ಬ್ರೇಕಿಂಗ್ ನ್ಯೂಸ್
21-12-23 03:52 pm Bangalore Correspondent ಕ್ರೈಂ
ಬೆಂಗಳೂರು, ಡಿ 21: ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿದ ಪತಿಯ ಎದೆಗೆ ಪತ್ನಿ ಚೂರಿ ಇರಿದು ಹತ್ಯೆ ಮಾಡಿರುವ ಘಟನೆ ಹುಳಿಮಾವು ಸಮೀಪದ ಪುಲ್ಲಿಂಗ್ ಪಾಸ್ ಕಾಲೇಜಿನ ಬಳಿ ನಡೆದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಹುಳಿಮಾವು ಪೊಲೀಸರು ಆರೋಪಿ ಪತ್ನಿ ಮನೀಷಾಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಉಮೇಶ್ ದಾಮಿ(27) ಸಾವನ್ನಪ್ಪಿರುವ ವ್ಯಕ್ತಿ. ನೇಪಾಳ ಮೂಲದ ಈ ದಂಪತಿ ಕೆಲ ವರ್ಷಗಳಿಂದ ಬೆಂಗಳೂರಿಗೆ ಬಂದಿದ್ದರು. ಹುಳಿಮಾವಿನಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಪತಿ ಕಾಲೇಜೊಂದರಲ್ಲಿ ಸೆಕ್ಯೂರಿಟಿಯಾಗಿದ್ದರೆ, ಪತ್ನಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದಳು. ಇಬ್ಬರು ಅನೋನ್ಯವಾಗಿದ್ದರು. ಆದರೆ, ಬುಧವಾರ ರಾತ್ರಿ ಉಮೇಶ್ ಸ್ನೇಹಿತನೊಂದಿಗೆ ಮದ್ಯದ ಪಾರ್ಟಿಗೆ ಹೋಗಿ ತಡರಾತ್ರಿ 12 ಗಂಟೆಗೆ ಮನೆಗೆ ಬಂದಿದ್ದನು. ಈ ವೇಳೆ, ಪತ್ನಿ ಯಾರೊಂದಿಗೋ ಪೋನ್ ಕಾಲ್ನಲ್ಲಿ ಮಾತನಾಡುತ್ತಿರುವುದನ್ನು ಗಮನಿಸಿದ್ದಾನೆ. ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿರುವುದಾಗಿ ಅನುಮಾನ ವ್ಯಕ್ತಪಡಿಸಿ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ದಂಪತಿ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ.
ಇದರಿಂದ ಕೋಪದಲ್ಲಿದ್ದ ಮನಿಷಾ ಮನೆಯಲ್ಲಿದ್ದ ಚಾಕುವಿನಿಂದ ಗಂಡನ ಎದೆಗೆ ಚುಚ್ಚಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಉಮೇಶ್ ಸಾವನ್ನಪ್ಪಿದ್ದಾನೆ.
ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಹತ್ಯೆ ಪ್ರಕರಣ ದಾಖಲಿಸಿಕೊಂಡು ಮನಿಷಾಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
In a shocking incident, a man was stabbed to death by his wife near Pulling Pass College near Hulimavu on suspicion of having an illicit relationship.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 10:11 pm
HK staffer
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm