ಬ್ರೇಕಿಂಗ್ ನ್ಯೂಸ್
24-03-24 04:13 pm HK NEWS ಕ್ರೈಂ
ರಾಯಚೂರು, ಮಾ 24: ನಿಯಮಬಾಹಿರವಾಗಿ ಬಾಲಕಿಯನ್ಜು ದತ್ತು ಪಡೆದ ಪ್ರಕರಣದ ವಿಚಾರಣೆಗೆ ಹಿನ್ನೆಲೆಯಲ್ಲಿ ಜಿಲ್ಲೆಯ ಕಾಚಾಪುರ ಗ್ರಾಮಕ್ಕೆ ಮಹಜರು ಮಾಡಲು ಪೊಲೀಸರು ರೀಲ್ಸ್ ರಾಣಿ ಸೋನು ಗೌಡನನ್ನ ಕರೆ ತಂದಿದ್ದಾರೆ. ಈ ವೇಳೆ ಗ್ರಾಮಸ್ಥರು ಸೋನುಗೌಡ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದಾರೆ.
ಸ್ಥಳ ಮಹಜರು ಮಾಡಲು ಪೋಲಿಸರು ಭೇಟಿ ನೀಡಿದ ಬಳಿಕ ಸೋನು ಗೌಡ ಜೊತೆ ಮಾತನಾಡಬೇಕು ಅಂತ ಗ್ರಾಮಸ್ಥರು ಗಲಾಟೆ ಮಾಡಿದರು. ಪೊಲೀಸ್ ಕಾರಿಗೆ ಮುತ್ತಿಗೆ ಹಾಕಿ ಸೋನು ಗೌಡರನ್ನು ನೋಡಲು ನೂಕುನುಗ್ಗಲು ಮಾಡಿದರು. ಗ್ರಾಮಸ್ಥರು ಹಾಗೂ ಬಾಲಕಿ ಸಂಬಂಧಿಕರಿಂದ ಮಾಹಿತಿ ಪಡೆದ ಪೊಲೀಸರು ಸುಮಾರು ಇಪ್ಪತ್ತು ನಿಮಿಷಗಳಲ್ಲಿ ಸ್ಥಳ ಮಹಜರು ಮುಗಿಸಿ ವಾಪಸ್ ತೆರಳಿದ್ದಾರೆ.
ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಗುವಿನ ಚಿಕ್ಕಪ್ಪ ಸೋನುಗೌಡ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವನ್ನು ನಾವು ದತ್ತು ನೀಡಿಲ್ಲ, ಆಕೆ ನಮಗೆ ಯಾವುದೇ ಹಣದ ಸಹಾಯ ಮಾಡಿಲ್ಲ. ನಮ್ಮ ಮಗಳನ್ನು ಓದಿಸುತ್ತೇನೆ. ಚೆನ್ನಾಗಿ ಸಾಕುತ್ತೇನೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ. ಈಗ ದತ್ತು ತೆಗೆದುಕೊಂಡಿದ್ದೇನೆ ಅಂತ ಹೇಳಿರುವುದು ಸರಿಯಲ್ಲ ಎಂದರು.
ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದ ಸೋನು ಗೌಡ ಇತ್ತೀಚೆಗೆ ಚಿಕ್ಕ ಬಾಲಕಿಯನ್ನು ದತ್ತು ಪಡೆದಿರುವುದಾಗಿ ಹೇಳಿಕೊಂಡಿದ್ದರು. ಆದರೆ, ದತ್ತು ಪಡೆದಿರುವ ರೀತಿ ನಿಯಮದ ಅನುಸಾರವಾಗಿಲ್ಲ ಎಂಬ ಕಾರಣಕ್ಕೆ ಆಕೆಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೇ, ಸೋನು ಗೌಡರನ್ನು ಪೊಲೀಸರು ಬಂಧಿಸಿದ್ದರು.
ಪ್ರಕರಣದ ವಿಚಾರಣೆ ಭಾಗವಾಗಿ ಇಂದು ಬಾಲಕಿ ಸ್ವಗ್ರಾಮವಾದ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಸೋನುಗೌಡ, ಬಾಲಕಿ ಹಾಗೂ ಪಾಲಕರನ್ನು ಕರೆ ತಂದು ವಿಚಾರಣೆ ನಡೆಸಲಾಗಿದೆ. ಈ ವೇಳೆ ಸೋನುಗೌಡ ಮಾತನಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದು, ಆಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಸೋನು ಶ್ರೀನಿವಾಸ್ ಗೌಡ ಮಾಡಿದ ತಪ್ಪೇನು?
ಸೇವಂತಿ ಎಂಬ ಬಾಲಕಿಯನ್ನು ದತ್ತು ಪಡೆದುಕೊಂಡಿದ್ದೇನೆ ಎಂದು ಸಾಮಾಜಿಕ ಜಾತಾಣದಲ್ಲಿ ಈಚೆಗೆ ಸೋನು ಶ್ರೀನಿವಾಸ್ ಗೌಡ ಹೇಳಿಕೊಂಡಿದ್ದರು. ಆದರೆ ಈ ದತ್ತು ಪ್ರಕ್ರಿಯೆ ಕಾನೂನುಬಾಹಿರವಾಗಿದೆ ಎಂಬ ಆರೋಪ ಕೇಳಿಬಂದಿದೆ. ಆ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಎಂಬುವವರು ಜೆಜೆ ಆ್ಯಕ್ಟ್ ಅಡಿಯಲ್ಲಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ಹಿನ್ನೆಲೆಯಲ್ಲಿ ಸೋನು ಗೌಡರನ್ನು ಪೊಲೀಸರು ಬಂಧಿಸಿದ್ದಾರೆ.
Sonu Gowda arrest, spot mahazar in Raichur, villagers revolt, chase police car. Social media content creator and a former Bigg Boss television show contestant Sonu Srinivas Gowda, 29, has been arrested for illegally “adopting” a girl child. The 8-year-old child has been rescued and handed over to the Child Welfare Committee. The girl was with Ms. Gowda for 41 days and has now been rescued, police said.
11-01-25 10:53 pm
HK News Desk
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
BBMP Raid, Lokayukta; ಬಿಬಿಎಂಪಿ 50 ಕಡೆಗಳಲ್ಲಿ ಲ...
11-01-25 09:14 pm
CT Ravi,Threat, Lakshmi Hebbalkar; ಬೆಳಗಾವಿ ಅಭ...
11-01-25 02:11 pm
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
12-01-25 05:07 pm
HK News Desk
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
12-01-25 11:03 pm
Mangalore Correspondent
PLD bank election, MLA Ashok Rai, Puttur: ಪಿಎ...
12-01-25 10:06 pm
Hardeep Singh Puri, Brijesh Chowta, Mangalore...
12-01-25 12:33 pm
CM Siddaramaiah, Kambala Mangalore, Naringana...
11-01-25 10:34 pm
Mangalore Lit Fest 2025, Hardeep Singh Puri;...
11-01-25 07:19 pm
11-01-25 10:21 pm
Mangalore Correspondent
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm