ಬ್ರೇಕಿಂಗ್ ನ್ಯೂಸ್
25-04-24 12:19 pm Bangalore Correspondent ಕ್ರೈಂ
ಬೆಂಗಳೂರು, ಏ.25: ಲೋಕಸಭೆ ಚುನಾವಣೆಗೂ ಮುನ್ನ ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, 23 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನ ಕಿಡ್ನ್ಯಾಪ್ ಮಾಡಿ ನಿರ್ಜನ ಪ್ರದೇಶದಲ್ಲಿ ಐವರು ಕಾಮುಕರು ಅತ್ಯಾಚಾರವೆಸಗಿದ್ದಾರೆ.
23 ವರ್ಷದ ಯುವತಿ ಮೇಲೆ ಎರಗಿ ಅತ್ಯಾಚಾರ ಮಾಡಿ ಕ್ರೂರವಾಗಿ ಹಿಂಸೆ ನೀಡಿದ್ದಾರೆ. ಸದ್ಯ ಸಂತ್ರಸ್ತೆ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಹೈಗ್ರೌಂಡ್ಸ್ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ತನಿಖೆಯನ್ನ ನಡೆಸಲಾಗುತ್ತಿದೆ.
6 ವರ್ಷದ ಬಾಲಕಿ ಮೇಲೂ ಅತ್ಯಾಚಾರ ;
ಇನ್ನೊಂದು ಪ್ರಕರಣದಲ್ಲಿ ಕಾಮುಕನೊಬ್ಬ 6 ವರ್ಷದ ಬಾಲಕಿ ಮೇಲೆ ದೌರ್ಜನ್ಯವನ್ನ ನಡೆಸಿದ್ದಾನೆ. ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಮೇಡಹಳ್ಳಿಯಲ್ಲಿ ಪೈಶಾಚಿಕ ಕೃತ್ಯ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಮಮಜನ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸಂತ್ರಸ್ತ ಬಾಲಕಿ ಕುಟುಂಬ ಹಾಗೂ ಆರೋಪಿ ಒಂದೇ ಏರಿಯಾದಲ್ಲಿ ವಾಸವಾಗಿದ್ದರು. ಬಾಲಕಿ ತಂದೆ ಹಾಲು ತರಲು ಹೊರಗೆ ಹೋಗಿದ್ದರು. ಈ ವೇಳೆ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಳು. ಯಾರು ಇಲ್ಲದಿರುವುದು ತಿಳಿಯುತ್ತಿದ್ದಂತೆ ದುಷ್ಟ ಮಮಜನ್ ಮನೆಯೊಳಗೆ ನುಗ್ಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ಪೋಷಕರು ಮನೆಗೆ ವಾಪಸ್ ಬಂದಾಗ ಕಾಮುಕನ ಪೈಶಾಚಿಕ ಕೃತ್ಯದಿಂದ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಕಂಡು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಗ ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ಸಂತ್ರಸ್ತೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೋಕ್ಸೋ ಪ್ರಕರಣವನ್ನು ದಾಖಲಿಸಿಕೊಂಡಿರುವ ಕೆ.ಆರ್. ಪುರಂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
Ahead of the Lok Sabha elections, a 23-year-old woman was allegedly abducted and gang-raped in bengaluru.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
24-01-26 11:18 pm
Mangaluru Staffer
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm