ಬ್ರೇಕಿಂಗ್ ನ್ಯೂಸ್
28-03-24 02:18 pm Udupi Correspondent ಕ್ರೈಂ
ಉಡುಪಿ, ಮಾ.28: ನೇಜಾರು ನಾಲ್ವರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಅರುಣ್ ಚೌಗುಲೆ (39) ನನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಬುಧವಾರ ಉಡುಪಿ ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯದ ಮುಂದೆ ಆರೋಪಿ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದಾನೆಂದು ತಿಳಿದುಬಂದಿದೆ.
ಆರೋಪಿ ಮೇಲಿನ ಆಪಾದನೆ ವಾಚಿಸುವ ಪ್ರಕ್ರಿಯೆಗೆ ಮುನ್ನ ಪ್ರವೀಣ್ ಚೌಗುಲೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಧೀಶರು ಸೂಚಿಸಿದ್ದರು. ಅದರಂತೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದ ಆರೋಪಿ ಚೌಗುಲೆಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಕೃಷ್ಣ ಎಸ್. ಕೆ. ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಈ ಸಂದರ್ಭ ನ್ಯಾಯಾಧೀಶರಾದ ದಿನೇಶ್ ಹೆಗ್ಡೆ ಆರೋಪಿ ಮೇಲಿನ ಅಪಾದನೆಯನ್ನು ವಾಚಿಸಿದರು. ಆಗ ಆರೋಪಿ ಪ್ರವೀಣ್ ಅರುಣ್ ಚೌಗುಲೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದಾನೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಏಪ್ರಿಲ್ 5 ರಂದು ಪ್ರಿ ಟ್ರಯಲ್ ಕಾನ್ಫರೆನ್ಸ್ ನಡೆಸಲು ತೀರ್ಮಾನಿಸಲಾಗಿದೆ.
ಪೊಲೀಸ್ ಅಧಿಕಾರಿ ಮೇಲೆ ಮದ್ಯಪಾನ ಆರೋಪ ;
ಮದ್ಯಪಾನ ಆರೋಪ, ಕ್ರಮಕ್ಕೆ ಸೂಚನೆ
ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಆರೋಪಿಯ ಭದ್ರತೆ ವಹಿಸಿಕೊಂಡಿದ್ದ ಬೆಂಗಳೂರಿನ ಮೀಸಲು ಪೊಲೀಸ್ ವಿಭಾಗದ ಸಬ್ ಇನ್‌ಸ್ಪೆಕ್ಟರ್ ವಿರುದ್ಧ ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸಿದ ಆರೋಪ ಕೇಳಿ ಬಂದಿದ್ದು, ಈ ಶಿಸ್ತು ಕ್ರಮಕ್ಕೆ ಸಂಬಂಧಿಸಿದ ವಿಭಾಗದ ಡಿಸಿಪಿಗೆ ವರದಿ ಕಳುಹಿಸಲಾಗುವುದು ಎಂದು ಉಡುಪಿ ಪೊಲೀಸ್ ಅಧೀಕ್ಷಕ ಡಾ. ಕೆ. ಅರುಣ್ ತಿಳಿಸಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ನ್ಯಾಯಾಲಯಕ್ಕೆ ಕರೆ ತರುವ ಭದ್ರತೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ಬೆಂಗಳೂರಿನ ಮೀಸಲು ಪೊಲೀಸ್ ವಿಭಾಗದ ಸಬ್ ಇನ್‌ಸ್ಪೆಕ್ಟರ್ ಕರ್ತವ್ಯದ ವೇಳೆಯಲ್ಲಿ ಮದ್ಯ ಸೇವಿಸಿ ಬಂದಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಯುನಿಫಾರ್ಮ್ ಕೂಡಾ ಸಮರ್ಪಕವಾಗಿ ಧರಿಸದೆ, ನೇಮ್ ಪ್ಲೇಟ್ ಕೂಡ ಇರಲಿಲ್ಲ. ನಾನು ಕಳೆದ ರಾತ್ರಿ ಮದ್ಯ ಸೇವನೆ ಮಾಡಿದ್ದೇನೆ. ಬೇಕಿದ್ದರೆ ನನ್ನನ್ನು ಪರೀಕ್ಷೆಗೊಳಪಡಿಸಿ ಎಂದು ಹೇಳುತ್ತಿದ್ದರು.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ವೇಳೆ ಅನುಚಿತವಾಗಿ ವರ್ತಿಸುತ್ತಿದ್ದರು. ಮಾಧ್ಯಮದ ಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಅನುಚಿತವಾಗಿ ನಡೆದುಕೊಂಡರು. ಈ ಬಗ್ಗೆ ಸ್ಥಳದಲ್ಲಿದ್ದವರು ಉಡುಪಿ ಎಸ್ಪಿಯ ಗಮನಕ್ಕೆ ತಂದಿದ್ದು, ಶಿಸ್ತು ಕ್ರಮಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆ ಎಂದು ಎಸ್ಪಿ ತಿಳಿಸಿದರು.
Udupi murder of 4 at Nejar accused Praveen Chowgule refutes charges of crime. Praveen Chowgule, accused of murdering a mother and her three children in Nejar, has refuted the charges against him at the Udupi Second Additional District and Sessions Court.
11-01-25 10:53 pm
HK News Desk
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
BBMP Raid, Lokayukta; ಬಿಬಿಎಂಪಿ 50 ಕಡೆಗಳಲ್ಲಿ ಲ...
11-01-25 09:14 pm
CT Ravi,Threat, Lakshmi Hebbalkar; ಬೆಳಗಾವಿ ಅಭ...
11-01-25 02:11 pm
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
12-01-25 05:07 pm
HK News Desk
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
12-01-25 11:03 pm
Mangalore Correspondent
PLD bank election, MLA Ashok Rai, Puttur: ಪಿಎ...
12-01-25 10:06 pm
Hardeep Singh Puri, Brijesh Chowta, Mangalore...
12-01-25 12:33 pm
CM Siddaramaiah, Kambala Mangalore, Naringana...
11-01-25 10:34 pm
Mangalore Lit Fest 2025, Hardeep Singh Puri;...
11-01-25 07:19 pm
11-01-25 10:21 pm
Mangalore Correspondent
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm