Murugashree, High court Bail: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ; ಮುರುಘಾಶ್ರೀ ಗೆ ಜಾಮೀನು, ಆದ್ರೆ ಸದ್ಯಕಿಲ್ಲ ಬಿಡುಗಡೆ ಭಾಗ್ಯ

08-11-23 05:56 pm       Bangalore Correspondent   ಕ್ರೈಂ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗೆ ಜಾಮೀನು ಸಿಕ್ಕಿದೆ.

ಬೆಂಗಳೂರು, ನ.8: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗೆ ಜಾಮೀನು ಸಿಕ್ಕಿದೆ. ಒಂದು ಪ್ರಕರಣದಲ್ಲಿ ಮಾತ್ರ ಮುರುಘಾ ಶ್ರೀಗೆ ಜಾಮೀನು ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಬಿಡುಗಡೆ ಭಾಗ್ಯ ಇಲ್ಲ. ಜಾಮೀನ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವ ಕೋರ್ಟ್​, ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂದು ಹೇಳುವ ಮೂಲಕ ಚಿತ್ರದುರ್ಗ ಹೋಗದಂತೆ ಷರತ್ತು ವಿಧಿಸಿದೆ. ಮೊದಲು ದಾಖಲಾಗಿದ್ದ ಒಂದು ಪ್ರಕರಣದಲ್ಲಿ ಜಾಮೀನು ಲಭ್ಯವಾಗಿದ್ದು, ಪೋಕ್ಸೋ ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣದಲ್ಲಿ ಅವರು ಜೈಲಿನಲ್ಲಿ ಉಳಿದುಕೊಳ್ಳಲಿದ್ದಾರೆ.

ವಕೀಲರು ಹೇಳಿದ್ದೇನು?

ಈ ಬಗ್ಗೆ ಮಾಹಿತಿ ನೀಡಿರುವ ಮುರುಘಾಶ್ರೀ ಪರ ವಕೀಲಸ್ವಾಮೀನಿ ಗಣೇಶ್, ಏಳು ಷರತ್ತುಗಳ ಮೇಲೆ ಮುರುಘಾಶ್ರೀ ಜಾಮೀನು ಲಭ್ಯವಾಗಿದೆ. ಪಾಸ್‌ಪೋರ್ಟ್ ಸರೆಂಡರ್‌ ಮಾಡಬೇಕು. ವಿಟ್ನೆಸ್ ಗಳ ಮೇಲೆ ಪ್ರಭಾವ ಬೀರಬಾರದು. ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ. ಎರಡು ಲಕ್ಷ ಬಾಂಡ್ ಹಾಗೂ ಇಬ್ಬರು ವ್ಯಕ್ತಿಗಳ ಶ್ಯೂರಿಟಿ ಮೇರೆಗೆ ಜಾಮೀನು ಮಂಜೂರು ಮಾಡಲಾಗಿದೆ ಎಂಬ ವಿವರಿಸಿದ್ದಾರೆ.

Will behead myself if I make mistakes: Karnataka HC judge slams charges by  advocates - India Today

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಮುರುಘಾ ಶ್ರೀ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿದ್ದು, ಇದೀಗ ನ್ಯಾಯಾಲಯ ಮುರುಘಾ ಶ್ರೀಗೆ ಜಾಮೀನು  ಮಾಡಿದೆ. 

2022ರ ಸೆಪ್ಟೆಂಬರ್ 1ರಿಂದ ಜೈಲುವಾಸ ಅನುಭವಿಸುತ್ತಿರುವ ಮುರುಘಾ ಶ್ರೀಯ ಜಾಮೀನು ಅರ್ಜಿಯನ್ನು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿತ್ತು. ನಂತರ ಜಾಮೀನಿಗಾಗಿ ಮುರುಘಾ ಶ್ರೀ ಪರ ವಕೀಲರು ಹೈಕೋರ್ಟ್​ ಮೆಟ್ಟಲೇರಿದ್ದರು. ಈ ಜಾಮೀನು ಅರ್ಜಿಯ ತೀರ್ಪನ್ನು ಇಂದು ಕರ್ನಾಟಕ ಹೈಕೋರ್ಟ್ ಪ್ರಕಟಿಸಿದೆ.

Mahmud Mansoori tries to rape minor tribal girl in Sagbara, case filed  under POCSO - Oneindia News

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಮುರುಘಾ ಶ್ರೀ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಕದ ತಟ್ಟಿದ್ದರು. ಚಿತ್ರದುರ್ಗದ ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿರುವ ನಮ್ಮನ್ನು ಮುರುಘಾ ಶ್ರೀ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು.

ಅಲ್ಲದೇ, ಮುರುಘಾ ಶ್ರೀಗಳಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ನಶೆ ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಎಂದು ಆರೋಪಿಸಿ ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು.

In connection with the case of sexual assault on minor girls, Dr. K.S. Sudhakar of Muruga Mutt in Chitradurga has been arrested. Shivamurthy Sri has been granted bail.