ಬ್ರೇಕಿಂಗ್ ನ್ಯೂಸ್
18-12-23 12:43 pm Udupi Correspondent ಕ್ರೈಂ
ಉಡುಪಿ, ಡಿ.18: ನಾಪತ್ತೆಯಾಗಿದ್ದ ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಅವರ ದತ್ತು ಪುತ್ರಿ ಮತ್ತು ಆಕೆಯ ನಾಲ್ವರು ಸ್ನೇಹಿತರ ಜೊತೆಗೆ ಕಾಪು ಪೊಲೀಸರು ಕಾಸರಗೋಡು ಜಿಲ್ಲೆಯ ಕುಂಬ್ಲೆಯಲ್ಲಿ ಬಂಧಿಸಿದ್ದಾರೆ.
ನಾಲ್ವರು ಆರೋಪಿಗಳು ಹಾಗೂ ಲೀಲಾಧರ ಶೆಟ್ಟಿಯವರ ದತ್ತು ಪುತ್ರಿಯನ್ನು ಕೇರಳದ ಕಾಸರಗೋಡು ಜಿಲ್ಲೆಯ ಕುಂಬ್ಲೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20), ಮತ್ತು ಇವರು ನಾಪತ್ತೆಯಾಗಲು ಸಹಕರಿಸಿದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಬಂಧಿತರು. ಲೀಲಾಧರ ಶೆಟ್ಟಿಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಡಿಸೆಂಬರ್ 11 ರಂದು ರಾತ್ರಿ ದಿಢೀರ್ ಮನೆ ಬಿಟ್ಟು ಹೋಗಿದ್ದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣದಾಖಲಾಗಿತ್ತು. ಸಾಕು ಮಗಳು ಸ್ನೇಹಿತನ ಜೊತೆಗೆ ನಾಪತ್ತೆಯಾಗಿದ್ದರಿಂದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಮರ್ಯಾದೆಗೆ ಅಂಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಪೊಲೀಸರು ಆರೋಪಿ ಗಿರೀಶ್ ವಿರುದ್ದ ಪೋಕ್ಸೊ, ಅತ್ಯಾಚಾರ ಹಾಗೂ ಅಪಹರಣ ಪ್ರಕರಣ ಮತ್ತು ಇತರ ಮೂವರ ವಿರುದ್ದ ಪೋಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಕಾಪು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಟಿ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಮಾರ್ಗದರ್ಶನದಲ್ಲಿ ಕಾಪು ಸಿಪಿಐ ಜಯಶ್ರೀ ಮಾನೆ ನೇತೃತ್ವದಲ್ಲಿ ಕಾಪು ಪಿಂಡ ಅಬ್ದುಲ್ ಖಾದರ್ ಮತ್ತವರ ತಂಡ ಕಾರ್ಯಚರಣೆ ನಡೆಸಿದೆ.
Udupi suicide, Four arrested in kidnap case of adopted daughter Leeladhar Shetty. Police have arrested four individuals, including the boyfriend of the adopted daughter of social worker Leeladhar Shetty, in connection with the disappearance of the girl.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 10:11 pm
HK staffer
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm