ಬ್ರೇಕಿಂಗ್ ನ್ಯೂಸ್
19-04-24 03:43 pm HK News Desk ಕ್ರೈಂ
ಹುಬ್ಬಳಿ, ಏ.19: ಹುಬ್ಬಳ್ಳಿಯ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಖಂಡಿಸಿ ಹಂತಕನ ತವರೂರು ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ಪ್ರತಿಭಟನೆ ಜೋರಾಗಿದ್ದು, ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ಮುನವಳ್ಳಿ ಸಂಪೂರ್ಣ ಬಂದ್ ಆಗಿದೆ.
ಹಂತಕ ಫಯಾಜ್ ನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಹಿಂದೂ ಸಂಘಟನೆಗಳು, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರೆ, ಈ ಪ್ರತಿಭಟನೆಗೆ ಮುಸ್ಲಿಂ ಸಮಾಜ ಬಾಂಧವರೂ ಸಾಥ್ ನೀಡಿ, ಹಂತಕನಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಮುನವಳ್ಳಿ-ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಯವರು, ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಾದ್ಯಂತ ಕೃತ್ಯ ಖಂಡಿಸಿ ಪ್ರತಿಭಟನೆ ನಡೆಯುತ್ತಿವೆ. ಸ್ಥಳಕ್ಕೆ ಪ್ಯಾರಾ ಮಿಲಿಟರಿ ಸೇರಿದಂತೆ ವಿವಿಧ ಪೊಲೀಸ್ ಪಡೆ ಗಳನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.
ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಕೊಲೆಗೆ ಹುಬ್ಬಳ್ಳಿ ನಗರ ಬೆಚ್ಚಿ ಬಿದ್ದಿದೆ. ಆರೋಪಿ ಫಯಾಜ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿ ಫಯಾಜ್ ಯುವತಯನ್ನು ಕೊಲೆ ಮಾಡಿದ್ದೇಕೆ ಎಂಬುದರ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಿಮ್ಸ್ ಆಸ್ಪತ್ರೆಗೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿದ್ದು, ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕೊಲೆ ಆರೋಪಿಯ ವಿರುದ್ಧ ಕುಟುಂಬಸ್ಥರ ಆಕ್ರೋಶ ಹೊರಹಾಕಿದ್ದಾರೆ.
ನಮ್ಮ ಮಗಳಿಗೆ ಹೀಗಾದ್ರೆ ಸಾರ್ವಜನಿಕರ ಸ್ಥಿತಿ ಏನಾಗಬೇಕು?
ನಾವು ಊರೆಲ್ಲಾ ತಿರುಗಾಡುತ್ತಾ ಜನಸೇವೆ ಮಾಡಿಕೊಂಡು ಇರುತ್ತೇವೆ. ನಮ್ಮ ಮಗಳಿಗೆ ಹೀಗಾದ್ರೆ ಸಾರ್ವಜನಿಕರ ಸ್ಥಿತಿ ಏನಾಗಬೇಕು? ಮಕ್ಕಳನ್ನು ಕಾಲೇಜಿಗೆ ಕಳುಹಿಸಲು ಪೋಷಕರಿಗೆ ಭಯ ಆಗುತ್ತೆ ಅಲ್ಲವಾ? ನಮ್ಮ ಕೆಟ್ಟ ಗಳಿಗೆ ನಮ್ಮ ಮಗಳು ಹೋದಳು. ಇರೋ ಒಬ್ಬಳು ಮಗಳು, ನಮ್ಮ ಶ್ರೀಮತಿಗೆ ನಾನು ಹೇಗೆ ಸಾಂತ್ವಾನ ಹೇಳಲಿ. ಪೊಲೀಸರು ಮತ್ತು ಕಾಲೇಜು ಆಡಳಿತ ಮಂಡಳಿ ಈ ಬಗ್ಗೆ ಮುಂಜಾಗ್ರತ ಕ್ರಮ ತೆಗೆದುಕೊಳ್ಳಬೇಕು ಎಂದು ನೇಹಾ ತಂದೆ ಆಗ್ರಹಿಸಿದರು.
Hubballi student neha murder, Hindu groups, congress bjp stage protest, muslim community demands death sentence. Neha Hiremath, the daughter of Congress HDMC corporator Niranjan Hiremath was laid to rest a day after she was brutally stabbed by Mohammed Fayaz on the BVB College campus on Thursday. Fayaz had stabbed nine times and fled the scene, as Neha bled to death, on Thursday.
18-07-25 08:01 pm
HK News Desk
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
Mangalore South ACP Vijayakranti: ಮಂಗಳೂರು ದಕ್...
18-07-25 03:38 pm
Minister Dinesh Gundu Rao, Dharmasthala: ಧರ್ಮ...
17-07-25 07:45 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm