ಸುಶಾಂತ್ ಸಿಂಗ್ ಪ್ರಕರಣ; "ನೀವು ಯಾರು?' CBI ತನಿಖೆ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್ ತರಾಟೆ

07-08-20 10:24 am       Headline Karnataka News Network   ಕ್ರೈಂ

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಆಗ್ರಹಿಸಿ ಕಾನೂನು ವಿದ್ಯಾರ್ಥಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ದೆಹಲಿ, ಆಗಸ್ಟ್ 7: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಆಗ್ರಹಿಸಿ ಕಾನೂನು ವಿದ್ಯಾರ್ಥಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಸುಶಾಂತ್ ಆತ್ಮಹತ್ಯೆಯಲ್ಲ, ಕೊಲೆಯಾಗಿರುವ ಸಾಧ್ಯತೆ ಇದೆ. ದಯವಿಟ್ಟು ಈ ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎ ತನಿಖೆ ಮಾಡಲು ಅನುಮತಿ ನೀಡಿ ಎಂದು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಇಂದು ವಿಚಾರಣೆಗೆ ತೆಗೆದುಕೊಂಡಿದ್ದ ಸುಪ್ರೀಂಕೋರ್ಟ್, ಕಾನೂನು ವಿದ್ಯಾರ್ಥಿಯನ್ನು ತರಾಟೆಗೆ ತೆಗೆದುಕೊಂಡಿದೆ.

"ನೀವು ಯಾರು? ನೀವು ಈ ಪ್ರಕರಣದಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದೀರಿ. ಸಂತ್ರಸ್ತೆಯ ತಂದೆ ಪ್ರಕರಣವನ್ನು ಮುಂದುವರಿಸುತ್ತಿದ್ದಾರೆ. ನಿಮ್ಮ ಅರ್ಜಿಯನ್ನು ನಾವು ವಜಾಗೊಳಿಸುತ್ತಿದ್ದೇವೆ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಅಂದ್ಹಾಗೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣವನ್ನು ಈಗಾಗಲೇ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ವಹಿಸಿದೆ. ಬಿಹಾರ ಸರ್ಕಾರದ ಶಿಫಾರಸಿನ ಆಧಾರದ ಮೇಲೆ ಕೇಂದ್ರ ಸರ್ಕಾರ ಸಿಬಿಐಗೆ ನೀಡಿದೆ. ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಸಹ ಮನಿ ಲ್ಯಾಂಡರಿಂಗ್ ಕೇಸ್ ದಾಖಲಿಸಿಕೊಂಡಿದೆ.