ಬ್ರೇಕಿಂಗ್ ನ್ಯೂಸ್
14-03-24 04:04 pm Bangalore Correspondent ಕ್ರೈಂ
ಬೆಂಗಳೂರು, ಮಾ.14: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮೇಲೆ ದಾಳಿ ಮಾಡಿದ್ದಾರೆ.
ಬೆಂಗಳೂರಿನ ಕೊಡಿಗೆಹಳ್ಳಿ ಬಳಿಯ ದೇವಿ ನಗರದಲ್ಲಿರುವ ಲಕ್ಷ್ಮೀ ಜುವೆಲ್ಲರ್ಸ್‌ನಲ್ಲಿ ಗುರುವಾರ ಹಾಡಹಗಲೇ ಈ ಘಟನೆ ನಡೆದಿದ್ದು, ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗುಂಡಿನ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ ಅಂದಾ ರಾಮ್ ಹಾಗು ಆಪುರಾಮ್ ಎಂಬವರಿಗೆ ಸೇರಿದ ಲಕ್ಷ್ಮೀ ಜುವೆಲ್ಲರಿಗೆ ಇಂದು ಇಬ್ಬರು ದರೋಡೆಕೋರರು ನುಗ್ಗಿದ್ದರು. ಬೈಕ್‌ನಲ್ಲಿ ಬಂದಿದ್ದ ನಾಲ್ವರು ಬೈಕ್ ನಿಲ್ಲಿಸಿ ನೇರವಾಗಿ ಅಂಗಡಿಗೆ ನುಗ್ಗಿದ್ದಾರೆ. ಚಿನ್ನದ ಅಂಗಡಿ ಮಾಲೀಕರ ಬಳಿ ತಮಗೆ ಹಣ ನೀಡುವಂತೆ ಕೇಳಿದ್ದಾರೆ. ಈ ವೇಳೆ ಹಣ ನೀಡಲು ನಿರಾಕರಿಸಿದಾಗ ಪಿಸ್ತೂಲು ತೋರಿಸಿ ಹದರಿಸಿದ್ದಾರೆ. ಆಗಲೂ ಮಾಲೀಕರು ಹಣ ಕೊಡಲು ಒಪ್ಪದೆ ಇದ್ದಾಗ ಹಲ್ಲೆ ನಡೆಸಿದ್ದಲ್ಲದೆ ಗುಂಡು ಹಾರಿಸಿದ್ದಾರೆ.
ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಸುತ್ತಲಿದ್ದ ಜನರು ಓಡಿಬಂದಿದ್ದಾರೆ. ಆಗ ಈ ದರೋಡೆಕೋರರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿ ನಡೆಸಿ ಪರಾರಿಯಾಗುವ ಭರದಲ್ಲಿ ಪಿಸ್ತೂಲನ್ನು ಅಲ್ಲೇ ಬಿಟ್ಟು ಓಡಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜುವೆಲ್ಲರಿಯ ಸಿಸಿಟಿವಿ ಮತ್ತು ಅಕ್ಕಪಕ್ಕದ ಅಂಗಡಿಗಳ ಸಿಸಿಟಿವಿ ಪರಿಶೀಲಿಸಲಾಗುತ್ತಿದೆ.
At least two people were injured after two bike-borne miscreants opened fire in Bengaluru's Kodigehalli area on Thursday. The incident took place earlier today at 11 am, when two bike-borne miscreants tried to rob a jewellery store, Laxmi jewellers, in Devinagar.
11-01-25 10:53 pm
HK News Desk
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
BBMP Raid, Lokayukta; ಬಿಬಿಎಂಪಿ 50 ಕಡೆಗಳಲ್ಲಿ ಲ...
11-01-25 09:14 pm
CT Ravi,Threat, Lakshmi Hebbalkar; ಬೆಳಗಾವಿ ಅಭ...
11-01-25 02:11 pm
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
12-01-25 05:07 pm
HK News Desk
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
12-01-25 11:03 pm
Mangalore Correspondent
PLD bank election, MLA Ashok Rai, Puttur: ಪಿಎ...
12-01-25 10:06 pm
Hardeep Singh Puri, Brijesh Chowta, Mangalore...
12-01-25 12:33 pm
CM Siddaramaiah, Kambala Mangalore, Naringana...
11-01-25 10:34 pm
Mangalore Lit Fest 2025, Hardeep Singh Puri;...
11-01-25 07:19 pm
11-01-25 10:21 pm
Mangalore Correspondent
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm