ಬ್ರೇಕಿಂಗ್ ನ್ಯೂಸ್
02-12-23 05:59 pm Bangalore Correspondent ಕ್ರೈಂ
ಬೆಂಗಳೂರು, ಡಿ 02: ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡುತ್ತಿದ್ದೆ. ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ ಎಂದು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಆಗಿದ್ದ ಮಂಜುಳಾ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾಳೆ.
ಮೈಸೂರು ಭ್ರೂಣ ಹತ್ಯೆ ಪ್ರಕರಣದಲ್ಲಿ ಪೊಲೀಸರು ನರ್ಸ್ ಮಂಜುಳಾಳನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ಭ್ರೂಣ ಹತ್ಯೆಯ ಕುರಿತು ಸ್ಫೋಟಕ ಮಾಹಿತಿಗಳನ್ನು ಇಂಚಿಚಾಗಿ ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾಳೆ. ತಿಂಗಳಲ್ಲಿ ಕನಿಷ್ಠ 2 ಪ್ರಕರಣದಲ್ಲಿ 6 ತಿಂಗಳ ಮಕ್ಕಳನ್ನು ಹೊರತೆಗೆದಿದ್ದೇನೆ. ಆ ಮಕ್ಕಳಿಗೆ ಜೀವ ಇರುತ್ತಿತ್ತು. 6 ತಿಂಗಳ ಮಗುವಿಗೆ ಧ್ವನಿ ಇರುವುದಿಲ್ಲ. ಮಗು ಹೊರಗೆ ತೆಗೆದ 5 ರಿಂದ 10 ನಿಮಿಷದಲ್ಲಿ ಸಾಯುತ್ತಿದ್ದವು. ಅದನ್ನು ಪೇಪರ್‌ನಲ್ಲಿ ಸುತ್ತಿ ನಿಸಾರ್ ಎಂಬ ಸ್ಟಾಫ್ ಗೆ ಕೊಡುತ್ತಿದ್ದೆ. ನಿಸಾರ್ ಆ ಮಗುವನ್ನು ತೆಗೆದುಕೊಂಡು ಹೋಗಿ ಕಾವೇರಿ ನದಿಗೆ ಬಿಸಾಕಿ ಬರುತ್ತಿದ್ದ. 12 ವಾರ ಕಳೆದ ಮಕ್ಕಳನ್ನು ಅಬಾರ್ಟ್ ಮಾಡಿ ಮೆಡಿಕಲ್ ವೇಸ್ಟ್‌ಗೆ ಹಾಕುತ್ತಿದ್ದೆವು. 4 ದಿನಕ್ಕೆ ಮೆಡಿಕಲ್ ವೇಸ್ಟ್ ಅಲ್ಲಿ ಮಗು ಕೊಳೆತು ಹೋಗುತ್ತಿತ್ತು ಎಂಬ ಭಯಾನಕ ವಿಚಾರ ಪೊಲೀಸರ ಮುಂದೆ ತೆರೆದಿಟ್ಟಿದ್ದಾಳೆ.
ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವ ಮಂಜುಳಾ, ಕಳೆದೊಂದು ವರ್ಷದಿಂದ ನಾನು ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದೆ. ತಿಂಗಳಿಗೆ 70 ಮಕ್ಕಳನ್ನು ಅಬಾರ್ಷನ್ ಮಾಡಿದ್ದೇನೆ. ಈ ಮೊದಲು ರೀಸ್ಮಾ ಅಬಾರ್ಷನ್ ಮಾಡುವ ಕೆಲಸವನ್ನು ಮಾಡುತ್ತಿದ್ದಳು. ಅವಳಾದ ಬಳಿಕ ನಾನು ಮಗುವನ್ನು ಅಬಾರ್ಷನ್ ಮಾಡುವುದಕ್ಕೆ ಸೇರಿಕೊಂಡಿದ್ದೆ. 6 ತಿಂಗಳ ಮಗುವನ್ನು ನಾನು ಅಬಾರ್ಷನ್ ಮಾಡಿದ್ದೇನೆ ಎಂದಿದ್ದಾಳೆ.
