ಬ್ರೇಕಿಂಗ್ ನ್ಯೂಸ್
21-03-24 07:32 pm HK News Desk ಕ್ರೈಂ
ಮಂಡ್ಯ, ಮಾ 21: ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ಮಹಿಳೆ ಮತ್ತು ಎರಡೂವರೆ ವರ್ಷದ ಮಗುವೊಂದನ್ನು ದುಷ್ಕರ್ಮಿಗಳು ತುಂಡರಿಸಿ ಚೀಲದಲ್ಲಿ ಕಟ್ಟಿ ಕೆರೆಗೆ ಬಿಸಾಡಿರುವ ಘಟನೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಲ್ಕೆರೆ ಗ್ರಾಮದ ಜಯಮ್ಮ (46), ಅವರ ಎರಡೂವರೆ ವರ್ಷದ ಮೊಮ್ಮಗಳು ರಿಷಿಕಾ ಕೊಲೆಯಾದವರು. ಜಯಮ್ಮ ಮಾ.12ರಂದು ಆದಿಚುಂಚನಗಿರಿಯ ವ್ಯಕ್ತಿಯೊಬ್ಬರು ತನಗೆ ಹಣ ನೀಡಬೇಕಾಗಿದ್ದು, ಅವರಿಂದ ಹಣ ಪಡೆದು ಬರುವುದಾಗಿ ತಿಳಿಸಿ ಮನೆಯಿಂದ ಮೊಮ್ಮಗಳ ಜತೆ ಬಂದಿದ್ದರು. ನಂತರ ಮಾ.18ರ ವರೆಗೂ ಮನೆಗೆ ಹಿಂದಿರುಗಿರಲಿಲ್ಲ. ಜಯಮ್ಮ ಅವರ ಮೊಬೈಲ್ ಫೋನ್ ಸ್ವೀಚ್ ಆಫ್ ಆಗಿತ್ತು. ಹೀಗಾಗಿ, ಜಯಮ್ಮ ಅವರ ಪುತ್ರ ಪ್ರವೀಣ್ ಅವರು ತಾಯಿ ಮತ್ತು ತನ್ನ ಪುತ್ರಿ ಕಾಣೆಯಾಗಿರುವುದಾಗಿ ಅಜ್ಜಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಮಾ.18ರಂದು ಮಧ್ಯಾಹ್ನ ಪ್ರವೀಣ್ ಮೊಬೈಲ್‌ಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಜಯಮ್ಮ ಮತ್ತು ರಿಷಿಕಾಳನ್ನು ಕೊಲೆ ಮಾಡಿ ಚೀಲದಲ್ಲಿ ಕಟ್ಟಿ ಆದಿಚುಂಚನಗಿರಿ ಕಲ್ಯಾಣಿ ಬಳಿ ಇರುವ ಕೆರೆಗೆ ಬಿಸಾಕಿರುವುದಾಗಿ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಪ್ರವೀಣ್ ಪೊಲೀಸರ ನೆರವಿನೊಂದಿಗೆ ಕೆರೆಗೆ ಬಂದು ಹುಡುಕಿದಾಗ ಚೀಲದಲ್ಲಿ ತುಂಡರಿಸಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದವು. ಮುಖದ ಗುರುತು ಸಿಗದಂತೆ ಜಯಮ್ಮ ಮತ್ತು ರಿಷಿಕಾಳನ್ನು ಕೊಲೆ ಮಾಡಲಾಗಿದೆ.
ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಎಎಸ್ಪಿ ತಿಮ್ಮಯ್ಯ, ಸಿಪಿಐ ಬಿ.ಆರ್. ಗೌಡ ಪರಿಶೀಲನೆ ನಡೆಸಿದರು. ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Mandya body of two year old grand daughter and grand mother found in Lake. The body has been cut into pieces and thrown into the lake.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 09:48 am
HK News Desk
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm