ಬ್ರೇಕಿಂಗ್ ನ್ಯೂಸ್
04-01-24 10:11 pm Mangalore Correspondent ಕ್ರೈಂ
ಮಂಗಳೂರು, ಜ.4: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಹಣ ಡಬಲ್ ಆಗುವ ಆಸೆಯಿಂದ IIFL Securities ಹೆಸರಿನಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದು, ಸುಮಾರು 40.64 ಲಕ್ಷ ರೂಪಾಯಿ ಕಳಕೊಂಡಿದ್ದಾರೆ. ಈ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ಯಾರೋ ಅಪರಿಚಿತ ವ್ಯಕ್ತಿ ವಾಟ್ಸಪ್ ಕರೆ ಮಾಡಿ, IIFL Securities ಹೆಸರಿನಲ್ಲಿ ಸ್ಟಾಕ್ ಗ್ರೂಪ್ ಆರಂಭವಾಗುತ್ತಿದ್ದು ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದರು. ಜಾಯಿನ್ ಲಿಂಕ್ ಮೂಲಕ Blackrock stocks pullup group ಎಂಬ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದಾರೆ. ಸದ್ರಿ ಗ್ರೂಪಿನಲ್ಲಿ ಏಪ್ ಒಂದರ ಲಿಂಕ್ ಕಳುಹಿಸಿದ್ದು, ಅದನ್ನು ಡೌನ್ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿತ್ತು.

IIFL Securities ಎಂಬ ಹೆಸರಿನ ಏಪ್ ಡೌನ್ಲೋಡ್ ಮಾಡಿಕೊಂಡಿದ್ದು, ಅದರಲ್ಲಿ ಬೇರೆ ಬೇರೆ ಸ್ಟಾಕ್ಸ್ ಗಳನ್ನು ಖರೀದಿಸಿದಲ್ಲಿ ಮರುದಿನ ಹೂಡಿಕೆ ಮಾಡಿದ ಹಣದೊಂದಿಗೆ 5 ಶೇ. ಲಾಭಾಂಶ ನೀಡುವುದಾಗಿ ತಿಳಿಸಲಾಗಿತ್ತು. ಎಂಬಿಬಿಎಸ್ ವಿದ್ಯಾರ್ಥಿಯು ನ.11ರಿಂದ ಡಿ.22ರ ನಡುವೆ ತನ್ನ ಎಸ್ ಬಿಐ ಬ್ಯಾಂಕ್ ಖಾತೆಯಿಂದ 23.39 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದರು. ಇನ್ನೂ ಹೆಚ್ಚಿನ ಹಣ ಹೂಡಿಕೆ ಮಾಡಿದಲ್ಲಿ ಮತ್ತಷ್ಟು ಹಣ ದೊರೆಯುತ್ತೆ ಎನ್ನುವ ಆಸೆಯಿಂದ ತನ್ನ ಗೆಳೆಯ ಫೈಜಲ್ ಖಾಜ್ಮಿ ಎಂಬವರ ಕೆನರಾ ಬ್ಯಾಂಕಿನ ಖಾತೆಯಿಂದ ಮತ್ತೆ 17.24 ಲಕ್ಷ ರೂ. ಹಣವನ್ನು ಏಪ್ ನಲ್ಲಿ ಹೂಡಿಕೆ ಮಾಡಿದ್ದರು.
ಮೊದಲಿಗೆ ಹೂಡಿಕೆ ಮಾಡಿದ್ದ ಹಣ ಮತ್ತು ಲಾಭಾಂಶವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಳ್ಳಲು ಏಪ್ ನಲ್ಲಿ ಅವಕಾಶ ನೀಡಲಾಗಿತ್ತು. ಅದರಂತೆ, ಹಣ ತೆಗೆಯಲು ಮುಂದಾಗಿದ್ದ ವೇಳೆ ಅದು ಸಾಧ್ಯವಾಗಲಿಲ್ಲ. ಬಳಿಕ ವಾಟ್ಸಪ್ ಅಡ್ಮಿನ್ ಅವರಲ್ಲಿ ವಿಚಾರಿಸಿದಾಗ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಮತ್ತಷ್ಟು ಕರೆ ಮಾಡಿದಾಗ, ಇವರನ್ನು ಬ್ಲಾಕ್ ಮಾಡಿದ್ದರು. ಆಮೂಲಕ IIFL Securities ಹೆಸರಿನಲ್ಲಿ ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡುವ ನೆಪದಲ್ಲಿ ಒಟ್ಟು 40,64,600 ರೂ. ಹಣವನ್ನು ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡ ವ್ಯಕ್ತಿ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mbbs student in Mangalore Cheated of Rs 40 lakhs in IIFL Securities. A case has been registered at the cyber police.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 10:11 pm
HK staffer
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm