ಬ್ರೇಕಿಂಗ್ ನ್ಯೂಸ್
06-04-24 06:55 pm Mangalore Correspondent ಕ್ರೈಂ
ಉಳ್ಳಾಲ, ಎ.6: ಗುಜರಿ ವ್ಯಾಪಾರಿಯೋರ್ವನನ್ನ ತನ್ನ ಬಾಡಿಗೆ ಮನೆಗೆ ಕರೆಸಿ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಹಾತ್ಮ ಗಾಂಧಿ ರಂಗಮಂದಿರ ಬಳಿ ಶನಿವಾರ ಸಂಜೆ ನಡೆದಿದೆ.
ಮಂಗಳೂರಿನ ಕಾವೂರು ಪಂಜಿಮೊಗರು ನಿವಾಸಿ ಹಮೀದ್ ಇರಿತಕ್ಕೊಳಗಾದ ಗುಜರಿ ವ್ಯಾಪಾರಿ. ಮೂಲತಃ ತಣ್ಣೀರುಬಾವಿ ನಿವಾಸಿ ಸದ್ರಿ ಉಳ್ಳಾಲದ ಮಹಾತ್ಮಗಾಂಧಿ ರಂಗಮಂದಿರದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿರುವ ಮೊಹಮ್ಮದ್ ಜಾವೇದ್ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿ.
ಜಾವೇದ್ ಇಂದು ಸಂಜೆ ಹಮೀದ್ ನನ್ನು ಹಣಕಾಸಿನ ವಿಚಾರದಲ್ಲಿ ಮಾತುಕತೆ ನಡೆಸಲು ಉಳ್ಳಾಲದ ತನ್ನ ಬಾಡಿಗೆ ಮನೆಗೆ ಕರೆಸಿಕೊಂಡಿದ್ದ. ಈ ವೇಳೆ ಹಮೀದ್ ಎದೆಯ ಭಾಗಕ್ಕೆ ಜಾವೇದ್ ಚೂರಿಯಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ಹಮೀದ್ ಹೇಗೋ ತಪ್ಪಿಸಿಕೊಂಡು ಉಳ್ಳಾಲದ ಖಾಸಗಿ ಆಸ್ಪತ್ರೆಗೆ ಹೋಗಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ. ಹಮೀದ್ ಬಾಡಿಗೆ ಮನೆಯಿಂದ ತಪ್ಪಿಸಿ ಓಡಿದ ರಭಸಕ್ಕೆ ರಸ್ತೆಯಲ್ಲೆಲ್ಲಾ ರಕ್ತ ಹರಿದಿದೆ. ಗಂಭೀರ ಗಾಯಗೊಂಡಿದ್ದ ಹಮೀದ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ಜಾವೇದ್ ಕೃತ್ಯವೆಸಗಿ ಪರಾರಿಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಉಳ್ಳಾಲ ಪೊಲೀಸರಿಗೆ ಒಂದು ಮೊಬೈಲ್ ಲಭಿಸಿದೆ. ಜಾವೇದ್ ಒಬ್ಬನೇ ಕೃತ್ಯದಲ್ಲಿ ಭಾಗಿಯಾಗಿದ್ದನೋ ಅಥವಾ ಬೇರೆಯವರು ಪಾಲ್ಗೊಂಡಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಣಕಾಸಿನ ಲೇವಾದೇವಿ ವಿಚಾರದಲ್ಲೇ ಇಬ್ಬರ ನಡುವೆ ವೈಷಮ್ಯ ಬೆಳೆದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪರಾರಿಯಾಗಿರುವ ಜಾವೇದ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಹಮೀದ್ ಮನೆಯಲ್ಲಿ ಜೋಡಿ ಕೊಲೆ ನಡೆದಿತ್ತು!
ಪಂಜಿಮೊಗರಿನಲ್ಲಿ 2011ರ ಜೂನ್ 28ರಂದು ಹಮೀದ್ ಪತ್ನಿ ರಝಿಯಾ(35) ಮತ್ತು ಆಕೆಯ ಪುಟ್ಟ ಮಗು ಫಾತಿಮಾ ಜುವಾ(8)ರನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿತ್ತು. ಕರಾವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಈ ಡಬಲ್ ಮರ್ಡರ್, ಹತ್ಯೆ ಆರೋಪಿಗಳು 13 ವರ್ಷಗಳಾದರೂ ಪತ್ತೆಯಾಗಿಲ್ಲ. ಸ್ಥಳೀಯ ಪೊಲೀಸರ ಜೊತೆ ಸಿಐಡಿ ತನಿಖೆ ನಡೆದರೂ ಹಂತಕರು ಸಿಕ್ಕಿರಲಿಲ್ಲ.
Murder attempt at Ullal in Mangalore, miscreants flee. Scrap dealer was attacked. He was called over some financial settlement matter to ullal. Hamid is a resident of tannirbavi.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
28-09-26 09:33 pm
HK News Staffer
30 ನಿಮಿಷದಲ್ಲಿ 3 ಸಾವಿರಕ್ಕೂ ಹೆಚ್ಚು ಬಾರಿ ಮುಂಗೈ ಸ...
28-09-26 08:33 pm
ದಸರಾಗೆ ಕಾನ್ವೆಂಟ್ ಸ್ಕೂಲ್ ಗಳಲ್ಲಿ ರಜೆ ಯಾಕಿಲ್ಲ, ರ...
28-09-26 08:29 pm
ಅಬ್ದುಲ್ ರೆಹಮಾನ್ ಕೊಲೆಯಾಗಿದ್ದು ವೈಯುಕ್ತಿಕ ಕಾರಣಗಳ...
28-09-26 02:13 pm
ಸೌಜನ್ಯಾ ಪ್ರಕರಣದ ಎಸ್ಐಟಿ ಬಗ್ಗೆ ಆರೆಸ್ಸೆಸ್ ಮುಖಂಡ...
28-09-26 02:10 pm
28-09-26 03:08 pm
HK News Staffer
ಹೆಲ್ಮೆಟ್ ರಹಿತ ಚಾಲನೆಯಿಂದ ಹೆಚ್ಚುತ್ತಿರುವ ಸಾವು- ನ...
27-09-26 08:06 pm
Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ...
27-09-26 06:10 pm
ಶಾರ್ಜಾದಲ್ಲಿ ಹತ್ಯೆಯಾದ ಕುಂದಾಪುರದ ವ್ಯಕ್ತಿಯ ಶವ ಹು...
25-09-26 04:53 pm
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am