ಬ್ರೇಕಿಂಗ್ ನ್ಯೂಸ್
22-03-24 06:07 pm HK News Desk ಕ್ರೈಂ
ತುಮಕೂರು, ಮಾ.22: ಕೆರೆಯ ಬಳಿಯಲ್ಲಿ ಕಾರೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅದರಲ್ಲಿ ಮೂವರು ಅಪರಿಚಿತ ವ್ಯಕ್ತಿಗಳ ಮೃತದೇಹಗಳು ಪತ್ತೆಯಾಗಿವೆ. ತುಮಕೂರು ತಾಲೂಕಿನ ಕೋರ ಹೋಬಳಿಯ ಕುಚ್ಚಂಗಿ ಕೆರೆಯ ಬಳಿ ಘಟನೆ ನಡೆದಿದೆ.
ಸುಟ್ಟು ಹೋಗಿರುವ ಕಾರಿನ ನಂಬರ್ ಪ್ಲೇಟ್ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ್ದು ಎನ್ನುವ ಮಾಹಿತಿಯಡಿ ಪೊಲೀಸರು ತನಿಖೆ ನಡೆಸಿದ್ದಾರೆ. ಕಾರು ಬೆಳ್ತಂಗಡಿ ಮೂಲಕ ರಫೀಕ್ ಎಂಬವರಿಗೆ ಸೇರಿದ್ದು ಎನ್ನುವ ಮಾಹಿತಿ ಇದೆ. ಕಾರಿನಲ್ಲಿದ್ದ ಶವ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ (45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್ (56) ಮತ್ತು ಶಿರ್ಲಾಲು ನಿವಾಸಿ ಇಮ್ತಿಯಾಜ್ (34) ಎಂದು ಹೇಳಲಾಗುತ್ತಿದೆ. ಮೃತರ ಸಂಬಂಧಿಕರು ತುಮಕೂರಿಗೆ ಬಂದಿದ್ದು ಮೂವರ ಶವಗಳೂ ಗುರುತು ಸಿಗದಷ್ಟು ಸುಟ್ಟು ಹೋಗಿವೆ. ಯಾರಾದ್ರೂ ಕೊಲೆಗೈದು ಸುಟ್ಟು ಹೋಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾರಿನಲ್ಲಿ ಒಟ್ಟು ಐವರು ಬೆಳ್ತಂಗಡಿಯಿಂದ ತೆರಳಿದ್ದರು ಎನ್ನಲಾಗುತ್ತಿದ್ದು ಇನ್ನಿಬ್ಬರು ಎಲ್ಲಿದ್ದಾರೆ ಎನ್ನುವ ಮಾಹಿತಿ ಲಭಿಸಿಲ್ಲ. ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಕೆ.ವಿ, ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖರ್ ಭೇಟಿ ನೀಡಿದ್ದಾರೆ. ಶ್ವಾನದಳ, ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
Car found in brunt condition at Tumkur, three bodies found of Mangalore native. The three are said to be from Belthangady. It is said they have been murdered and then burnt in the car. The deceased has been identified as Suhal, isaz and Imtiyaz.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm