ಬ್ರೇಕಿಂಗ್ ನ್ಯೂಸ್
13-04-24 11:46 am HK NEWS ಕ್ರೈಂ
ಬೆಂಗಳೂರು, ಎ.13: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗಿರುವ ಇಬ್ಬರು ಪ್ರಮುಖ ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ.
ಕೋಲ್ಕತ್ತಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಅಬ್ದುಲ್ ಮತೀನ್ ತಾಹ ಮತ್ತು ಮುಸಾವಿರ್ ಹುಸೇನ್ ಅವರನ್ನು ಎನ್‌ಐಎ ಪೊಲೀಸರು ಕರೆತಂದಿದ್ದಾರೆ. ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿ, ಕಸ್ಟಡಿಗೆ ಪಡೆಯಲಿದ್ದು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ.
ಮಾಝ್ ವಿಚಾರಣೆಯಲ್ಲಿ ಸಿಕ್ಕಿತ್ತು ಸುಳಿವು ;
ಶಿವಮೊಗ್ಗ ಜಿಲ್ಲೆಯ ತುಂಗಾ ನದಿ ತೀರದಲ್ಲಿ ಬಾಂಬ್ ಟ್ರಯಲ್ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಜೈಲು ಸೇರಿರುವ ಮಾಝ್ ಮುನೀರ್‌ನನ್ನು ಎನ್‌ಐಎ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿತ್ತು. ಮುನೀರ್ ಇದ್ದ ಜೈಲಿನ ಸೆಲ್ ತಪಾಸಣೆ ನಡೆಸಿದಾಗ ಮೆಮರಿ ಕಾರ್ಡ್ ಪತ್ತೆಯಾಗಿತ್ತು. ಮೆಮೋರಿ ಕಾರ್ಡ್ ಪರಿಶೀಲಿಸಿದಾಗ ಹಲವು ಕೋಡ್ ವರ್ಡ್ ಗಳು ಸಿಕ್ಕಿದ್ದವು. ಕೋಡ್ ವರ್ಡ್ ಗಳನ್ನು ಡಿಕೋಡ್ ಮಾಡಿದಾಗ ಆರೋಪಿಗಳ ಮಾಹಿತಿ ಸಿಗತೊಡಗಿತ್ತು ಎಂದು ಎನ್‌ಐಎ ಮೂಲಗಳು ತಿಳಿಸಿವೆ.
ಮಾಹಿತಿ ಆಧರಿಸಿ ತನಿಖೆ ನಡೆಸಿದಾಗ ಆರೋಪಿಗಳು ಪಶ್ಚಿಮ ಬಂಗಾಳದಲ್ಲಿ ತಲೆಮರೆಸಿಕೊಂಡಿದ್ದ ವಿಚಾರ ತಿಳಿದುಬಂದಿತ್ತು. ಅದೇ ಸುಳಿವಿನಲ್ಲಿ ಕಾರ್ಯಾಚರಣೆ ನಡೆಸಿದಾಗ, ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ನಕಲಿ ಐಡಿಯಲ್ಲಿ ಅಡಗಿಕೊಂಡಿದ್ದ ಇಬ್ಬರನ್ನು ಬಂಧಿಸಿದೆ. ಮುನೀರ್ ಜೈಲಿನಲ್ಲಿ ಕುಳಿತೇ ಕೋಡ್ ವರ್ಡ್ ಗಳನ್ನು ಬರೆದು ಪರಾರಿಯಾಗಲು ಸೂಚನೆಗಳನ್ಹು ನೀಡುತ್ತಿದ್ದ.
ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿದ್ದ ಮಾಝ್ ಮುನೀರ್‌ನನ್ನು ಎನ್‌ಐಎ ಅಧಿಕಾರಿಗಳು 7 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಜೈಲಿನಲ್ಲಿ ರೇಡ್ ಮಾಡಿದ ಬಳಿಕ ಮಾಝ್ ಬ್ಯಾರಕ್‌ನಲ್ಲಿ ಕೆಲವೊಂದು ಪತ್ರಗಳು ಸಿಕ್ಕಿದ್ದವು. ಅವುಗಳು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದ ಹಿನ್ನೆಲೆಯಲ್ಲಿ ಕೆಫೆ ಸ್ಫೋಟ ಪ್ರಕರಣದಲ್ಲಿ ಮಾಝ್ ಮುನೀರ್ ಸೂತ್ರಧಾರನಾಗಿದ್ದು ಆತನನ್ನೇ ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ.
ಮಂಗಳೂರಿನ ಗೋಡೆ ಬರಹ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಾಝ್ ಮುನೀರ್, ಅಂದು ಮಂಗಳೂರಿನ ಮುಡಿಪು ಸಮಿಪದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಟೆಕ್ ಓದುತ್ತಿದ್ದಾಗಲೇ ಬಂಧಿಸಲಾಗಿತ್ತು. ಆನಂತರ, ಶಿವಮೊಗ್ಗ ಐಸಿಸ್ ಮಾಡ್ಯೂಲ್ ನಲ್ಲಿ ಈತನೂ ಒಬ್ಬನೆಂದು ಗುರುತಿಸಲಾಗಿತ್ತು. ಇದಲ್ಲದೆ, ಪ್ರಮುಖ ಆರೋಪಿ ಮುಸ್ಸಾವಿರ್ ಹುಸೇನ್ ಶಜೀಬ್, ನಕಲಿ ಐಡಿ ಇಟ್ಟುಕೊಂಡಿರುವುದು, ಮೊಹಮ್ಮದ್ ಜುನೈದ್ ಸಯ್ಯದ್ ಹೆಸರಿನಲ್ಲಿ ಡ್ರೈವಿಂಗ್ ಲೈಸೆನ್ಸ್ ಹೊಂದಿರುವುದನ್ನು ಎನ್ಐಎ ಪತ್ತೆ ಮಾಡಿತ್ತು. ಅಬ್ದುಲ್ ಮತೀನ್ ತಲೆ ಬೋಳಾಗಿದ್ದು, ಹೆಚ್ಚಾಗಿ ಕ್ಯಾಪ್ ಧರಿಸುತ್ತಾನೆ. ಆತನದ್ದೇ ಕ್ಯಾಪ್ ಅನ್ನು ಕೆಫೆಯಲ್ಲಿ ಬಾಂಬ್ ಇಡಲು ಬಂದಿದ್ದಾಗ ಮುಸಾವಿರ್ ಬಳಸಿದ್ದ. 30 ವರ್ಷದ ಮತೀನ್ ತನ್ನ ಹೆಸರನ್ನು ವಿಘ್ನೇಶ್, ಸುಮಿತ್ ಅಥವಾ ಬೇರೆ ಹಿಂದೂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಐಡಿ ದಾಖಲೆಯನ್ನು ಹೊಂದಿದ್ದಾನೆ. ನಕಲಿ ಐಡಿಯಲ್ಲೇ ತಿರುಗಾಡುತ್ತಿದ್ದಾನೆ ಎಂದು ಈ ಹಿಂದೆ ಎನ್‌ಐಎ ತಿಳಿಸಿತ್ತು.
Two prime accused in the Rameshwaram Cafe blast case were brought to the city by the NIA from Kolkata on transit remand, police sources said on April 13. Both will be taken for a routine medical test, after which they will be produced before the National Investigation Agency (NIA) court in Bengaluru. A court in Kolkata granted a three-day transit remand to the two accused in the blast case, allowing the NIA to take them to the Karnataka capital on April 12.
11-01-25 10:53 pm
HK News Desk
ಕೊಪ್ಪದ ಮೇಗೂರು ಅರಣ್ಯದಲ್ಲಿ ಶರಣಾಗಿದ್ದ ನಕ್ಸಲರ ಶಸ...
11-01-25 10:27 pm
BBMP Raid, Lokayukta; ಬಿಬಿಎಂಪಿ 50 ಕಡೆಗಳಲ್ಲಿ ಲ...
11-01-25 09:14 pm
CT Ravi,Threat, Lakshmi Hebbalkar; ಬೆಳಗಾವಿ ಅಭ...
11-01-25 02:11 pm
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
12-01-25 05:07 pm
HK News Desk
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
12-01-25 11:03 pm
Mangalore Correspondent
PLD bank election, MLA Ashok Rai, Puttur: ಪಿಎ...
12-01-25 10:06 pm
Hardeep Singh Puri, Brijesh Chowta, Mangalore...
12-01-25 12:33 pm
CM Siddaramaiah, Kambala Mangalore, Naringana...
11-01-25 10:34 pm
Mangalore Lit Fest 2025, Hardeep Singh Puri;...
11-01-25 07:19 pm
11-01-25 10:21 pm
Mangalore Correspondent
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm