ಬ್ರೇಕಿಂಗ್ ನ್ಯೂಸ್
26-12-23 11:45 am Bangalore Correspondent ಕ್ರೈಂ
ಬೆಂಗಳೂರು, ಡಿ 26: ಕರ್ನಾಟಕ ರಣಜಿ ಆಟಗಾರ ಕೆ.ಸಿ ಕಾರಿಯಪ್ಪ ಅವರ ವಿರುದ್ದ ಯುವತಿಯೋರ್ವಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಕಾರಿಯಪ್ಪ ಕೂಡಾ ಪ್ರತಿ ದೂರು ದಾಖಲಿಸಿದ್ದಾರೆ
ಕಾರಿಯಪ್ಪ ಅವರು ಬಗಲಗುಂಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರೆ, ಮಾಜಿ ಪ್ರಿಯತಮೆ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮದುವೆಯಾಗುವುದಾಗಿ ವಂಚಿಸಿದ್ದಾರೆ ಎಂದು ಕಾರಿಯಪ್ಪ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ. ಒಂದೂವರೆ ವರ್ಷದ ಹಿಂದೆ ಬ್ರೇಕ್ ಅಪ್ ಮಾಡಿಕೊಂಡಿದ್ದೇನೆ ಎಂದು ಕಾರಿಯಪ್ಪ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
2018ರಲ್ಲಿ ಮದುವೆಯಾಗಿದ್ದು, 2020ರಲ್ಲಿ ಡಿವೋರ್ಸ್ ಆಗಿದೆ. ಒಂದೂವರೆ ವರ್ಷದ ಹಿಂದೆ ಕಾರಿಯಪ್ಪ ಪರಿಚಯವಾಗಿತ್ತು. ಇಬ್ಬರೂ ಪರಸ್ಪರ ಒಪ್ಪಿಕೊಂಡು ದೈಹಿಕ ಸಂಪರ್ಕ ಬೆಳಿಸಿ ನಂತರ ಗರ್ಭಪಾತವಾಯ್ತು. ಈ ಸಂಬಂಧ ದೂರು ದಾಖಲಾಗಿತ್ತು. ನಂತರ ಆರೋಪಿಯ ಮನವಿಯ ಮೇರೆಗೆ ದೂರು ಹಿಂಪಡೆಯಲಾಗಿತ್ತು. ಇದಾದ ಬಳಿಕ ಮದುವೆಯಾಗೋಣ ಎಂದು ಹೇಳಿ ಕಾರಿಯಪ್ಪ ನನ್ನ ಬಳಿ 2 ಲಕ್ಷ ರೂಪಾಯಿ ಪಡೆದುಕೊಂಡಿರುತ್ತಾರೆ. ನಂತರ ಆರೋಪಿ ಪೋಷಕರು ಮದುವೆಗೆ ವಿರೋಧಿಸುತ್ತಾರೆ. ಇದಾದ ಬಳಿಕ ಕಾರಿಯಪ್ಪ ಸಹ ಮದುವೆಯಾಗಲ್ಲ, ನಾನು ಹಣ ಪಡೆದುಕೊಂಡಿಲ್ಲ ಎಂದು ಹಲ್ಲೆಗೈದು ಅವಾಚ್ಯ ಪದಗಳಿಂದ ನಿಂದಿಸಿ ಬೆದರಿಕೆ ಹಾಕಲಾಗಿದೆ ಎಂದು ಯುವತಿ ದೂರಿನಲ್ಲಿ ಹೇಳಿದ್ದಾರೆ.
ಕಾರಿಯಪ್ಪ ಅವರು ಪ್ರತಿ ದೂರು ದಾಖಲಿಸಿದ್ದು, ನಿನ್ನ ಕ್ರಿಕೆಟ್ ವೃತ್ತಿಜೀವನವನ್ನು ಹಾಳು ಮಾಡುತ್ತೇನೆ. ನಿನ್ನ ಹೆಸರು ಬರೆದಿಟ್ಟು ಸಾಯುತ್ತೇನೆ ಮತ್ತು ನಿನ್ನ ಬಗ್ಗೆ ಕೆಟ್ಟದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹಾಕುತ್ತೇನೆ ಎಂದು ಬೆದರಿಕೆ ಹಾಕುತ್ತಾಳೆ. ಮಾನಸಿಕ ಹಿಂಸೆ ನೀಡುತ್ತಿದ್ದು, ಒಂದಲ್ಲ ಒಂದು ರೀತಿಯಲ್ಲಿ ಕಿರುಕುಳ ನೀಡಲಾಗುತ್ತದೆ ಎಂದು ಆರೋಪಿಸಿದ್ದಾರೆ
ಅಲ್ಲದೆ ಮನೆಯೊಳಗೆ ಅತಿಕ್ರಮ ಪ್ರವೇಶ ಮಾಡಿ ಅವಾಚ್ಯ ಪದಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾಳೆಂದು ಕಾರಿಯಪ್ಪ ಹೇಳಿದ್ದಾರೆ.
ಕೆ.ಸಿ.ಕಾರಿಯಪ್ಪ ಯಾರು?
ಕೆಕೆಆರ್ ಟ್ರಯಲ್ ಕ್ಯಾಂಪ್ನಲ್ಲಿ ಶಾಶ್ವತ ಪ್ರಭಾವ ಬೀರಿದ ಕರ್ನಾಟಕದ ಸ್ಪಿನ್ನರ್ 2015 ರ ಐಪಿಎಲ್ ಹರಾಜಿನಲ್ಲಿ ಗಮನಾರ್ಹ ಒಪ್ಪಂದವನ್ನು ಗಳಿಸಿದ್ದರು. ಅವರ ಕೌಶಲ್ಯದಿಂದ ಪ್ರಭಾವಿತರಾದ ಫ್ರಾಂಚೈಸಿ, ಅವರ ಮೂಲ ಬೆಲೆಯಾದ 10 ಲಕ್ಷ ರೂಪಾಯಿಗಳಲ್ಲಿ 24 ಪಟ್ಟು (2.4 ಕೋಟಿ ರೂ.) ಅವರನ್ನು ಖರೀದಿಸಿತು. ದುರದೃಷ್ಟವಶಾತ್, ಅವರು ಕೇವಲ ಒಂದು ಪಂದ್ಯವನ್ನು ಆಡಿದ ನಂತರ 2016 ರಲ್ಲಿ ತಮ್ಮ ಒಪ್ಪಂದದಿಂದ ಬಿಡುಗಡೆಗೊಂಡರು.
ಕಿಂಗ್ಸ್ ಇಲೆವೆನ್ ಪಂಜಾಬ್ ಅವರ ಸೇವೆಗಳನ್ನು 80 ಲಕ್ಷ ರೂಪಾಯಿಗೆ ಭದ್ರಪಡಿಸಿತು. ಈ ಅವಧಿಯಲ್ಲಿ ಅವರು ಕೆಲವು ಪಂದ್ಯಗಳಲ್ಲಿ ಕಾಣಿಸಿಕೊಂಡರೂ. 2019 ರ ಐಪಿಎಲ್ ಹರಾಜಿನಲ್ಲಿ ಮಾರಾಟವಾಗದಿದ್ದರೂ, ಸೈಯದ್ ಮುಷ್ತಾಕ್ ಅಲಿ ಪಂದ್ಯಾವಳಿಯಲ್ಲಿ ಕರ್ನಾಟಕಕ್ಕಾಗಿ ಅದ್ಭುತ ಪ್ರದರ್ಶನ ನೀಡಿದರು. ಆದರೆ 2019 ರ ಋತುವಿನಲ್ಲಿ ಕೇವಲ ಒಂದು ಪಂದ್ಯವನ್ನು ಆಡಿದರು.
ಐಪಿಎಲ್ 2021 ಕ್ಕೆ ಮುಂಚಿತವಾಗಿ ರಾಜಸ್ಥಾನ್ ರಾಯಲ್ಸ್ ಅವರ ಬಗ್ಗೆ ಆಸಕ್ತಿ ತೋರಿಸಿತು. ಆದರೆ, ಐಪಿಎಲ್ 2024 ರ ಹರಾಜಿಗೆ ಮುಂಚಿತವಾಗಿ ಅವರನ್ನು ಆರ್ಆರ್ ಬಿಡುಗಡೆ ಮಾಡಿತು.
Indian cricketer KC Cariappa alleged of love sex and cheating, girlfriend files complaint in Bangalore. cricketer had impregnated her and provided her with abortion pills. She claimed Cariappa had promised to marry her. Notably, the woman is unaware of Cariappa's complaint and expressed her intention to retaliate. Cariappa gained recognition for his versatile play style.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am