ಬ್ರೇಕಿಂಗ್ ನ್ಯೂಸ್
25-11-23 06:18 pm Mangalore Correspondent ಕ್ರೈಂ
ಮಂಗಳೂರು, ನ.25: ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆಯಲ್ಲಿ ಕೋಟ್ಯಂತರ ಬೆಲೆಯ ಮತ್ತೊಂದು ಪ್ರಕರಣ ಪತ್ತೆ ಮಾಡಿದ್ದು 1.62 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿತರನ್ನು ಚಿಕ್ಕಮಗಳೂರು ಜಿಲ್ಲೆಯ ತಮಿಳ್ ಕಾಲನಿ ನಿವಾಸಿ, ಹಾಲಿ ವಾಸ ವಿಟ್ಲ ಮಂಗಿಲಪದವು ನಿವಾಸಿ ಪ್ಯಾರೇಜಾನ್ @ ಸೇಟು(37), ವಿಟ್ಲ ಮಂಗಿಲಪದವು ನಿವಾಸಿ ಬದ್ರುದ್ದೀನ್ @ ಬದ್ರು (28), ನಾಗಪಟ್ಟಿನಂ ಜಿಲ್ಲೆ ಕೋಯಿಲ್ ಟೆಂಪಲ್ ಸ್ಟ್ರೀಟ್ ನಿವಾಸಿ ರಾಜೇಶ್ ಆರ್ (22) ಎಂದು ಗುರುತಿಸಲಾಗಿದೆ.
ನ.25 ರಂದು ಮಂಗಳೂರು ನಗರದ ಪಂಪ್ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಹತ್ತಿರ 4 ಜನ ವ್ಯಕ್ತಿಗಳು ಸ್ವಿಫ್ಟ್ ಕಾರಿನಲ್ಲಿ ಅಂಬರ್ ಗ್ರೀಸ್ ಅನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮೂರು ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ, ದಸ್ತಗಿರಿ ಮಾಡಿದ ಮೂರು ಆರೋಪಿತರಿಂದ 1,57,50,000/- ರೂ ಮೌಲ್ಯದ 1.575 ಕೆಜಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್), ಕಾರು ಹಾಗೂ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳಿಂದ 1.575 ಕೆಜಿ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್, 1,57,50,000/-) REDMI ಕಂಪನಿಯ ಮೊಬೈಲ್ ಫೋನ್ -1 (10,000/-) ಕೆಎ-25-MG-0625 ನೇ ಸಿಲ್ವರ್ ಬಣ್ಣದ ಸ್ವಿಫ್ಟ್ (5,00,000/-) MOTOROLA ಕಂಪನಿಯ ಮೊಬೈಲ್ ಫೋನ್ -1 (10,000/-), REDMI ಕಂಪನಿಯ ಮೊಬೈಲ್ ಫೋನ್ -1 (10,000/-) ವಶಪಡಿಸಿಕೊಂಡಿದ್ದಾರೆ.
ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ನೇತೃತ್ವದಲ್ಲಿ ಸಿಸಿಬಿ ಘಟಕದ ಸಿಬ್ಬಂದಿ ಮಾಡಿದ್ದರು. ನ.19ರಂದು 7.73 ಕೋಟಿ ಮೌಲ್ಯದ ಅಂಬರ್ ಗ್ರೀಸನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು.
Also Read: ಮಂಗಳೂರು ಸಿಸಿಬಿ ಮೇಜರ್ ಕಾರ್ಯಾಚರಣೆ ; ಎಂಟು ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ, ಇಬ್ಬರ ಬಂಧನ
After 7 crore worh Ambergris seized by Mangalore CCB Police, another 1.5 crore Ambergris seized at Pumpwell in which three have been arretsed. 7 crore worh Ambergris seized by Mangalore CCB Police, two arrested while trying to sell at Kuntikan junction. Upon valid information received by CCB police, the raid was conducted under the orders of Mangalore Police Commissioner Anupam Agarwal.
11-01-25 10:53 pm
HK News Desk
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
BBMP Raid, Lokayukta; ಬಿಬಿಎಂಪಿ 50 ಕಡೆಗಳಲ್ಲಿ ಲ...
11-01-25 09:14 pm
CT Ravi,Threat, Lakshmi Hebbalkar; ಬೆಳಗಾವಿ ಅಭ...
11-01-25 02:11 pm
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
11-01-25 10:34 pm
Mangalore Correspondent
Mangalore Lit Fest 2025, Hardeep Singh Puri;...
11-01-25 07:19 pm
DYFI, CM Siddaramaiah, IPS Anupam Agrawal; ಪೊ...
11-01-25 04:57 pm
Lava Kusha Jodukare Kambala, Mangalore; ತೃತೀಯ...
11-01-25 02:25 pm
Mangalore Annamalai, Naxals: ನಕ್ಸಲ್ ಶರಣಾಗತಿ ಬ...
11-01-25 12:44 pm
11-01-25 10:21 pm
Mangalore Correspondent
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm