ಬ್ರೇಕಿಂಗ್ ನ್ಯೂಸ್
23-03-24 08:43 pm Mangaluru Correspondent ಕ್ರೈಂ
ಮಂಗಳೂರು, ಮಾ.23: ಬಿಲ್ಡರ್ ಒಬ್ಬರಿಂದ ಮಹಾನಗರ ಪಾಲಿಕೆಗೆ ಬರೆದುಕೊಟ್ಟ ಜಾಗದ ಟಿಡಿಆರ್ ಮಾಡಿಕೊಡಲು 25 ಲಕ್ಷ ಲಂಚ ಬೇಡಿಕೆಯಿಟ್ಟು ಅದನ್ನು ಸ್ವೀಕರಿಸುತ್ತಿದ್ದಾಗಲೇ ಮೂಡಾ ಕಮಿಷನರ್ ಮನ್ಸೂರ್ ಆಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬಿಲ್ಡರ್ ಒಬ್ಬರು ಮಂಗಳೂರು ತಾಲೂಕು ಕುಡುಪು ಗ್ರಾಮದ ಸರ್ವೇ ನಂ. 57/ಪಿ ರಲ್ಲಿ ಒಟ್ಟು 10.8 ಎಕ್ರೆ ಜಮೀನನ್ನು ಖರೀದಿಸಿದ್ದು, ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಪಚ್ಚನಾಡಿ ಮತ್ತು ಕುಡುಪು ಗ್ರಾಮಗಳ ಸುತ್ತಮುತ್ತ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಘನತ್ಯಾಜ್ಯ ನಿರ್ವಹಣೆಯ ಘಟಕವನ್ನು ಭವಿಷ್ಯದಲ್ಲಿ ವಿಸ್ತರಿಸುವ ಉದ್ದೇಶದಿಂದ ಸದ್ರಿ ಜಮೀನನ್ನು ಟಿ.ಡಿ.ಆರ್ ನಿಯಮದಡಿ ಖರೀದಿ ಮಾಡುವ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯೊಂದಿಗೆ ಫಿರ್ಯಾದಿದಾರರಿಗೆ ಹಾಗೂ ಜಮೀನಿನ ಈ ಹಿಂದಿನ ಮಾಲಕರಿಗೆ ಪತ್ರ ವ್ಯವಹಾರವಾಗಿತ್ತು. ಅದರಂತೆ ಸದ್ರಿ ಜಮೀನು 2024 ಜನವರಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಹೆಸರಿಗೆ ನೋಂದಣಿಯಾಗಿತ್ತು.
ಬಳಿಕ ಮಹಾನಗರ ಪಾಲಿಕೆಯ ಆಯುಕ್ತರು ಸದ್ರಿ ಜಮೀನಿನ ಟಿ.ಡಿ.ಆರ್ ನೀಡಲು ಮುಡಾ ಆಯುಕ್ತರಿಗೆ ಫೆಬ್ರವರಿ ತಿಂಗಳಲ್ಲಿ ಪತ್ರ ಕಳುಹಿಸಿದ್ದು, ಮುಡಾ ಆಯುಕ್ತರಾದ ಮನ್ಸೂರ್ ಆಲಿರವರು ಸದ್ರಿ ಫೈಲ್ ಅನ್ನು ಪೆಂಡಿಂಗ್ ಇಟ್ಟಿದ್ದರು. ಈ ಬಗ್ಗೆ ಬಿಲ್ಡರ್ ಮುಡಾ ಆಯುಕ್ತರಾದ ಮನ್ಸೂರ್ ಆಲಿ ಅವರ ಬಳಿ ಹೋಗಿ ಮಾತನಾಡಿದಾಗ 25 ಲಕ್ಷ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಈ ಬಗ್ಗೆ ಬಿಲ್ಡರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಶನಿವಾರ ಮುಡಾ ಆಯುಕ್ತ ಮನ್ಸೂರ್ ಆಲಿಯವರ ಸೂಚನೆಯಂತೆ ಬ್ರೋಕರ್ ಕೊಡಿಯಾಲ್ ಬೈಲ್ ನಿವಾಸಿ ಮಹಮ್ಮದ್ ಸಲೀಂ ಪಿರ್ಯಾದುದಾರರಿಂದ ರೂ.25,00,000 ಲಂಚದ ಹಣವನ್ನು ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ. ಬಳಿಕ 25 ಲಕ್ಷ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವ ಮೂಡಾ ಆಯುಕ್ತ ಮನ್ಸೂರ್ ಅಲಿರವರನ್ನು ಮತ್ತು ಲಂಚದ ಹಣವನ್ನು ಸ್ವೀಕರಿಸಿದ ಬೋಕರ್ ಮಹಮ್ಮದ್ ಸಲಿಂ ಅವರನ್ನು ಲೋಕಾಯುಕ್ತ ಅಧಿಕಾರಿಗಳು ದಸ್ತಗಿರಿ ಮಾಡಿದ್ದಾರೆ.
ಡಿವೈಎಸ್ಪಿ ಚಲುವರಾಜು ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಅಮಾನುಲ್ಲ, ಸುರೇಶ್ ಕುಮಾರ್ ಪಿ. ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿದ್ದರು.
Mangalore Lokayukta arrest MUDA commissioner Mansoor Ali for accepting Rs 25 lakh. Lokayukta sleuths have apprehended Mansoor Ali, commissioner of the Mangaluru Urban Development Authority (MUDA), red-handed while accepting a bribe of Rs 25 lac. The bribe was being solicited in exchange for issuing TDR clearance. Under the leadership of DySP Cheluvaraj, inspectors Amanulla and Suresh Kumar, the operation unfolded, resulting in the arrest of Mansoor Ali and broker Mohammed Saleem.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm