ಬ್ರೇಕಿಂಗ್ ನ್ಯೂಸ್
09-11-23 02:49 pm Mangalore Correspondent ಕ್ರೈಂ
ಮಂಗಳೂರು, ನ.9: ಬಿಜೈ ರಾಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
2012ನೇ ಇಸವಿಯಲ್ಲಿ ರವಿ ಪೂಜಾರಿ ಮತ್ತು ಸಹಚರರು ಒಳಸಂಚು ನಡೆಸಿ, ಶೈಲೇಶ್ ರಾಜ ಅಲಿಯಾಸ್ ಬಿಜೈ ರಾಜನನ್ನು ತಲವಾರಿನಿಂದ ಕಡಿದು ಕೊಲೆ ಮಾಡಿಸಿದ ಬಗ್ಗೆ ಮಂಗಳೂರಿನ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ರವಿ ಪೂಜಾರಿ ಮತ್ತು ಅತನ ಸಹಚರರ ಮೇಲೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ಕೊಲೆ ನಡೆದ ಸಂದರ್ಭದಲ್ಲಿ ರವಿ ಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಆನಂತರ 2021ರಲ್ಲಿ ರವಿ ಪೂಜಾರಿಯನ್ನು ಸೆನೆಗಲ್‌ನಲ್ಲಿ ಬಂಧಿಸಿದ್ದು, ತದನಂತರ ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಭಾರತಕ್ಕೆ ಹಸ್ತಾಂತರಿಸಿದ ನಂತರ ಆತನ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ರವಿ ಪೂಜಾರಿ ವಿರುದ್ಧ ದಾಖಲಾದ ಎರಡು ಪ್ರಕರಣಗಳಲ್ಲಿ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಒಂದು ಪ್ರಕರಣದಲ್ಲಿ ಜೆಎಂಎಫ್ ಸಿ ನ್ಯಾಯಾಲಯ ಒಟ್ಟು 4 ಪ್ರಕರಣಗಳಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ರವಿ ಪೂಜಾರಿ ವಿರುದ್ಧ ಹಲವು ಪ್ರಕರಣಗಳು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನಿಖೆಗೆ ಬಾಕಿ ಇರುತ್ತದೆ. ರವಿ ಪೂಜಾರಿ ಪರವಾಗಿ ಮಂಗಳೂರಿನ ಖ್ಯಾತ ವಕೀಲ ಬಿ. ಅರುಣ್ ಬಂಗೇರ ಮತ್ತು ರಿಹಾನಾ ಪರ್ವೀನ್ ವಾದಿಸಿದ್ದರು.
Mangalore Bejai Raja murder, Underworld don Ravi Poojary acquitted from four cases. Bejai Raja (46), who was an accused in two murder cases was hacked to death by a group of three unidentified persons in the ground floor of Westgate Terminus building in Mangalore.
11-01-25 10:53 pm
HK News Desk
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
BBMP Raid, Lokayukta; ಬಿಬಿಎಂಪಿ 50 ಕಡೆಗಳಲ್ಲಿ ಲ...
11-01-25 09:14 pm
CT Ravi,Threat, Lakshmi Hebbalkar; ಬೆಳಗಾವಿ ಅಭ...
11-01-25 02:11 pm
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
11-01-25 10:34 pm
Mangalore Correspondent
Mangalore Lit Fest 2025, Hardeep Singh Puri;...
11-01-25 07:19 pm
DYFI, CM Siddaramaiah, IPS Anupam Agrawal; ಪೊ...
11-01-25 04:57 pm
Lava Kusha Jodukare Kambala, Mangalore; ತೃತೀಯ...
11-01-25 02:25 pm
Mangalore Annamalai, Naxals: ನಕ್ಸಲ್ ಶರಣಾಗತಿ ಬ...
11-01-25 12:44 pm
11-01-25 10:21 pm
Mangalore Correspondent
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm