ಬ್ರೇಕಿಂಗ್ ನ್ಯೂಸ್
29-03-24 09:32 am HK NEWS ಕ್ರೈಂ
ಲಕ್ನೋ, ಮಾ 29: 68ಕ್ಕೂ ಅಧಿಕ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದ ಉತ್ತರಪ್ರದೇಶದ 5 ಬಾರಿಯ ಶಾಸಕ, ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿ (60) ಗುರುವಾರ ಮೃತಪಟ್ಟಿದ್ದಾರೆ.
8 ಪ್ರಕರಣಗಳಲ್ಲಿ ದೋಷಿ ಎಂದು ಸಾಬೀತಾಗಿ 2005 ರಿಂದಲೂ ಜೈಲಲ್ಲಿದ್ದ ಅನ್ಸಾರಿ, ಗುರುವಾರ ಸಂಜೆ ರಂಜಾನ್ ಉಪವಾಸ ಮುರಿಯುತ್ತಿದ್ದಂತೆ ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಹೃದಯಾಘಾತದಿಂದ ಕೊನೆಯುಸಿರೆಳೆದರು. ಮಂಗಳವಾರವಷ್ಟೇ ಕಿಬ್ಬೊಟ್ಟೆ ನೋವಿನ ಕಾರಣ 14 ಗಂಟೆ ಕಾಲ ಆಸ್ಪ ತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದರು.
ಅಲರ್ಟ್ ಘೋಷಣೆ ;
ಅನ್ಸಾರಿ ಸಾವಿನ ಹಿನ್ನೆಲೆ ಉತ್ತರ ಪ್ರದೇಶದಾದ್ಯಂತ ನಿಷೇಧಾಜ್ಞೆ ಹೊರಡಿಸಲಾಗಿದ್ದು, ಅಲರ್ಟ್ ಘೋಷಿಸಿ, ಭದ್ರತೆ ಬಿಗಿಗೊಳಿಸಲಾಗಿದೆ. ಮಾಫಿಯಾ ಡಾನ್ ಹಠಾತ್ ನಿಧನದ ಬಳಿಕ ಗಾಜಿಪುರ, ಅಜಂಗಢ ಪೊಲೀಸರಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು, ಪ್ರಚೋದಕ ಮತ್ತು ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ. ಮುಹಮ್ಮದಾಬಾದ್‌ನಲ್ಲಿರುವ ಮುಖ್ತಾರ್ ಅವರ ಪೂರ್ವಜರ ಮನೆಯಲ್ಲಿ ಜನರು ಸೇರಲು ಪ್ರಾರಂಭಿಸಿದ್ದಾರೆ. ಮುಖ್ತಾರ್ ಅನ್ಸಾರಿ ಮನೆ ಸುತ್ತ ಪೊಲೀಸ್ ಪಡೆ ನಿಯೋಜಿಸಲಾಗಿದೆ.
ಮುಖ್ತಾರ್ ಅನ್ಸಾರಿ ಸಾವಿನ ಹಿಂದೆ ಸಂಚು ಅಡಗಿದೆ. ಜೈಲಲ್ಲಿ ಯಾರೋ ವಿಷವುಣಿಸಿ ಕೊಂದಿದ್ದಾರೆ ಎಂದು ಅವರ ಸಹೋದರ, ಘಾಜಿಪುರ ಸಂಸದ ಅಫ್ಜಲ್ ಅನ್ಸಾರಿ ಆರೋಪಿಸಿದ್ದಾರೆ. ಅನ್ಸಾರಿಯನ್ನು ಎನ್ ಕೌಂಟರ್ ಮಾಡಲು ಸಂಚು ನಡೆದಿದೆ ಎಂದು ಈ ಹಿಂದೆಯೇ ಅವರ ಕುಟುಂಬಸ್ಥರು ಆರೋಪಿಸಿದ್ದರು.
ಅನಾರೋಗ್ಯದ ನಡುವೆಯೂ ಮಾಫಿಯಾ ಡಾನ್ ಮುಕ್ತಾರ್ ಅನ್ಸಾರಿ ರಂಜಾನ್ ಪ್ರಯುಕ್ತ ಉಪವಾಸ ನಡೆಸುತ್ತಿದ್ದರು ಎಂದು ಹೇಳಲಾಗಿದೆ. ಮಾರ್ಚ್ 26ರಂದು ಎದೆ ನೋವು ಕಾಣಿಸಿಕೊಂಡ ಹಿನ್ನಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. 14 ಗಂಟೆಗಳ ಚಿಕಿತ್ಸೆಯ ನಂತರ ವೈದ್ಯರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ ನಂತರ ಮುಕ್ತಾರ್ ಅನ್ಸಾರಿಯನ್ನು ಬಂದಾ ಮಂಡಲ್ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಇದಾದ ಬಳಿಕ ಮತ್ತೊಮ್ಮೆ ಮುಖ್ತಾರ್ ಅನ್ಸಾರಿ ಅವರಿಗೆ ಹೃದಯಾಘಾತವಾಗಿತ್ತು ಎಂದು ತಿಳಿದುಬಂದಿದೆ.
Jailed gangster-turned-politician Mukhtar Ansari has died of a cardiac arrest after being hospitalised on Thursday evening. The five-time former MLA from Mau in Uttar Pradesh had been in jail in the state and in Punjab since 2005. A medical bulletin said the 63-year-old, who was lodged in a jail in UP's Banda, had been taken to the Rani Durgavati Medical College in the district by jail authorities in an unconscious state around 8.25 pm on Thursday after complaining of vomiting.
11-01-25 10:53 pm
HK News Desk
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
BBMP Raid, Lokayukta; ಬಿಬಿಎಂಪಿ 50 ಕಡೆಗಳಲ್ಲಿ ಲ...
11-01-25 09:14 pm
CT Ravi,Threat, Lakshmi Hebbalkar; ಬೆಳಗಾವಿ ಅಭ...
11-01-25 02:11 pm
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
12-01-25 05:07 pm
HK News Desk
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
12-01-25 11:03 pm
Mangalore Correspondent
PLD bank election, MLA Ashok Rai, Puttur: ಪಿಎ...
12-01-25 10:06 pm
Hardeep Singh Puri, Brijesh Chowta, Mangalore...
12-01-25 12:33 pm
CM Siddaramaiah, Kambala Mangalore, Naringana...
11-01-25 10:34 pm
Mangalore Lit Fest 2025, Hardeep Singh Puri;...
11-01-25 07:19 pm
11-01-25 10:21 pm
Mangalore Correspondent
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm