ಬ್ರೇಕಿಂಗ್ ನ್ಯೂಸ್
21-03-24 10:43 pm Mangalore Correspondent ಕ್ರೈಂ
ಮಂಗಳೂರು, ಮಾ.21: ನಗರದ ಪ್ರತಿಷ್ಠಿತ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳಾಗಿರುವ ಯುವಕರು ಹುಡುಗಿ ವಿಚಾರದಲ್ಲಿ ಹೊಡೆದಾಡಿದ್ದು, ಒಬ್ಬ ಯುವಕನಿಗೆ ಮುಖದಲ್ಲಿ ರಕ್ತ ಒಸರುವ ರೀತಿ ಹಿಗ್ಗಾಮುಗ್ಗಾ ಹೊಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
ನೀರುಮಾರ್ಗದಲ್ಲಿ ಈ ಘಟನೆ ನಡೆದಿದ್ದು ವಿಡಿಯೋದಲ್ಲಿ ಯುವಕರ ಹೊಡೆದಾಟದ ದೃಶ್ಯ ಇದೆ. ಬಜ್ಜೋಡಿ ನಿವಾಸಿ ಯುವಕ ತಾನು ಪ್ರೀತಿಸುತ್ತಿದ್ದ ಹುಡುಗಿಯಲ್ಲಿ ಪದೇ ಪದೇ ಹಣ ಕೇಳಿ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಯುವತಿ ತನ್ನ ನೀರುಮಾರ್ಗದ ಗೆಳೆಯನಿಗೆ ವಿಷಯ ತಿಳಿಸಿದ್ದಳು. ವಿಷಯ ತಿಳಿದ ಲವರ್ ಯುವಕ ಬಜ್ಜೋಡಿಯಿಂದ ಐದಾರು ಮಂದಿ ಯುವಕರ ಜೊತೆಗೆ ಕಾರಿನಲ್ಲಿ ನೀರುಮಾರ್ಗಕ್ಕೆ ತೆರಳಿದ್ದು ಅಲ್ಲಿನ ಯುವಕನನ್ನು ಪ್ರಶ್ನೆ ಮಾಡಿದ್ದಾರೆ.


ತಡರಾತ್ರಿಯಲ್ಲಿ ಪಾಲ್ದಾನೆ ಎಂಬಲ್ಲಿ ಆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೆ, ಹೊಡೆದಾಟದ ವಿಡಿಯೋವನ್ನು ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಒದೆ ತಿಂದ ಯುವಕನ ಮುಖ ರಕ್ತಸಿಕ್ತವಾಗಿತ್ತು.
ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಹುಡುಗರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಒಬ್ಬ ಯುವಕ ಕಳೆದ ವರ್ಷ ಡಿಗ್ರಿ ಪೂರೈಸಿದ್ದರೆ, ಹಲ್ಲೆ ನಡೆಸಿದ ಯುವಕ ಈ ಸಲ ಅಂತಿಮ ಪದವಿಯಲ್ಲಿದ್ದಾನೆ ಎಂಬ ಮಾಹಿತಿಯಿದೆ. ಎರಡೂ ಕಡೆಯ ಕುಟುಂಬಸ್ಥರು ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥ ಮಾಡಿದ್ದಾರೆ. ಹಲ್ಲೆ ನಡೆಸಿದ ಯುವಕ ಅಂತಿಮ ವರ್ಷದ ಡಿಗ್ರಿ ವಿದ್ಯಾರ್ಥಿಯಾಗಿದ್ದು, ಈ ಹಿಂದೆಯೂ ಕಾಲೇಜಿನಲ್ಲಿ ಗಲಾಟೆ ಮಾಡಿ ಕಿರಿಕ್ ಮಾಡಿದ್ದ. ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ.
Video of neermarga youth brutally assaulted by youth from Bajjodi in Mangalore goes viral over the issue of girl. Youth from neermarga paldane was dragged from his house and was brutally assaulted by a youth over matter of girl. The video of this has gone viral on social media. No case has been registered so far at Kankandy rural police station.
26-06-26 05:10 pm
HK News Staffer
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 04:26 pm
HK News Staffer
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm