ಬ್ರೇಕಿಂಗ್ ನ್ಯೂಸ್
03-01-24 07:43 pm Bangalore Correspondent ಕ್ರೈಂ
ಬೆಂಗಳೂರು, ಜ.3: ತಾನು ಲೋಕಾಯುಕ್ತ ಅಧಿಕಾರಿಯೆಂದು ಪೋಸು ಕೊಟ್ಟು 30ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳಿಗೆ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು ಬೆಂಗಳೂರು ಸಿಸಿಬಿ ಪೊಲೀಸರು ನಕಲಿ ಲೋಕಾಯುಕ್ತ ಅಧಿಕಾರಿಯನ್ನು ಬಂಧಿಸಿದ್ದಾರೆ.
ಆರೋಪಿ ಶ್ರೀನಾಥ್ ರೆಡ್ಡಿ (34) ಆಂಧ್ರಪ್ರದೇಶ ಮೂಲದ ವ್ಯಕ್ತಿಯಾಗಿದ್ದು, 2007ರಿಂದಲೇ ಇದೇ ಮಾದರಿಯ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ. ಹಿಂದೆ ಬೀಗ ಹಾಕಿರುತ್ತಿದ್ದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಶ್ರೀನಾಥ್ ಬಳಿಕ ಪೊಲೀಸ್ ಅಧಿಕಾರಿಯೆಂದು ಹೇಳಿ ಸರ್ಕಾರಿ ಅಧಿಕಾರಿಗಳನ್ನು ಯಾಮಾರಿಸಲು ತೊಡಗಿದ್ದ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.
ತೆಲುಗು ಚಲನಚಿತ್ರಗಳಿಂದ ಸ್ಫೂರ್ತಿ ಪಡೆದು ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿ ಕುಕೃತ್ಯ ಮುಂದುವರಿಸಿದ್ದ. ಕೇವಲ 10ನೇ ತರಗತಿ ಓದಿರುವ ಆರೋಪಿ 36 ಸರ್ಕಾರಿ ಅಧಿಕಾರಿಗಳಿಗೆ ವಂಚನೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಆದರೆ ಒಬ್ಬರು ಮಾತ್ರ ಪೊಲೀಸರಿಗೆ ದೂರು ನೀಡಿದ್ದರು. ಅದನ್ನು ಆಧರಿಸಿ ತನಿಖೆ ನಡೆಸಿದಾಗ ಖದೀಮ ಸಿಕ್ಕಿಬಿದ್ದಿದ್ದಾನೆ.
ಆರೋಪಿ ಶ್ರೀನಾಥ್ ರೆಡ್ಡಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿಯೂ ಇದೇ ರೀತಿ ಸರ್ಕಾರಿ ಅಧಿಕಾರಿಗಳಿಗೆ ವಂಚಿಸಿದ್ದಾನೆ. ಈತನ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದ ಹೆಚ್ಚಿನ ತನಿಖೆಗೆ ಸಿಸಿಬಿಗೆ ವರ್ಗಾಯಿಸಲಾಗಿತ್ತು.
ಲೋಕಾಯುಕ್ತ ಇನ್ಸ್ ಪೆಕ್ಟರ್ ಚಂದ್ರಶೇಖರ್ ಎಂದು ತನ್ನನ್ನು ಪರಿಚಯಿಸಿಕೊಂಡು ರೆಡ್ಡಿ ಸರ್ಕಾರಿ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡುತ್ತಿದ್ದ ಮತ್ತು ಹಣ ವಸೂಲಿ ಮಾಡುತ್ತಿದ್ದ. ಪ್ರಕರಣ ದಾಖಲಾಗಿದೆ ಎಂದು ಹೇಳಿ ಮುಚ್ಚಿ ಹಾಕಲು ಹಣ ನೀಡುವಂತೆ ಬ್ಲಾಕ್ಮೇಲ್ ಮಾಡುತ್ತಿದ್ದ. ಹಣ ಸಿಕ್ಕರೆ ಲೋಕಾಯುಕ್ತದ ತಾಂತ್ರಿಕ ವಿಭಾಗ ಯಾವುದೇ ವಿಚಾರಣೆ ನಡೆಸದೆ ಬಿ ರಿಪೋರ್ಟ್ ಸಲ್ಲಿಸಲಿದೆ ಎಂದು ಭರವಸೆ ನೀಡುತ್ತಿದ್ದ. ಇದೇ ರೀತಿ ಕಿರುಕುಳಕ್ಕೆ ಒಳಗಾದ ಸರ್ಕಾರಿ ಅಧಿಕಾರಿ ರಾಮದಾಸ್ ಎಂಬವರು ದೂರು ದಾಖಲಿಸಿದ್ದರು.
ಕೆಲವು ಕಡೆ ಲೋಕಾಯುಕ್ತದಲ್ಲಿ ಎಡಿಜಿಪಿ ಶ್ರೇಣಿಯ ಅಧಿಕಾರಿ ಎಂದು ತನ್ನನ್ನು ಹೇಳಿಕೊಂಡಿದ್ದ. ಅಲ್ಲದೆ, ತನ್ನ ಹೆಸರನ್ನು ಕೇಶವ ರಾವ್ ಎಂದಿ ಮಾಡಿಕೊಂಡಿದ್ದ. ಈತನ ವಿರುದ್ಧ ಎಲೆಕ್ಟ್ರಾನಿಕ್ ಸಿಟಿ, ಬೇಗೂರು, ಹೆಬ್ಬಗೋಡಿ, ಅತ್ತಿಬೆಲೆ, ಜಿಗಣಿ ಸೇರಿದಂತೆ ಹಲವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣಗಳಿವೆ.
Inspired by actor Suriya’s film, a man from Karnataka’s Chikkaballapura district, posing as a Lokayukta officer, allegedly extorted around Rs 3 crores from more than 60 government officials in Karnataka, Telangana, and Andhra Pradesh, Indian Express reported. On Tuesday, January 2nd, the Central Crime Branch arrested the accused, identified as Srinath Reddy (some reports say Srinivas Reddy), an Andhra Pradesh native. The accused has already had 36 cases filed against him in three states.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm