ಬ್ರೇಕಿಂಗ್ ನ್ಯೂಸ್
07-02-24 01:39 pm Mangalore Correspondent ಕ್ರೈಂ
ಪುತ್ತೂರು, ಫೆ.7: ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರ ಸಂಘ ಹಾಗೂ ಉಪ್ಪಿನಂಗಡಿಯ ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ಶಾಖೆಯಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಸಾಲ ಪಡೆದು ವಂಚಿಸಿರುವ ಆರೋಪಿಗಳು ಆಲಂಕಾರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಶಾಖೆಯಲ್ಲೂ ವಂಚಿಸಿರುವುದು ಬೆಳಕಿಗೆ ಬಂದಿದೆ.
ಆರೋಪಿ ಸೆಬಾಸ್ಟಿಯನ್ ಜ.30ರಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಆಲಂಕಾರು ಶಾಖೆಗೆ ಬಂದು ಮೇಲ್ನೋಟಕ್ಕೆ ನಕಲಿಯೆಂದು ಕಂಡುಬಾರದ 30.200 ಗ್ರಾಮ್ ತೂಕದ ನಾಲ್ಕು ಚಿನ್ನದ ಬಳೆಗಳನ್ನು ಅಡಮಾನ ಇರಿಸಿ 1.35 ಲಕ್ಷ ರೂ. ಸಾಲ ಪಡೆದು ವಂಚಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಸಂಘದ ಆಲಂಕಾರು ಶಾಖಾ ಪ್ರಬಂಧಕಿ ರೇವತಿ ನೀಡಿದ ದೂರಿನ ಮೇರೆಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಲ್ಯಾಡಿ ನಿವಾಸಿ ಸೆಬಾಸ್ಟಿಯನ್ ಹಾಗೂ ಕೇರಳ ಮೂಲದ ಡ್ಯಾನಿಶ್ ಜ.27ರಂದು ನೆಲ್ಯಾಡಿಯ ಕಾಮಧೇನು ಮಹಳಾ ಸಹಕಾರಿ ಸಂಘದಲ್ಲಿ 30 ಗ್ರಾಮ್ ತೂಕದ ನಾಲ್ಕು ಚಿನ್ನದ ಬಳೆಗಳನ್ನು ಅಡಮಾನವಿರಿಸಿ 1.40 ಲಕ್ಷ ರೂ. ಪಡೆದು ವಂಚಿಸಿರುವುದಾಗಿ ಸಂಘದ ವ್ಯವಸ್ಥಾಪಕಿ ಚೈತನ್ಯ ಸಿ.ಎಚ್. ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಆರೋಪಿಗಳು ಜ.31ರಂದು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಗೆ ಬಂದು 40 ಗ್ರಾಮ್ ತೂಕದ 5 ನಕಲಿ ಬಳೆಗಳನ್ನು ಅಡಮಾನ ಇರಿಸಿ 1.70 ಲಕ್ಷ ರೂ. ಸಾಲ ಪಡೆದು ವಂಚಿಸಿರುವುದಾಗಿ ಶಾಖಾ ವ್ಯವಸ್ಥಾಪಕಿ ಕಮನ ನೀಡಿದ ದೂರಿನಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಇನ್ನಷ್ಟು ಸಹಕಾರ ಸಂಘಗಳಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ವಂಚಿಸಿರುವ ಸಾಧ್ಯತೆಯಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ವಿಷಯ ಹೊರ ಬರುತ್ತಿದ್ದಂತೆ ಕೆಲವು ಸೊಸೈಟಿಯವರು ತಮ್ಮಲ್ಲಿಯೂ ವಂಚನೆ ಎಸಗಿರುವ ಬಗ್ಗೆ ದೂರು ಹಿಡಿದು ಮುಂದೆ ಬಂದಿದ್ದಾರೆ.
Kadaba Fake gold pledge to banks for laon, two from kerala arrested.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 09:48 am
HK News Desk
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm