ಶಾಲೆಯ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ವೇಳೆ ಮಗುಚಿ ಬಿದ್ದಿ ಬೋಟ್ ; 12 ಮಕ್ಕಳು, ಇಬ್ಬರು ಶಿಕ್ಷಕರ ದಾರುಣ ಸಾವು 

18-01-24 09:17 pm       HK News Desk   ಕ್ರೈಂ

ಹರಾನಿ ಸರೋವರದಲ್ಲಿ ಗುರುವಾರ ದೋಣಿ ಮುಳುಗಿ 12 ಮಕ್ಕಳು, ಇಬ್ಬರು ಶಿಕ್ಷಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ವಡೋದರ, ಜ.18: ಹರಾನಿ ಸರೋವರದಲ್ಲಿ ಗುರುವಾರ ದೋಣಿ ಮುಳುಗಿ 12 ಮಕ್ಕಳು, ಇಬ್ಬರು ಶಿಕ್ಷಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಹರಣಿ ಸರೋವರದಲ್ಲಿ ದೋಣಿ ಮುಳುಗಿ ಮಕ್ಕಳು ಮುಳುಗಿದ ಘಟನೆ ಅತ್ಯಂತ ಹೃದಯ ವಿದ್ರಾವಕವಾಗಿದೆ. ಪ್ರಾಣ ಕಳೆದುಕೊಂಡ ಅಮಾಯಕ ಮಕ್ಕಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು. ಕರುಣಾಮಯಿ ಭಗವಂತ ಅವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ, ಬೋಟ್‌ನಲ್ಲಿದ್ದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ರಕ್ಷಣ ಕಾರ್ಯಾಚರಣೆ ಪ್ರಸ್ತುತ ನಡೆಯುತ್ತಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ತತ್ ಕ್ಷಣ ಪರಿಹಾರ ಮತ್ತು ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಂದು ಎಕ್ಸ್ ನಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಪೋಸ್ಟ್ ಮಾಡಿದ್ದಾರೆ.

ಖಾಸಗಿ ಶಾಲೆಯ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ವೇಳೆ ಬೋಟ್ ಅವಘಡ ಸಂಭವಿಸಿದೆ. ಯಾರೂ ಲೈಫ್ ಜಾಕೆಟ್‌ಗಳನ್ನು ಧರಿಸಿರಲಿಲ್ಲ ಎಂದು ವರದಿಯಾಗಿದೆ. ಘಟನೆಯ ನಂತರ ಅಗ್ನಿಶಾಮಕ ದಳ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

ವಡೋದರದ ಹರಾನಿ ಸರೋವರದಲ್ಲಿ ದೋಣಿ ಮುಳುಗಿ ಆಗಿರುವ ಜೀವಹಾನಿಯಿಂದ ನೊಂದಿದ್ದೇನೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಸ್ಥಳೀಯಾಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುತ್ತದೆ. ಗಾಯಾಳುಗಳಿಗೆ ರೂ. 50,000 ನೀಡಲಾಗುವುದು ಎಂದು PMO ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

On Thursday afternoon, a boat carrying schoolchildren and teachers overturned at Motnath Lake, Harani, Vadodara, turning an otherwise joyful day into a terrifying tragedy. The tragedy left the community in sadness and astonishment as 12 people, including 10 students and 2 teachers, lost their lives.