ಬ್ರೇಕಿಂಗ್ ನ್ಯೂಸ್
14-04-24 03:47 pm HK NEWS ಕ್ರೈಂ
ಮುಂಬೈ, ಎ.14: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಆವರಣಕ್ಕೆ ಎರಡು ಬೈಕಿನಲ್ಲಿ ಬಂದಿದ್ದ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಯಾರಿಗೂ ಗಾಯ ಆಗಿಲ್ಲ.
ನಸುಕಿನ 4.50ರ ವೇಳೆಗೆ ಘಟನೆ ನಡೆದಿದ್ದು, ಈ ಸಂದರ್ಭದಲ್ಲಿ ಸಲ್ಮಾನ್ ಖಾನ್ ಅದೇ ಅಪಾರ್ಟ್ಮೆಂಟ್ ನಲ್ಲಿ ಇದ್ದರು. ಆಗಂತುಕರು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಈ ಹಿಂದೆ ಸಲ್ಮಾನ್ ಹತ್ಯೆ ಮಾಡುತ್ತೇನೆ ಎಂದಿದ್ದ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಸೋದರ ಅನ್ಮೋಲ್ ಬಿಷ್ಣೋಯಿ ಈ ದಾಳಿಯ ಹೊಣೆ ಹೊತ್ತುಕೊಂಡಿದ್ದಾನೆ. ಅನ್ಮೋಲ್ ಸದ್ಯಕ್ಕೆ ಅಮೆರಿಕದಲ್ಲಿ ವಾಸವಿದ್ದಾನೆ.

ಘಟನೆ ಹಿನ್ನೆಲೆಯಲ್ಲಿ ಸಲ್ಮಾನ್ ಅವರಿದ್ದ ನಿವಾಸಕ್ಕೆ ಪೊಲೀಸರ ಭದ್ರತೆ ಹೆಚ್ಚಿಸಲಾಗಿದೆ. ಸ್ಥಳಕ್ಕೆ ಕ್ರೈಮ್ ಬ್ರಾಂಚ್ ಮತ್ತು ಫಾರೆನ್ಸಿಕ್ ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ತನಿಖೆಗೆ 15 ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಕೆನಡಾದಲ್ಲಿ ಅಡಗಿದ್ದ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಮತ್ತು ಲಾರೆನ್ಸ್ ಬಿಷ್ಣೋಯಿ ಅವರು ಈ ಹಿಂದೆ ಸಲ್ಮಾನ್ ಖಾನ್ ಕೊಲ್ಲುವುದಕ್ಕೆ ತಮ್ಮ ಶೂಟರ್ ಗಳನ್ನು ಮುಂಬೈಗೆ ಕಳಿಸಿದ್ದೇವೆ ಎಂದಿದ್ದರು. ಆನಂತರ, ಲಾರೆನ್ಸ್ ಬಿಷ್ಣೋಯಿ ಅವರನ್ನು ಪಂಜಾಬಿನಲ್ಲಿ ನಡೆದಿದ್ದ ಕೊಲೆ ಪ್ರಕರಣ ಒಂದರಲ್ಲಿ ಬಂಧಿಸಲಾಗಿತ್ತು.
ಜೀವ ಬೆದರಿಕೆ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ನಿವಾಸದಲ್ಲಿ ಮೂರು ಶಿಫ್ಟ್ ನಲ್ಲಿ ಪೊಲೀಸರನ್ನು ಕಾವಲಿಗೆ ನಿಯೋಜನೆ ಮಾಡಲಾಗಿದೆ. ಅಲ್ಲದೆ, ಸಲ್ಮಾನ್ ಖಾನ್ ಗೆ ಸ್ವತಃ ಪರವಾನಗಿ ಇರುವ ಪಿಸ್ತೂಲ್ ಒದಗಿಸಲಾಗಿತ್ತು. ಜೊತೆಗೆ ತಿರುಗಾಟದ ಸಂದರ್ಭದಲ್ಲಿಯೂ ಪೊಲೀಸರು ಕಾವಲಿಗೆ ಜೊತೆಗಿರುತ್ತಾರೆ. ಆದರೂ ನಸುಕಿನ ವೇಳೆಯಲ್ಲಿ ಎರಡು ಬೈಕಿನಲ್ಲಿ ಬಂದಿದ್ದವರು ಬೆದರಿಕೆ ಯತ್ನವಾಗಿ ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಬೈಕಿನಲ್ಲಿ ಬಂದಿದ್ದ ಆಗಂತುಕರು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Gunshots were heard outside Bollywood actor Salman Khan's Mumbai residence early this morning, police said. At 5 am today, two unidentified men on a motorcycle fired five rounds in the air outside Mr Khan's home, in Bandra, and sped away from the scene.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm