ಬ್ರೇಕಿಂಗ್ ನ್ಯೂಸ್
22-11-20 03:13 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 22: ಮಲೈಕಾ ಕೋ ಆಪರೇಟಿವ್ ಸೊಸೈಟಿ ಹಗರಣಕ್ಕೆ ಸಂಬಂಧಿಸಿ ಪೊಲೀಸರು ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಮ್ಯಾನೇಜರ್ ಆಗಿದ್ದ ರೀನಾ ಜೋಸ್ ಎಂಬವರನ್ನು ಬಂಧಿಸಿದ್ದಾರೆ.
ಹಗರಣದ ಬಗ್ಗೆ ಪ್ರಕರಣ ದಾಖಲಾಗಿ ಒಂದು ತಿಂಗಳಾದ್ರೂ ಪೊಲೀಸರು ಕ್ರಮ ಜರುಗಿಸಿಲ್ಲ ಎಂದು ಹೆಡ್ ಲೈನ್ ಕರ್ನಾಟಕ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತ ಪೊಲೀಸರು ಈಗ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಗ್ರಾಹಕರನ್ನು ವಂಚಿಸಿದ್ದ ಆರೋಪ ಎದುರಿಸುತ್ತಿರುವ ರೀನಾ ಜೋಸ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿತ್ತು. ಆದರೆ, ಪೊಲೀಸರು ಮಂಗಳೂರಿನಲ್ಲಿಯೇ ಬಂಧಿಸಿದ್ದಾಗಿ ಮಾಹಿತಿ ನೀಡಿದ್ದಾರೆ.


ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಮತ್ತಷ್ಟು ವಿಚಾರಣೆಗಾಗಿ ಮೂರು ದಿನಗಳ ಕಸ್ಟಡಿ ಪಡೆದಿದ್ದಾರೆ. ಇದೇ ವೇಳೆ, ಇತರೇ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮಂಗಳೂರಿನ ಬೆಂದೂರ್ ವೆಲ್ ನಲ್ಲಿದ್ದ ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿಯ ಕಚೇರಿಯಲ್ಲಿ ಮ್ಯಾನೇಜರ್ ಆಗಿದ್ದ ರೀನಾ, ಸಂಸ್ಥೆಯ ಮುಖ್ಯಸ್ಥ ಗಿಲ್ಬರ್ಟ್ ಬ್ಯಾಪ್ಟಿಸ್ಟ್ ಆಪ್ತೆಯೂ ಆಗಿದ್ದಳು. ಗಿಲ್ಬರ್ಟ್ ಮತ್ತು ರೀನಾ ಜೋಸ್ ಸೇರಿ ನೂರಾರು ಗ್ರಾಹಕರಿಗೆ ಟೋಪಿ ಹಾಕಿದ್ದಾರೆ ಎಂದು ದೂರು ಕೇಳಿಬಂದಿತ್ತು.

ಮಲೈಕಾ ಸೊಸೈಟಿ ಮಂಗಳೂರು, ಉಡುಪಿ, ಗೋವಾ, ಮುಂಬೈ ಸೇರಿದಂತೆ ಹಲವೆಡೆ ನೂರಾರು ಕಚೇರಿಗಳನ್ನು ಹೊಂದಿದ್ದು, ಸಾವಿರಾರು ಗ್ರಾಹಕರು ತಮ್ಮ ಕಷ್ಟದ ದುಡ್ಡನ್ನು ಡಿಪಾಸಿಟ್ ಮಾಡಿದ್ದರು. ಅಂದಾಜು 350 ಕೋಟಿ ರೂಪಾಯಿ ವಂಚನೆ ಆಗಿರುವ ಬಗ್ಗೆ ದೂರು ದಾಖಲಾಗಿದೆ. ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲೇ 150ಕ್ಕೂ ಹೆಚ್ಚು ಮಂದಿ ದೂರು ದಾಖಲಿಸಿದ್ದಾರೆ.
Headline Karnataka Impact, Malaika Credit Society Mangalore Manager Reena Josh has been arrested by the Pandeshwar Police in connection of Cheating investors of 350 crores by the company MD Gilbert Baptist and others.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm