ಬ್ರೇಕಿಂಗ್ ನ್ಯೂಸ್
05-04-24 10:09 am HK News Desk ಕ್ರೈಂ
ಚಾಮರಾಜನಗರ, ಏ 04: ಮೈಸೂರು ಜಿಲ್ಲೆಯ, ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಂಜನಗೂಡಿನ ಯುಬಿ ತಯಾರಿಕಾ ಘಟಕದಲ್ಲಿ 98.56 ಕೋಟಿ ರೂ. ಮೌಲ್ಯದ ಬಿಯರ್ ಹಾಗೂ ಕಚ್ಚಾ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಕೋಟಿ ಕೋಟಿ ಮೊತ್ತದ ಮದ್ಯ ವಶಕ್ಕೆ ಪಡೆಯಲಾಗಿದೆ. 6.03 ಲಕ್ಷ ರೂ. ಬಿಯರ್ ಪೆಟ್ಟಿಗೆ, ಟ್ಯಾಂಕ್‌ನಲ್ಲಿದ್ದ 66.16 ಲಕ್ಷ ಲೀಟರ್ ಬಿಯರ್, 6.5 ಲಕ್ಷ ಅಕ್ರಮವಾಗಿ ಸಂಗ್ರಹಿಸಿದ್ದ 7,000 ಬಿಯರ್ ರಟ್ಟಿನ ಪೆಟ್ಟಿಗೆಗಳು ಪತ್ತೆ ಆಗಿದ್ದು, ಘಟಕದಲ್ಲಿ ನಿಗದಿಗಿಂತ ಹೆಚ್ಚುವರಿ ಬಿಯರ್ ತಯಾರಿಸಿ ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಸದ್ಯ 17 ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿ ಅಬಕಾರಿ ಪೊಲೀಸರಿಂದ ತನಿಖೆ ನಡೆಸಿದ್ದಾರೆ.
ಘಟಕದಲ್ಲಿ ನಿಗದಿಗಿಂತ ಹೆಚ್ಚುವರಿ ಬಿಯರ್ ತಯಾರಿಸಿ ಕೇರಳಕ್ಕೆ ಸಾಗಿಸಿರುವ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ಮಂಗಳವಾರ ಅನಾಮಧೇಯ ಕರೆ ಬಂದಿತ್ತು. ಇದರ ಆಧಾರದಲ್ಲಿ ಅವರು ಘಟಕಕ್ಕೆ ತೆರಳಿ ಪರಿಶೀಲನೆ ನಡೆಸುವಂತೆ ಜಿಲ್ಲಾ ಅಬಕಾರಿ ಉಪ ಆಯುಕ್ತ ನಾಗಶಯನ ಅವರಿಗೆ ಸೂಚನೆ ನೀಡಿದ್ದರು. ಮೈಸೂರಿನ ಅಬಕಾರಿ ಜಂಟಿ ಆಯುಕ್ತರ ಮಾರ್ಗದರ್ಶನೊಂದಿಗೆ ಅಬಕಾರಿ ಅಧಿಕಾರಿಗಳು ನಂಜನಗೂಡಿನ ಯುಬಿ ಘಟಕಕ್ಕೆ ಮಂಗಳವಾರ ಮಧ್ಯಾಹ್ನ ಭೇಟಿ ನೀಡಿ, ಲೆಕ್ಕದ ಪುಸ್ತಕದೊಂದಿಗೆ ಭೌತಿಕ ದಾಸ್ತಾನು ಪರಿಶೀಲಿಸಿದಾಗ 7000ದಷ್ಟು ಬಿಯರ್ ಪೆಟ್ಟಿಗೆಗಳನ್ನು ಹೆಚ್ಚುವರಿಯಾಗಿ ದಾಸ್ತಾನು ಮಾಡಿದ್ದು ಕಂಡು ಬಂದಿದೆ.
‘ಅಬಕಾರಿ ಕಾಯ್ದೆಯ ಅಡಿಯಲ್ಲಿ ಗಂಭೀರ ಪ್ರಕರಣವಾಗಿರುವುದರಿಂದ, ಪ್ರಕರಣ ದಾಖಲಿಸಿಕೊಂಡು ಘಟಕದಲ್ಲಿರುವ ಎಲ್ಲ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಅಕ್ಷರಶಃ ಇಡೀ ಘಟಕವನ್ನೇ ಜಪ್ತಿ ಮಾಡಿದಂತಾಗಿದೆ’ ಎಂದು ಅಬಕಾರಿ ಅಧಿಕಾರಿಗಳು ’ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಘಟನೆ ಸಂಬಂಧ, ಘಟಕ ಮತ್ತು 17 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಎಲ್ಲರೂ ತಲೆ ಮರೆಸಿಕೊಂಡಿದ್ದಾರೆ.
ಕೇರಳಕ್ಕೆ ಹೋಗಿ ವಾಪಸ್ ಬಂದಿತ್ತು: ‘ಘಟಕದಲ್ಲಿ 14 ಸಾವಿರ ಪೆಟ್ಟಿಗೆಗಳಷ್ಟು ಬಿಯರ್ ತಯಾರಿಸಿ 7000ಕ್ಕೆ ಮಾತ್ರ ಲೆಕ್ಕ ತೋರಿಸಲಾಗಿತ್ತು. 7000 ಸಾವಿರ ಪೆಟ್ಟಿಗೆಗಳನ್ನು ಕೇರಳಕ್ಕೆ ಸಾಗಿಸಲಾಗಿತ್ತು. ಈ ಬಗ್ಗೆ ಮಾಹಿತಿ ಕಲೆ ಹಾಕಿ ಘಟಕಕ್ಕೆ ಅಧಿಕಾರಿಗಳು ಭೇಟಿ ನೀಡುವ ಹೊತ್ತಿಗೆ ಆ ಪೆಟ್ಟಿಗೆಗಳನ್ನು ವಾಪಸ್ ಘಟಕದಲ್ಲಿ ತಂದಿರಿಸಲಾಗಿತ್ತು’ ಎಂದು ಮೂಲಗಳು ತಿಳಿಸಿವೆ.
Beer worth Rs 98 crores was seized from a factory in Himmavu village of Nanjangudu taluk under Chamarajanagar Lok Sabha constituency on April 2, district officials said on Thursday.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm