ಪತ್ನಿಗೆ ಅಡುಗೆ ಮಾಡಲು ಬರದ್ದಕ್ಕೆ ನವವಿವಾಹಿತ ನೇಣಿಗೆ ಶರಣು

07-08-20 10:45 am       Headline Karnataka News Network   ಕ್ರೈಂ

ಪತ್ನಿಗೆ ಸರಿಯಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ನವ ವಿವಾಹಿತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.

ಬಳ್ಳಾರಿ: ಪತ್ನಿಗೆ ಸರಿಯಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ನವ ವಿವಾಹಿತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.

ಹುರುಳಿಹಾಳ್ ಗ್ರಾಮದ ನಿವಾಸಿ ಶರಣೇಶ್ (29) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ. ಮೃತ ಶರಣೇಶ್ ನಾಲ್ಕು ತಿಂಗಳ ಹಿಂದೆಯಷ್ಟೆ ಕುಟುಂಬದವರು ನಿಶ್ಚಯಿಸಿದ್ದ ಯುವತಿಯೊಂದಿಗೆ ವಿವಾಹವಾಗಿದ್ದನು. ಪತ್ನಿಗೆ ಗಂಡನ ಮನೆಗೆ ಬಂದಾಗಿನಿಂದಲೂ ಸರಿಯಾಗಿ ಅಡುಗೆ ಮಾಡಲು ಬರುತ್ತಿರಲಿಲ್ಲ. ಹೀಗಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು.

ಇದರಿಂದ ಮನನೊಂದ ಶರಣೇಶ್ ಗ್ರಾಮದ ಹೊರವಲಯದಲ್ಲಿರುವ ಹೊಲಕ್ಕೆ ಹೋಗಿದ್ದು, ಅಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮೃತನ ಪತ್ನಿ ಲಿಖಿತ ದೂರಿನ ಮೂಲಕ ಪೊಲೀಸರಿಗೆ ತಿಳಿಸಿದ್ದಾಳೆ.

ಈ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.