ಬ್ರೇಕಿಂಗ್ ನ್ಯೂಸ್
09-04-24 03:39 pm Mangalore Correspondent ಕ್ರೈಂ
ಮಂಗಳೂರು, ಎ.9: ಪತ್ನಿಯನ್ನು ಕೊಲೆಗೈದ ಪತಿಯ ಮೇಲಿನ ಆರೋಪ ಸಾಬೀತಾಗಿದ್ದು ಅಪರಾಧಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ಹಾಗೂ ₹ 1.50 ಲಕ್ಷ ದಂಡ ವಿಧಿಸಿ ತೀರ್ಪಿತ್ತಿದೆ.
ಕಾವೂರಿನ ಗಣೇಶ್ ಕುಮಾರ್ (46) ಶಿಕ್ಷೆಗೆ ಒಳಗಾದ ಅಪರಾಧಿ. ಕಾವೂರಿನ ಬಾಡಿಗೆ ಮನೆಯಲ್ಲಿ ಪತ್ನಿ ಶಾಂತಾ ಹಾಗೂ ತನ್ನ ಇಬ್ಬರು ಮಕ್ಕಳ ಜೊತೆ ಗಣೇಶ್ ವಾಸವಿದ್ದ. ಪತ್ನಿ ಜೊತೆ ನಿತ್ಯವೂ ಗಲಾಟೆ ಮಾಡುತ್ತಿದ್ದ. ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದುದಲ್ಲದೇ ಜೀವ ಬೆದರಿಕೆ ಒಡ್ಡುತ್ತಿದ್ದ. 2020ರ ಜುಲೈ 1ರಂದು ಸಂಜೆ 5.30ರ ಸುಮಾರಿಗೆ ಮನೆಗೆ ಸಾಮಾನು ತರುವ ನೆಪದಲ್ಲಿ ಪತ್ನಿಯನ್ನು ದ್ವಿಚಕ್ರ ವಾಹನದಲ್ಲಿ ಹೊರಗಡೆ ಕರೆದೊಯ್ದಿದ್ದ. ಅಂತೋನಿ ಕಟ್ಟೆ ಎಂಬಲ್ಲಿ ಪತ್ನಿಯನ್ನ, ಕುತ್ತಿಗೆ ಹಿಸುಕಿ, ಕಪ್ಪು ಕಲ್ಲಿನ ಕ್ವಾರಿಗೆ ದೂಡಿ ಕೊಲೆ ಮಾಡಿದ್ದ. ಕೃತ್ಯದ ಬಗ್ಗೆ ದೂರು ನೀಡಿದ್ದ ಲೀಲಾವತಿ ಎಂಬುವರಿಗೂ ಜೀವ ಬೆದರಿಕೆ ಒಡ್ಡಿದ್ದ. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ರಾಘವ ಎಸ್. ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.
ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ ಪ್ರಕರಣದ ವಿಚಾರಣೆ ನಡೆಸಿದ್ದು ಕೊಲೆ ಆರೋಪ ಸಾಬೀತಾಗಿದ್ದರಿಂದ ಕಠಿಣ ಜೀವಾವಧಿ ಶಿಕ್ಷೆ ಮತ್ತು₹ 1 ಲಕ್ಷ ದಂಡ, ಪತ್ನಿಗೆ ಹಿಂಸೆ ನೀಡಿದ್ದಕ್ಕೆ 3 ವರ್ಷ ಕಠಿಣ ಶಿಕ್ಷೆ ಮತ್ತು ₹25 ಸಾವಿರ ದಂಡ, ಜೀವ ಬೆದರಿಕೆ ಒಡ್ಡಿದ್ದಕ್ಕೆ 2 ವರ್ಷ ಕಠಿಣ ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಸಂತ್ರಸ್ತರಾಗಿರುವ ದಂಪತಿಯ ಇಬ್ಬರು ಮಕ್ಕಳಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಧೀಶರು ಶಿಫಾರಸು ಮಾಡಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ವಕೀಲರಾದ ಜ್ಯೋತಿ ಪ್ರಮೋದ ನಾಯಕ ಮತ್ತು ಬಿ.ಶೇಖರ ಶೆಟ್ಟಿ ಹಾಗೂ ಚೌಧರಿ ಮೋತಿಲಾಲ ಅವರು ಸಂತ್ರಸ್ತರ ಪರ ವಾದ ಮಂಡಿಸಿದ್ದರು.
The VI Additional District and Sessions Judge, Kantharaju S.V, on Monday, sentenced a man to life imprisonment for murdering his wife. The convict is Ganesh Kumar, 46, from Kavoor. Public prosecutor Choudhari Motilal said that the accused had murdered his wife, Shantha, by strangulating her neck and later pushing her into a quarry pit at Antony Katte on July 1, 2020. It is said that the couple used to have regular arguments.
11-01-25 10:53 pm
HK News Desk
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
BBMP Raid, Lokayukta; ಬಿಬಿಎಂಪಿ 50 ಕಡೆಗಳಲ್ಲಿ ಲ...
11-01-25 09:14 pm
CT Ravi,Threat, Lakshmi Hebbalkar; ಬೆಳಗಾವಿ ಅಭ...
11-01-25 02:11 pm
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
12-01-25 05:07 pm
HK News Desk
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
12-01-25 11:03 pm
Mangalore Correspondent
PLD bank election, MLA Ashok Rai, Puttur: ಪಿಎ...
12-01-25 10:06 pm
Hardeep Singh Puri, Brijesh Chowta, Mangalore...
12-01-25 12:33 pm
CM Siddaramaiah, Kambala Mangalore, Naringana...
11-01-25 10:34 pm
Mangalore Lit Fest 2025, Hardeep Singh Puri;...
11-01-25 07:19 pm
11-01-25 10:21 pm
Mangalore Correspondent
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm