ಬ್ರೇಕಿಂಗ್ ನ್ಯೂಸ್
04-03-24 11:43 am Mangalore Correspondent ಕ್ರೈಂ
ಪುತ್ತೂರು, ಮಾ.4: ಕಾಲೇಜು ಆವರಣದಲ್ಲಿ ಕುಳಿತಿದ್ದ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಯುವಕನೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಕೇರಳ ಮೂಲದ ವಿದ್ಯಾರ್ಥಿನಿ ಅಲೀನಾ ಸಿಬಿ, ಅರ್ಚನಾ, ಅಮೃತ ಆ್ಯಸಿಡ್ ದಾಳಿಗೆ ಒಳಗಾದ ವಿದ್ಯಾರ್ಥಿನಿಯರು. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಯುವಕ ಆ್ಯಸಿಡ್ ಎರಚಿದ್ದಾನೆ. ಆರೋಪಿ ಮಾಸ್ಕ್, ತಲೆಗೆ ಟೋಪಿ ಹಾಕಿದ್ದು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ.



ಕೂಡಲೇ ವಿದ್ಯಾರ್ಥಿನಿಯರನ್ನು ಕಡಬದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಯನ್ನು ಬಳಿಕ ಸ್ಥಳೀಯರು ಸೇರಿ ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಕೇರಳ ಮೂಲದ ಅಬಿನ್ ಎಂದು ಗುರುತಿಸಲಾಗಿದೆ. ಈತ ಕೇರಳದಲ್ಲಿ ಎಂಬಿಎ ಓದುತ್ತಿದ್ದು ಕಡಬಕ್ಕೆ ಬಂದು 17 ವರ್ಷದ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ಮಾಡಿದ್ದಾನೆ. ಒಬ್ಬ ವಿದ್ಯಾರ್ಥಿನಿ ಆತನ ಟಾರ್ಗೆಟ್ ಆಗಿತ್ತು. ಜೊತೆಗೆ ಕುಳಿತಿದ್ದವರ ಮೇಲೆಯೂ ಏಸಿಡ್ ಬಿದ್ದಿದೆ. ಒಬ್ಬಳು ವಿದ್ಯಾರ್ಥಿನಿಯ ದೇಹಕ್ಕೆ ಹೆಚ್ಚು ಸುಟ್ಟ ಗಾಯಗಳಾಗಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ದ.ಕ. ಎಸ್ಪಿ ರಿಷ್ಯಂತ್ ಸಿಂಗ್ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳು ಶಾಲಾ ವರಾಂಡದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಮುಖದ ಭಾಗ ಸುಟ್ಟು ಹೋಗಿದೆ. ಒಬ್ಬಳು ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ವನ್ ಸೈಡ್ ಪ್ರೀತಿಯ ಕಾರಣಕ್ಕೆ ಏಸಿಡ್ ದಾಳಿ ಮಾಡಿದ್ದಾನೆಂದು ಹೇಳಲಾಗುತ್ತಿದೆ.
Three Pre-University students were attacked with acid on Monday when they were inside their college in Kadaba of Dakshina Kannada district. The students are being treated at the local hospital and will shifted to Mangaluru for further treatment. The police have arrested the accused.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm