ಬ್ರೇಕಿಂಗ್ ನ್ಯೂಸ್
04-02-24 05:56 pm HK News Desk ಕ್ರೈಂ
ಗದಗ, ಫೆ 04: ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪೊಲೀಸ್ ಠಾಣೆಯ ಪಿಎಸ್ಐ ನಿಖಿಲ್ ಕಾಂಬ್ಳೆ, ಕಾನ್ಸ್ಟೇಬಲ್ ಶಂಕರ್ ನಾಲಕರ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿನಿಯ ನಂಬರ್ ಪಡೆದು ಅಶ್ಲೀಲವಾಗಿ ಮೆಸೇಜ್ ಮಾಡಿ ಕಿರುಕುಳ ನೀಡಿದ್ದಾರೆ. ರಕ್ಷಣೆಗಾಗಿ ವಿದ್ಯಾರ್ಥಿನಿ ಕಣ್ಣಿರು ಹಾಕಿದ್ದಾಳೆ.
ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ಆರೋಪ ಮಾಡಲಾಗಿದ್ದು, ನರೇಗಲ್ ಬಸ್ ನಿಲ್ದಾಣ ಹಾಗೂ ಪೊಲೀಸ್ ಠಾಣೆ ಬಳಿ ಚುಡಾಯಿಸಿರುವ ಆರೋಪ ಮಾಡಲಾಗಿದೆ. ಬೇರೆ ಯುವತಿಯರನ್ನು ಸಂಪರ್ಕಿಸಿ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯ ಮೊಬೈಲ್ ನಂಬರ್ ಪಡೆದು ವಾಟ್ಸಾಪ್ ಅಶ್ಲೀಲವಾಗಿ ಮೆಸೇಜ್ ಮಾಡಿ, 'ಹಣ ಕೊಡುತ್ತೇವೆ ಬಾ' ಎಂದು ಕರೆದಿದ್ದಾರೆ.
ಎಸ್ ಪಿ ಅವರ ಗಮನಕ್ಕೆ ತರುತ್ತೇನೆ ಎಂದರೂ ನಿರಂತರವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡಲಾಗಿದ್ದು, ನರೇಗಲ್ ಪೊಲೀಸರಿಂದ ಜೀವ ಭಯ ಇದೆ. ಪಿಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ನಿಂದ ತನ್ನನ್ನು ರಕ್ಷಣೆ ಮಾಡುವಂತೆ ವಿದ್ಯಾರ್ಥಿನಿ ಮನವಿ ಮಾಡಿದ್ದಾಳೆ.
ನಿರ್ದಾಕ್ಷಿಣ್ಯ ಕ್ರಮ ಎಂದ ಎಸ್ಪಿ :
ಎಸ್ ಪಿ ಬಿ.ಎಸ್. ನೇಮಗೌಡ ಅವರು ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ್ದು, ”ಹೆಡ್ ಕಾನ್ಸ್ ಟೇಬಲ್ ಶಂಕರ್ ನಾಲಕರ್ ಈಗಾಗಲೇ ಸಸ್ಪೆಂಡ್ ನಲ್ಲಿದ್ದು, ಇದೀಗ ಮತ್ತೊಂದು ಬಾರಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನ ಸಸ್ಪೆಂಡ್ ಮಾಡಲಾಗುವುದಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಆದೇಶಿಸುತ್ತೇನೆ. ಪಿಎಸ್ ಐ ನಿಖಿಲ್ ಬಗ್ಗೆಯೂ ದೂರು ಕೇಳಿ ಬಂದಿದ್ದು ಅವರ ವಿರುದ್ದವೂ ತನಿಖೆ ಮಾಡುತ್ತೇವೆ. ತತ್ ಕ್ಷಣ ತನಿಖೆಯ ವರದಿ ಪಡೆದು ಪಿಎಸ್ ಐ ತಪ್ಪಿದ್ದಲ್ಲಿ ಕ್ರಮ ತೆಗೆದುಕೊಳ್ತೇವೆ. ನಿರ್ದಾಕ್ಷಿಣ್ಯ ಕ್ರಮ ತಗೆದುಕೊಳ್ಳುತ್ತೇವೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಗೆ ಅದೇಶಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
Gadag Two Police officers sexually harras student near to police station, girl pleads for safety of her life. A serious allegation has been heard against PSI Nikhil Kamble and Constable Shankar Nalakar of Naregal Police Station in Gajendragada Taluk of Gadag District.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm