ಬ್ರೇಕಿಂಗ್ ನ್ಯೂಸ್
06-02-24 08:06 pm Mangalore Correspondent ಕ್ರೈಂ
ಮಂಗಳೂರು, ಫೆ.6: ಒರಿಸ್ಸಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಬೊಲೆರೋ ವಾಹನದಲ್ಲಿ ಭಾರೀ ಪ್ರಮಾಣದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದಾಗ ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದು ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರು ನಗರಕ್ಕೆ ಒರಿಸ್ಸಾದಿಂದ ಮಹೇಂದ್ರ ಬೊಲೆರೋ ವಾಹನದಲ್ಲಿ ಗಾಂಜಾವನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ಅಡ್ಡಹಾಕಿ ಬಂಧಿಸಿದ್ದಾರೆ. ಆರೋಪಿಗಳನ್ನು ವಯನಾಡು ಜಿಲ್ಲೆಯ ವೈತಿರಿ ನಿವಾಸಿ ಅನೂಪ್ ಎಂ.ಎಸ್(28) ಮತ್ತು ಕಣ್ಣೂರು ಜಿಲ್ಲೆಯ ಇರಿಟ್ಟಿ ನಿವಾಸಿ ಲತೀಫ್ ಕೆ.ವಿ(36) ಎಂದು ಗುರುತಿಸಲಾಗಿದೆ.
ಆರೋಪಿಗಳ ವಶದಲ್ಲಿದ್ದ ಸಿಲ್ವರ್ ಬಣ್ಣದ ಮಹೇಂದ್ರ ಬೊಲೆರೋ ಕಾರನ್ನು ಸ್ವಾಧೀನಪಡಿಸಿ ಅದರಲ್ಲಿದ್ದ ರೂ. 28 ಲಕ್ಷ ಮೌಲ್ಯದ 120 ಕೆಜಿ ಗಾಂಜಾ, 3 ಮೊಬೈಲ್ ಫೋನ್, ನಗದು ರೂ. 4020 ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ರೂ. 35,14,520/- ಆಗಿರುತ್ತದೆ. ಆರೋಪಿಗಳು ಒರಿಸ್ಸಾದಿಂದ ಅಂಧ್ರಪ್ರದೇಶ, ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಗಾಂಜಾವನ್ನು ಕಳ್ಳ ಸಾಗಣಿಕೆ ಮಾಡುವ ಉದ್ದೇಶದಿಂದಲೇ ಆರೋಪಿಗಳು ಬೊಲೆರೋ ವಾಹನದ ಹಿಂಬದಿಯ ಡಿಕ್ಕಿಯಲ್ಲಿ ಪ್ರತ್ಯೇಕವಾದ ಒಂದು ಕಬ್ಬಿಣದ ಬಾಕ್ಸ್ ಮಾಡಿಕೊಂಡಿದ್ದರು. ಗಾಂಜಾ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಆರೋಪಿಗಳ ಪೈಕಿ ಅನೂಪ್ ವಿರುದ್ಧ ಈ ಹಿಂದೆ ಮೈಸೂರು ಜಿಲ್ಲೆಯ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018ನೇ ಇಸವಿಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಕೇರಳದ ವಯನಾಡು ಜಿಲ್ಲೆಯ ಮೆಪ್ಪಳ್ಳಿ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ, ವಯನಾಡು ಜಿಲ್ಲೆ ಕಲ್ಪಟ್ಟ ಪೊಲೀಸ್ ಠಾಣೆಯಲ್ಲಿ 2 ದರೋಡೆ ಪ್ರಕರಣ, ಒಂದು ಹಲ್ಲೆ ಪ್ರಕರಣ, ವಯನಾಡು ಜಿಲ್ಲೆಯ ಅಂಬಲವಯಲ್ ಪೊಲೀಸ್ ಠಾಣೆಯಲ್ಲಿ 2 ಕಳವು ಪ್ರಕರಣಗಳು ದಾಖಲಾಗಿರುತ್ತದೆ. ಇವರ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್ಐಗಳಾದ ರಾಜೇಂದ್ರ ಬಿ, ನರೇಂದ್ರ, ಸುದೀಪ್, ಶರಣಪ್ಪ ಭಂಡಾರಿ ಹಾಗೂ ಎಎಸ್ಐ ಗಳಾದ ಮೋಹನ್ ಕೆ.ವಿ, ಶೀನಪ್ಪ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
In a major breakthrough, the Mangaluru CCB Police successfully intercepted a Mahindra Bolero vehicle transporting a significant quantity of banned narcotic ganja from Orissa to Mangaluru city and Kerala. The operation, led by Mangaluru CCB Inspector Shyam Sundar H M, resulted in the seizure of 120 kg of ganja.
11-01-25 10:53 pm
HK News Desk
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
BBMP Raid, Lokayukta; ಬಿಬಿಎಂಪಿ 50 ಕಡೆಗಳಲ್ಲಿ ಲ...
11-01-25 09:14 pm
CT Ravi,Threat, Lakshmi Hebbalkar; ಬೆಳಗಾವಿ ಅಭ...
11-01-25 02:11 pm
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
12-01-25 05:07 pm
HK News Desk
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
12-01-25 12:33 pm
Mangalore Correspondent
CM Siddaramaiah, Kambala Mangalore, Naringana...
11-01-25 10:34 pm
Mangalore Lit Fest 2025, Hardeep Singh Puri;...
11-01-25 07:19 pm
DYFI, CM Siddaramaiah, IPS Anupam Agrawal; ಪೊ...
11-01-25 04:57 pm
Lava Kusha Jodukare Kambala, Mangalore; ತೃತೀಯ...
11-01-25 02:25 pm
11-01-25 10:21 pm
Mangalore Correspondent
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm