ಬ್ರೇಕಿಂಗ್ ನ್ಯೂಸ್
27-03-24 11:12 pm Mangalore Correspondent ಕ್ರೈಂ
ಮಂಗಳೂರು, ಮಾ.27: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಿಸಿ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 6.325 ಕೆ ಜಿ ಗಾಂಜಾ ಸಹಿತ ಆರೋಪಿ ವಶಪಡಿಸಿಕೊಳ್ಳಲು ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಂಗಳೂರು ನಗರಕ್ಕೆ ರೈಲಿನಲ್ಲಿ ತರುತ್ತಿದ್ದ. ಗಾಂಜಾವನ್ನು ಇಲ್ಲಿ ಸಣ್ಣ ಸಣ್ಣ ಪ್ಯಾಕೆಟ್ ಗಳನ್ನಾಗಿ ಮಾಡಿ ಮಂಗಳೂರಿನ ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದಾಗ ಅರೆಸ್ಟ್ ಮಾಡಿದ್ದಾರೆ. ಆರೋಪಿ ನೀರುಮಾರ್ಗ ನಿವಾಸಿ ನಿಶಾಂತ್ ಶೆಟ್ಟಿ(35) ಎಂಬಾತನಾಗಿದ್ದು ಆತನ ವಶದಲ್ಲಿದ್ದ ಅಶೋಕ್ ಲೈಲ್ಯಾಂಡ್ ದೋಸ್ತ್ ಗೂಡ್ಸ್ ಟೆಂಪೋ, ರೂ. 1,50,000/- ಮೌಲ್ಯದ 6 ಕೆಜಿ 325 ಗ್ರಾಂ ಗಾಂಜಾ, 2 ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕ ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ.


ಆರೋಪಿ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಪ್ರಕರಣ, ಕಳವು ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ವಿಟ್ಲ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹೀಗೆ ಒಟ್ಟು 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತದೆ.
The CCB police identified an accused carrying ganja from Vishakapatnam to Mangaluru via Bengaluru and selling it in Mangaluru. The police confiscated 6.325 kilos of ganja from the drug peddler.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm