿ ದಾಳಿ ನಡೆಸಿದ್ದರು. ಸರ್ಕಾರಕ್ಕೆ ಸುಮಾರು 25 ಲಕ್ಷಕ್ಕೂ ಹೆಚ್ಚು ರಾಜಧನ ತೆರಿಗೆ ವಂಚಿಸಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ವರದಿ ನೀಡಿದ್ದರು. ಸದ್ಯ ಪ್ರತಿಮಾ ಹತ್ಯೆ ಬಳಿಕ ಅವರು ಮಾಡಿದ್ದ ಎಲ್ಲ ದಾಳಿ ಹಾಗೂ ಕಡತಗಳ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

Lack of dialogue major cause of divorce' | Nagpur News - Times of India

ದಾಂಪತ್ಯದಲ್ಲಿ ಬಿರುಕು?

ಪತ್ನಿ ಪ್ರತಿಮಾ ಕೊಲೆ ಸುದ್ದಿ ಕೇಳಿ ಬೆಂಗಳೂರಿಗೆ ಪತಿ ಸತ್ಯನಾರಾಯಣ ಕಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿದರು. ಇವರಿಬ್ಬರ ಮಧ್ಯೆ ಕೆಲ ವರ್ಷಗಳಿಂದ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ಹೀಗಾಗಿ ಇಬ್ಬರು ಪರಸ್ಪರ ಒಪ್ಪಂದದ ಮೇರೆಗೆ ದೂರಾಗಿದ್ದರು. ಆದರೆ ಇತ್ತೀಚೆಗೆ ಮತ್ತೆ ಒಂದಾಗಿದ್ದರು. ಹದಿನೈದು ದಿನಗಳ ಹಿಂದೆ ಊರಿನಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮಕ್ಕೂ ಪ್ರತಿಮಾ ಪತಿ ಜೊತೆಗೆ ಭಾಗಿಯಾಗಿದ್ದರು.

ಪತಿ ಸ್ವಗಾಮ್ರದಲ್ಲೇ ಅಂತ್ಯಸಂಸ್ಕಾರ ;

2008 ಬ್ಯಾಚ್‌ನ ಅಧಿಕಾರಿಯಾದ ಪ್ರತಿಮಾ ಗ್ರೂಪ್ “ಬಿ” ದರ್ಜೆಯ ಅಧಿಕಾರಿಯಾಗಿದ್ದರು. ಪ್ರತಿಮಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಿಮ್ಸ್ ಆಸ್ಪತ್ರೆಗೆ ಸಹದ್ಯೋಗಿಗಳು ಆಗಮಿಸಿ ಕಣ್ಣೀರು ಹಾಕಿದರು. ಸದ್ಯ ಪ್ರತಿಮಾ ಮೃತದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದೆ. ಪತಿ ಸತ್ಯನಾರಾಯಣ ಅವರ ಸ್ವಗ್ರಾಮ ತೀರ್ಥಹಳ್ಳಿಯ ತುಡುಕಿಯಲ್ಲಿ ಅಂತ್ಯಸಂಸ್ಕಾರಕ್ಕೆ ನಿರ್ಧಾರ ಮಾಡಲಾಗಿದೆ.

CCTV System Installers Edinburgh | Close Circuit Television

ಮನೆ ಬಳಿ ಇಲ್ಲ ಸಿ.ಸಿ.ಟಿ.ವಿ  ದೃಶ್ಯಗಳಿಗಾಗಿ ಪೊಲೀಸರ ಹುಡುಕಾಟ ; 

ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಆರೋಪಿಗಳ ಪತ್ತೆಗಾಗಿ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಹುಡುಕಾಡುತ್ತಿದ್ದಾರೆ. ಆದರೆ, ಪ್ರತಿಮಾ ಮನೆ ಬಳಿ ಕ್ಯಾಮೆರಾಗಳಿರಲಿಲ್ಲವೆಂಬುದು ಗೊತ್ತಾಗಿದೆ.

‘ಪ್ರತಿಮಾ ಅವರ ಮನೆ ಹಾಗೂ ಸುತ್ತಮುತ್ತ ಯಾವುದೇ ಸ್ಥಳದಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳಿಲ್ಲ. ಕೃತ್ಯ ನಡೆಯುತ್ತಿದ್ದಂತೆ ಕ್ಯಾಮೆರಾಗಳಿಗಾಗಿ ಹುಡುಕಾಟ ನಡೆಸಲಾಯಿತು. ಮನೆಯಿಂದ 1 ಕಿ.ಮೀ ದೂರದಲ್ಲಿರುವ ಬೇರೆ ಸ್ಥಳಗಳಲ್ಲಿ ಕ್ಯಾಮೆರಾಗಳಿವೆ. ಎಲ್ಲ ಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಿ ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

Karnataka Travel Restrictions: Negative Covid-19 reports now must for  travellers from Tamil Nadu | Bengaluru News - Times of India

ತಮಿಳುನಾಡಿನಿಂದ ಬರುವ ವಾಹನ ಪರಿಶೀಲಿಸಲು ಹೇಳಿದ್ದೆ ಎಂದ ಜಿಲ್ಲಾಧಿಕಾರಿ ; 

‘ಅಕ್ರಮವಾಗಿ ಜಲ್ಲಿಕಲ್ಲು ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ದೂರುಗಳಿದ್ದವು. ಈ ಬಗ್ಗೆ ಚರ್ಚಿಸಲು ತಿಂಗಳ ಹಿಂದೆಯಷ್ಟೇ ಸಭೆ ನಡೆಸಿದ್ದೆ. ಈ ಸಭೆಯಲ್ಲಿ ಪ್ರತಿಮಾ ಅವರೂ ಹಾಜರಾಗಿದ್ದರು. ತಮಿಳುನಾಡಿನಿಂದ ಬರುವ ವಾಹನಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚಿಸಿದ್ದೆ’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಹೇಳಿದರು.

ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪ್ರತಿಮಾ, ಉತ್ತಮ ಅಧಿಕಾರಿ. ಕೆಲಸದಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಜೊತೆಗೆ, ಯಾವುದೇ ದೂರುಗಳೂ ಬಂದಿರಲಿಲ್ಲ. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ’ ಎಂದರು.

Senior woman mines officer Pratima murder, Car driver arrested by Bangalore Police. Recently he was been terminated by Job by Pratima as she was not happy with his behaviour. The police are now interrogating driver kiran.