ನಿಸಾರ್ ಮಗುವನ್ನು ನದಿಗೆ ಎಸೆದು ಬರುತ್ತಿದ್ದ. ಯಾವ ಜಾಗದಲ್ಲಿ ಆ ಮಗುವನ್ನು ಬಿಸಾಕುತ್ತಿದ್ದ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ನದಿಯನ್ನು ಬಿಟ್ಟು ಬೇರೆ ಜಾಗದಲ್ಲಿ ಬಿಸಾಕಿದರೆ ಅವಷೇಶಗಳು ಸಿಕ್ಕಿಬಿಡುತ್ತದೆ. ಅದಕ್ಕೆ ನಿಸಾರ್ ಮಗುವನ್ನು ಬಿಸಾಕುವ ಕೆಲಸ ಮಾಡುತ್ತಿದ್ದ. ಭ್ರೂಣ ಹತ್ಯೆ ಮಾಡಿದ ಬಳಿಕ ತೀರಾ ರಕ್ತಸ್ರಾವ ಆಗುತ್ತಿತ್ತು. ಆಗ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳಲು ಆಗುತ್ತಿರಲಿಲ್ಲ. ಆರು ತಿಂಗಳ ಮಗುವನ್ನು ಅಬಾರ್ಷನ್ ಮಾಡುವುದಕ್ಕೆ ಬೇರೆಯೇ ಕಾರಣ ಇತ್ತು. ನಮ್ಮ ಬಳಿ ಅಡ್ವಾನ್ಸ್ ಸ್ಕ್ಯಾನಿಂಗ್ ಮೆಷಿನ್ ಇರಲಿಲ್ಲ. ಕೆಲವೊಮ್ಮೆ ಹೆಣ್ಣು ಭ್ರೂಣನಾ? ಗಂಡು ಭ್ರೂಣನಾ ಎಂದು ಗೊತ್ತಾಗುತ್ತಿರಲಿಲ್ಲ. ಲಿಂಗ ಪತ್ತೆಯಾಗದೇ ಇದ್ದಾಗ ತಿಂಗಳು ಬಿಟ್ಟು ಬರೋದಕ್ಕೆ ಹೇಳುತ್ತಿದ್ದೆವು. ಹೀಗಾಗಿ ಮಗುವನ್ನು ಕಂಡು ಹಿಡಿಯಲು ತಡ ಆದಾಗ 6 ತಿಂಗಳ ಮಗುವನ್ನು ಅಬಾರ್ಷನ್ ಮಾಡಲಾಗುತ್ತಿತ್ತು ಎಂದು ಹೇಳಿಕೆ ನೀಡಿದ್ದಾಳೆ.
ಇನ್ನು ಡಾಕ್ಟರ್ ಚಂದನ್ ಬಲ್ಲಾಳ್ ಪುರಾಣವನ್ನು ಪೊಲೀಸರು ಬಿಚ್ಚಿಟ್ಟಿದ್ದು, ಅಸಲಿಗೆ ಚಂದನ್ ಬಲ್ಲಾಳ್ ಎಂಬಿಬಿಎಸ್ ಡಾಕ್ಟರ್ ಅಲ್ಲವೇ ಅಲ್ಲ. ಅವನು ಸ್ಕ್ಯಾನಿಂಗ್ ಮಾಡೋ ಪಾಠವನ್ನೇ ಕಲಿತಿರಲಿಲ್ಲ. ಚಂದನ್ ಬಲ್ಲಾಳ್ ಬಿಎಎಂಎಸ್ ಓದಿರುವ ಡಾಕ್ಟರ್. ಈತ ಕೇವಲ ಆಯುರ್ವೇದದ ಚಿಕಿತ್ಸೆಯನ್ನು ಮಾತ್ರ ಕೊಡಬೇಕಿತ್ತು. ನರ್ಸಿಂಗ್ ಹೋಂ ತೆಗೆಯೋದಕ್ಕೂ ಈತನಿಗೆ ವಿದ್ಯಾರ್ಹತೆ ಇಲ್ಲ. ಆದರೂ ನರ್ಸಿಂಗ್ ಹೋಂ ತೆಗೆದಿದ್ದ ಎಂದು ಹೇಳಿದ್ದಾರೆ.
Bangalore sex determination racket nurse arrested, reveals shocking details.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm