ಬ್ರೇಕಿಂಗ್ ನ್ಯೂಸ್
22-12-23 09:39 pm Bangalore Correspondent ಕ್ರೈಂ
ಬೆಂಗಳೂರು, ಡಿ 22: ಅಸಹಾಯಕ ವೃದ್ಧೆಗೆ ಸಂಬಂಧಿಸಿದ ಆಸ್ತಿಗಳ ನಕಲಿ ದಾಖಲಾತಿ ಸೃಷ್ಟಿಸಿ ಹಾಗೂ ನಕಲಿ ಬ್ಯಾಂಕ್ ಖಾತೆ ತೆರೆದು 3 ಬ್ಯಾಂಕ್‌ಗಳಿಂದ 3 ಕೋಟಿ ರೂ.ಗೂ ಅಧಿಕ ಸಾಲ ಪಡೆದು ವಂಚಿಸಿದ್ದ ಐವರನ್ನು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಭಾಸ್ಕರ್, ಮಹೇಶ, ಅಭಿಷೇಕ್ ಗೌಡ, ಡಿ.ಆರ್.ಅರುಣ್, ಟಿ.ಪಿ.ಶಿವಕುಮಾರ್ ಬಂಧಿತರು. ಜೆ.ಪಿ.ನಗರದ ನಿವಾಸಿ ಅಂಬುಜಾಕ್ಷಿ (75) ವಂಚನೆಗೊಳಗಾದವರು.
ಅಂಬುಜಾಕ್ಷಿ ಜೆ.ಪಿ.ನಗರದಲ್ಲಿ 1,350 ಅಡಿ ವಿಸ್ತೀರ್ಣದ ಬಿಡಿಎ ನಿವೇಶನದಲ್ಲಿ ಎರಡು ಅಂತಸ್ತಿನ ಸ್ವಂತ ಡೂಪ್ಲೆಕ್ಸ್ ಮನೆ ಹೊಂದಿದ್ದಾರೆ. ಮಕ್ಕಳು ವಿದೇಶದಲ್ಲಿದ್ದು, ಇವರೂ ಸಹ ವಿದೇಶಕ್ಕೆ ಹೋಗಿ ನೆಲೆಸಲು ಚಿಂತಿಸಿದ್ದರು. ಹೀಗಾಗಿ ತಮ್ಮ ಮನೆ ಮಾರಾಟ ಮಾಡುವ ವಿಚಾರವನ್ನು ರಿಯಲ್ ಎಸ್ಟೇಟ್ ಬ್ರೋಕರ್‌ಗಳಾಗಿದ್ದ ಆರೋಪಿಗಳಿಗೆ ತಿಳಿಸಿದ್ದರು.

ಇದೇ ನೆಪದಲ್ಲಿ ನಿವೇಶನದ ದಾಖಲೆಗಳನ್ನು ಪಡೆದುಕೊಂಡ ಆರೋಪಿಗಳು, ಅಸಲಿ ದಾಖಲೆಗಳ ರೀತಿಯಲ್ಲೇ ನಿವೇಶನದ 3 ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಂಬುಜಾಕ್ಷಿಯವರ ಸಹಿ ಹೋಲುವ ಪೋರ್ಜರಿ ಸಹಿಗಳನ್ನು ಮಾಡಿದ್ದರು. ನಂತರ ಈ ದಾಖಲೆಗಳನ್ನು 3 ಬ್ಯಾಂಕ್‌ಗಳಿಗೆ ನೀಡಿ, 3 ಕೋಟಿಗೂ ಅಧಿಕ ಸಾಲ ಪಡೆದುಕೊಂಡು ಪರಾರಿಯಾಗಿದ್ದರು. ಸಾಲದ ವಿಚಾರವಾಗಿ ಬ್ಯಾಂಕ್ ಸಿಬ್ಬಂದಿ ಅಂಬುಜಾಕ್ಷಿ ಅವರನ್ನು ಸಂಪರ್ಕಿಸಿದಾಗ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿದೆ. ಡಿ.14ರಂದು ಮಹಿಳೆಯು ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಮುಂದಿನ ತನಿಖೆಯ ಜವಾಬ್ದಾರಿಯನ್ನು ಸಿಸಿಬಿಗೆ ವರ್ಗಾಯಿಸಿತ್ತು. ಆರೋಪಿಗಳು ಸಾಲ ಪಡೆದಿದ್ದ ಬ್ಯಾಂಕ್‌ಗಳಿಂದ ಮಾಹಿತಿ, ಸಾಕ್ಷ್ಯ ಸಂಗ್ರಹಿಸಿದ ಸಿಸಿಬಿ ಪೊಲೀಸರು ತಾಂತ್ರಿಕ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
The Economic Offences Wing (EOW) of the CCB has arrested five persons for allegedly creating fake documents of properties belonging to a helpless woman and opening fake bank accounts and taking loans of over Rs 3 crore from three banks. The arrested have been identified as Bhaskar, Mahesh, Abhishek Gowda, D R Arun and T P Shivakumar. The victim has been identified as Ambujakshi (75), a resident of J.P. Nagar.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 10:11 pm
HK staffer
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm